ಮಾಜಿ ಅಥ್ಲೀಟ್ ಪಿ.ಟಿ ಉಷಾ ವಿರುದ್ಧ 420 ಕೇಸ್ ದಾಖಲು

ತಿರುವನಂತಪುರಂ, ಡಿಸೆಂಬರ್ 19: 'ಪಯ್ಯೋಲಿ ಎಕ್ಸ್‌ಪ್ರೆಸ್' ಖ್ಯಾತಿಯ ಭಾರತದ ಮಾಜಿ ಅಥ್ಲೀಟ್ ಹಾಗೂ ಒಲಿಂಪಿಯನ್ ಪಿ.ಟಿ. ಉಷಾ ವಿರುದ್ಧ ಕೇರಳ ಪೊಲೀಸರು ವಂಚನೆ ಪ್ರಕರಣ ದಾಖಲಿಸಿದ್ದಾರೆ.

ಕೇರಳದ ಕೋಯಿಕ್ಕೋಡ್ ಪೊಲೀಸರು ಭಾರತದ 'ಚಿನ್ನದ ಹುಡುಗಿ' ಪಿ.ಟಿ ಉಷಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಾಜಿ ಅಥ್ಲೀಟ್ ಜೆಮ್ಮಾ ಜೋಸೆಫ್ ಅವರು ಸಲ್ಲಿಸಿದ ದೂರಿನ ಆಧಾರದ ಮೇಲೆ ಉಷಾ ಮತ್ತು ಇತರ ಆರು ಮಂದಿ ಐಪಿಸಿ 420 (ವಂಚನೆ ಮತ್ತು ಅಪ್ರಾಮಾಣಿಕತೆ) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಎಎನ್‌ಎಸ್‌ನೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗಿರುವುದನ್ನು ಖಚಿತಪಡಿಸಿದ್ದಾರೆ.

"ಕೋಯಿಕ್ಕೋಡ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಿಗೆ ಜೋಸೆಫ್ ಅವರು ನೀಡಿದ ದೂರಿನ ಆಧಾರದ ಮೇಲೆ ಕ್ರಮ ಜರುಗಿಸಲಾಗಿದೆ. ಶುಕ್ರವಾರ ಪ್ರಕರಣ ದಾಖಲಾಗಿದ್ದು, ಶೀಘ್ರವೇ ತನಿಖೆ ಆರಂಭವಾಗಲಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

Kerala Police register cheating case against P.T. Usha

ಹೊಸ ಅಪಾರ್ಟ್ಮೆಂಟ್ ಹೊಂದುವ ನಿರೀಕ್ಷೆಯಲ್ಲಿ ಜೆಮ್ಮಾ ಜೋಸೆಫ್ ಅವರು 46 ಲಕ್ಷ ರೂ.ಗಳನ್ನು ಉಷಾಗೆ ಪಾವತಿಸಿದ್ದಾರೆ. ಆದರೆ, ನಿಗದಿತ ಸಮಯದಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳಿಸುವುದಾಗಿ ಉಷಾ ನೀಡಿದ್ದ ಭರವಸೆ ಹುಸಿಯಾಗಿದೆ ಎಂದು ಜೋಸೆಫ್ ದೂರಿನಲ್ಲಿ ವಿವರಿಸಿದ್ದಾರೆ.

ಇತ್ತೀಚೆಗೆ ಅಸ್ತಿತ್ವಕ್ಕೆ ಬಂದಿರುವ ಬಿಲ್ಡರ್‌ಗಳ ಮೇಲೆ ನಿಗಾ ಇಡುವ ನಿಯಂತ್ರಕ ಸಂಸ್ಥೆ ಕೇರಳ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವನ್ನು ದೂರುದಾರರು ಸಂಪರ್ಕಿಸಿದ್ದಾರೆ.

Recommended Video

      ಕೊಹ್ಲಿ-ದ್ರಾವಿಡ್ ಇಬ್ಬರ ಮಧ್ಯೆ ಫುಟ್​ವಾಲಿ ಫೈಟ್ ಸಖತ್ ವೈರಲ್ | Oneindia Kannada

      ಭಾರತದ ಮಾಜಿ ಅಥ್ಲೀಟ್ ಪಿ.ಟಿ. ಉಷಾ ಅವರು ಬಿಜೆಪಿ ಸೇರಲು ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅನೇಕ ಕ್ಷೇತ್ರಗಳ ಸೆಲೆಬ್ರಿಟಿಗಳು ಬಿಜೆಪಿ ಸೇರಿದ್ದರು. ಆದರೆ, ಪಿ. ಟಿ ಉಷಾ ಸುದ್ದಿಯನ್ನು ಅಲ್ಲಗೆಳೆದಿದ್ದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+