KKR vs SRH: ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಸನ್‌ರೈಸರ್ಸ್ ಹೈದರಾಬಾದ್
ಐಪಿಎಲ್ 2024ರ ಫೈನಲ್ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. 70 ಲೀಗ್ ಹಂತದ ಪಂದ್ಯಗಳು, 3 ಪ್ಲೇ ಆಫ್ ಪಂದ್ಯಗಳ ಬಳಿಕ ಮೆಗಾ ಫೈನಲ್‌ಗೆ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣ ಸಜ್ಜಾಗಿದೆ.
ಲೀಗ್ ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ಅಂಕಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿ ಪ್ಲೇಆಫ್ ಪ್ರವೇಶಿಸಿತ್ತು. ಕ್ವಾಲಿಫೈಯರ್ 1 ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತ್ತು.

ಮತ್ತೊಂದೆಡೆ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಸನ್‌ರೈಸರ್ಸ್ ಹೈದರಾಬಾದ್ ಫೈನಲ್‌ಗೆ ಪ್ರವೇಶಿಸಿದೆ. ಉಭಯ ತಂಡಗಳು ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ಬಲಿಷ್ಠವಾಗಿದ್ದು ರೋಚಕ ಹಣಾಹಣಿ ನಿರೀಕ್ಷೆ ಮಾಡಲಾಗಿದೆ.
ಕ್ವಾಲಿಫೈಯರ್ 2 ಪಂದ್ಯದಲ್ಲಿ ಇದೇ ಅಂಗಳದಲ್ಲಿ ಮೊದಲು ಬ್ಯಾಟ್ ಮಾಡಿದ್ದ ಸನ್‌ರೈಸರ್ಸ್ ಹೈದರಾಬಾದ್ ಬಳಿಕ ಯಶಸ್ವಿಯಾಗಿ ರಾಜಸ್ಥಾನ ರಾಯಲ್ಸ್ ತಂಡವನ್ನು ಕಟ್ಟಿಹಾಕಿತ್ತು. ಸ್ಫೋಟಕ ಬ್ಯಾಟಿಂಗ್ ಪಡೆಯೇ ಇದ್ದು, ದೊಡ್ಡ ಮೊತ್ತವನ್ನು ಪೇರಿಸುವ ಉದ್ದೇಶದಿಂದ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.
ಉಭಯ ತಂಡಗಳ ಆಡುವ ಬಳಗ
ಕೋಲ್ಕತ್ತಾ ನೈಟ್ ರೈಡರ್ಸ್: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ
ಸನ್‌ರೈಸರ್ಸ್ ಹೈದರಾಬಾದ್: ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಐಡೆನ್ ಮಾರ್ಕ್ರಾಮ್, ನಿತೀಶ್ ರೆಡ್ಡಿ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಶಹಬಾಜ್ ಅಹ್ಮದ್, ಪ್ಯಾಟ್ ಕಮ್ಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್












Click it and Unblock the Notifications