Glenn Maxwell: ಪಂದ್ಯ ಗೆಲ್ಲಬೇಕು ಅಂದ್ರೆ ಮೊದಲು ಮ್ಯಾಕ್ಸ್‌ವೆಲ್‌ರನ್ನು ಹೊರಗಿಡಿ ಎಂದ ಮಾಜಿ ಕ್ರಿಕೆಟಿಗ
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಆವೃತ್ತಿಯಲ್ಲಿ ಅತ್ಯುತ್ತಮ ಆರಂಭ ಪಡೆದ ಪಂಜಾಬ್ ಕಿಂಗ್ಸ್ ಈ ಬಾರಿ ಪ್ಲೇಆಫ್ ತಲುಪುವ ನೆಚ್ಚಿನ ತಂಡಗಳಲ್ಲಿ ಒಂದೆನಿಸಿಕೊಂಡಿದೆ. ಆಡಿರುವ ಆರು ಪಂದ್ಯಗಳಲ್ಲಿ 4 ಪಂದ್ಯ ಗೆದ್ದು 2 ಪಂದ್ಯಗಳಲ್ಲಿ ಸೋಲು ಕಂಡಿದೆ. ಅದರಲ್ಲೂ ಕೊನೆಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 245 ರನ್ ಗಳಿಸಿದರೂ ಸೋಲು ಕಂಡಿತು.
ಪಂಜಾಬ್ ಕಿಂಗ್ಸ್ ಮುಂದಿನ ಪಂದ್ಯದಲ್ಲಿ ಬಲಿಷ್ಠ ಕೆಕೆಆರ್ ತಂಡದ ವಿರುದ್ಧ ಸೆಣೆಸಲಿದೆ. ಕಳೆದ ಆವೃತ್ತಿಯಲ್ಲಿ ಕೆಕೆಆರ್ ತಂಡದ ನಾಯಕತ್ವ ವಹಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ ಈ ಬಾರಿ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದಾರೆ. ಕಳೆದ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಸೋಲು ಕಂಡಿರುವುದು ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ.

ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ವಿರುದ್ಧದ ಪಂದ್ಯದಲ್ಲಿ ತಂಡದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ. ಆಸ್ಟ್ರೇಲಿಯಾದ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಅವರ ಆಯ್ಕೆಯ ಬಗ್ಗೆ ಫ್ರಾಂಚೈಸಿಗೆ ಸ್ಪಷ್ಟ ಸಂದೇಶ ನೀಡಲಾಗಿದೆ. ನ್ಯೂಜಿಲೆಂಡ್‌ನ ಮಾಜಿ ಕ್ರಿಕೆಟಿಗ ಸೈಮನ್ ಡೌಲ್, ನಾಯಕ ಶ್ರೇಯಸ್ ಅಯ್ಯರ್ ಮತ್ತು ತರಬೇತುದಾರರನ್ನು ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ಮ್ಯಾಕ್ಸ್‌ವೆಲ್ ಅವರನ್ನು ಪ್ಲೇಯಿಂಗ್ ಇಲೆವೆನ್‌ನಿಂದ ಕೈಬಿಡುವಂತೆ ಒತ್ತಾಯಿಸಿದ್ದಾರೆ.
ಮ್ಯಾಕ್ಸ್‌ವೆಲ್ ನೀರಸ ಪ್ರದರ್ಶನ
ಗ್ಲೆನ್ ಮ್ಯಾಕ್ಸ್‌ವೆಲ್ ಈ ಬಾರಿ ಐಪಿಎಲ್‌ನಲ್ಲಿ ನೀರಸ ಪ್ರದರ್ಶನ ನೀಡಿದ್ದಾರೆ. ಪದೇ ಪದೇ ವಿಚಿತ್ರ ಬ್ಯಾಟಿಂಗ್ ಮಾಡಲು ಹೋಗಿ ವಿಕೆಟ್ ಒಪ್ಪಿಸುತ್ತಿದ್ದಾರೆ. ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ದೊಡ್ಡ ಮೊತ್ತ ಕಲೆಹಾಕುವ ಅವಕಾಶವಿದ್ದರೂ ಮ್ಯಾಕ್ಸ್‌ವೆಲ್ ವಿಫಲವಾದರೂ, ಬೌಲಿಂಗ್‌ನಲ್ಲೂ ಅವರು ಮ್ಯಾಜಿಕ್ ಮಾಡಲಿಲ್ಲ. ಮ್ಯಾಕ್ಸ್‌ವೆಲ್ ಕೆಲವೊಮ್ಮೆ ಒಂದು ಅಥವಾ ಎರಡು ವಿಕೆಟ್‌ಗಳನ್ನು ಪಡೆದಿದ್ದರೂ, ಆತ ಬೆಂಚ್ ಕಾಯುವುದೇ ಉತ್ತಮ ಎಂದು ಡೌಲ್ ಹೇಳಿದ್ದಾರೆ.
ಮ್ಯಾಕ್ಸ್‌ವೆಲ್ ಫಾರ್ಮ್‌ನಲ್ಲಿಲ್ಲ ಎನಿಸುತ್ತದೆ. ಈ ಸಮಯದಲ್ಲಿ ಅವರು ಔಟ್ ಆಗುತ್ತಿರುವ ರೀತಿ, ಒಬ್ಬ ತರಬೇತುದಾರನಾಗಿ ನನಗೆ ನಿರಾಸೆ ತಂದಿದೆ. ಆದ್ದರಿಂದ ಆತನನ್ನು ತಂಡದಿಂದ ಕೈಬಿಟ್ಟು ಆತನ ಬದಲಾಗಿ ಒಮರ್‌ಜೈ ಅಥವಾ ಜೋಶ್ ಇಂಗ್ಲಿಸ್ ಅವರನ್ನು ಆಡಿಸಬಹುದು ಎಂದಿದ್ದಾರೆ.
ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗ್ಯುಸನ್ ಗಾಯದ ಕಾರಣದಿಂದಾಗಿ ಮುಂದಿನ ಪಂದ್ಯಗಳಲ್ಲಿ ಆಡುವುದಿಲ್ಲ ಎನ್ನಲಾಗಿದೆ. ಕೆಕೆಆರ್ ವಿರುದ್ಧ ಪಂಜಾಬ್ ಕಿಂಗ್ಸ್ ಲಾಕಿ ಫರ್ಗುಸನ್ ಅವರಿಲ್ಲದೆ ಆಡಲಿದೆ. ಅವರ ಬದಲಾಗಿ ಒಮರ್ ಜೈ ಅಥವಾ ಜೋಸ್ ಇಂಗ್ಲಿಸ್ ಆಡುವ ಸಾಧ್ಯತೆ ಇದೆ.












Click it and Unblock the Notifications