KKR vs SRH IPL 2023: ಕೋಲ್ಕತ್ತಾ ನೈಟ್ ರೈಡರ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯದ ವಿವರ; ಆಡುವ 11ರ ಬಳಗ

ಶುಕ್ರವಾರ, ಏಪ್ರಿಲ್ 14ರಂದು ಕೋಲ್ಕತ್ತಾದಲ್ಲಿ ನಡೆಯಲಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 19ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಸೆಣಸಾಡಲು ಸಜ್ಜಾಗಿವೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ನಿತೀಶ್ ರಾಣಾ ಮುನ್ನಡೆಸಲಿದ್ದಾರೆ, ಏಡೆನ್ ಮಾರ್ಕ್ರಾಮ್ ಅವರು ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕತ್ವ ವಹಿಸಲಿದ್ದಾರೆ.

KKR vs SRH IPL 2023: Kolkata Kinght Riders vs Sun Risers Hyderabad Match Details, Probable Playing 11

ಎರಡೂ ತಂಡಗಳು ಇಲ್ಲಿಯವರೆಗೆ ಋತುವಿನಲ್ಲಿ ಒಂದೇ ರೀತಿಯ ಆರಂಭವನ್ನು ಹೊಂದಿವೆ. ಕೆಕೆಆರ್ ಆಡಿದ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಗೆದ್ದಿದ್ದರೆ, ಒಂದು ಪಂದ್ಯದಲ್ಲಿ ಸೋತಿದೆ. ಇನ್ನು ಸನ್‌ರೈಸರ್ಸ್ ಹೈದರಾಬಾದ್ ತಂಡ ಆಡಿದ ಮೂರು ಪಂದ್ಯಗಳಲ್ಲಿ ಒಂದು ಪಂದ್ಯ ಗೆದ್ದು, ಎರಡರಲ್ಲಿ ಸೋಲು ಕಂಡಿದೆ. ಹೀಗಾಗಿ ಶುಕ್ರವಾರದ ಪಂದ್ಯದಲ್ಲಿ ಉಭಯ ತಂಡಗಳು ಗೆಲುವಿಗಾಗಿ ಹೋರಾಡಲಿವೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ತನ್ನ ಕೊನೆಯ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಕೊನೆಯ ಓವರ್‌ನಲ್ಲಿ ಸತತ ಐದು ಸಿಕ್ಸರ್ ಬಾರಿಸಿದ ರಿಂಕು ಸಿಂಗ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ರೋಚಕ ಗೆಲುವು ಸಾಧಿಸಿತು. ಇನ್ನು ಪಂಜಾಬ್ ಕಿಂಗ್ಸ್ ವಿರುದ್ಧ ಸನ್‌ರೈಸರ್ಸ್ ಹೈದರಾಬಾದ್ ತಂಡ ಸುಲಭ ಜಯ ದಾಖಲಿಸಿ ಈ ಪಂದ್ಯಕ್ಕೆ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+