KKR vs SRH: ಕೆಕೆಆರ್ ಗೆಲ್ಲುತ್ತದೆ ಎಂದು ₹2.07 ಕೋಟಿ ಬೆಟ್ಟಿಂಗ್ ಕಟ್ಟಿದ ಗಾಯಕ!
ಹಲವು ಗ್ರ್ಯಾಮಿ ಪ್ರಶಸ್ತಿಗಳನ್ನು ಗೆದ್ದಿರುವ ರಾಪರ್ ಡ್ರೇಕ್ ಭಾನುವಾರ ನಡೆಯಲಿರುವ ಐಪಿಎಲ್ 2024 ರ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಗೆಲ್ಲುತ್ತದೆ ಎಂದು $250,000 (ಸುಮಾರು 2.07 ಕೋಟಿ ರೂ.) ಬೆಟ್ಟಿಂಗ್ ಕಟ್ಟಿದ್ದಾರೆ.
ಕೆನಡಾದ ಗಾಯಕ, ಪ್ರಪಂಚದಲ್ಲಿ ನಡೆಯುವ ವಿವಿಧ ಕ್ರೀಡಾಕೂಟಗಳಲ್ಲಿ ಸಾಮಾನ್ಯವಾಗಿ ಬೆಟ್ಟಿಂಗ್ ಕಟ್ಟುದ್ದಾರೆ. ಕೆಕೆಆರ್ ಮೇಲೆ ಬೆಟ್ಟಿಂಗ್ ಕಟ್ಟಿರುವ ರಶೀದಿಯನ್ನು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಡ್ರೇಕ್ ಯಾವುದೇ ಕ್ರಿಕೆಟ್ ಪಂದ್ಯದ ಮೇಲೆ ಬೆಟ್ ಕಟ್ಟಿದ್ದು ಇದೇ ಮೊದಲು. ರಾಪರ್‌ನ ಬೆಟ್ಟಿಂಗ್ ದಾಖಲೆಯ ಕುರಿತು ಬಳಕೆದಾರರು ಕಾಮೆಂಟ್ ಮಾಡಿದ್ದು ಪೋಸ್ಟ್ ತ್ವರಿತವಾಗಿ ವೈರಲ್ ಆಗಿದೆ.
ಡ್ರೇಕ್ 2022 ರಲ್ಲಿ ಇಸ್ರೇಲ್ ಅಡೆಸಾನ್ಯಾ ಮತ್ತು ಅಲೆಕ್ಸ್ ಪಿರೇರಾ ನಡುವಿನ ಯುಎಫ್‌ಸಿ ಹೋರಾಟದಲ್ಲಿ $2 ಮಿಲಿಯನ್ ಹಣವನ್ನು ಕಳೆದುಕೊಂಡಿದ್ದಾರೆ.
ಗೆಲ್ಲುವ ಫೇವರಿಟ್ ಕೆಕೆಆರ್
ಕೋಲ್ಕತ್ತಾ ನೈಟ್ ರೈಡರ್ಸ್ ಲೀಗ್ ಹಂತಗಳಲ್ಲಿ 19 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಕ್ವಾಲಿಫೈಯರ್ 1 ರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಅನ್ನು ಸೋಲಿಸಿ ಐಪಿಎಲ್ 2024 ರ ಫೈನಲ್‌ಗೆ ಪ್ರವೇಶಿಸಿದೆ.
ಐಪಿಎಲ್ ಎಲಿಮಿನೇಟರ್‌ನಲ್ಲಿ ರಾಜಸ್ಥಾನ ರಾಯಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆದ್ದು ಕ್ವಾಲಿಫೈಯರ್ 2 ಹಂತಕ್ಕೆ ಪ್ರವೇಶಿಸಿತ್ತು. ಕೆಕೆಆರ್ ವಿರುದ್ಧ ಕ್ವಾಲಿಫೈಯರ್ 1 ರಲ್ಲಿ ಸೋತ ಸನ್‌ರೈಸರ್ಸ್ ಹೈದರಾಬಾದ್ ಬಳಿಕ ಚೆನ್ನೈನಲ್ಲಿ ನಡೆದ ಕ್ವಾಲಿಫೈಯರ್ 2 ರಲ್ಲಿ ಗೆದ್ದು ಫೈನಲ್‌ಗೆ ಪ್ರವೇಶಿಸಿದೆ.
ಬಲಿಷ್ಠ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿರುವ ಕೆಕೆಆರ್ ಮೇಲ್ನೋಟಕ್ಕೆ ಬಲಿಷ್ಠವಾಗಿ ಕಾಣುತ್ತಿದ್ದರೂ, ಸನ್‌ರೈಸರ್ಸ್ ಹೈದರಾಬಾದ್ ಕೂಡ ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿದೆ. ಎರಡೂ ತಂಡಗಳು ಬಲಿಷ್ಠವಾಗಿದ್ದು ಭಾನುವಾರ ರೋಚಕ ಫೈನಲ್ ಪಂದ್ಯವನ್ನು ನಿರೀಕ್ಷೆ ಮಾಡಲಾಗಿದೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ.












Click it and Unblock the Notifications