KKR vs SRH: ಎಸ್‌ಆರ್‌ಎಚ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು; ಫೈನಲ್‌ಗೆ ಲಗ್ಗೆಯಿಟ್ಟ ಕೆಕೆಆರ್
ಐಪಿಎಲ್ 2024ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಕೋಲ್ಕತ್ತಾ ನೈಟ್ ರೈಡರ್ಸ್ ಫೈನಲ್‌ಗೆ ಲಗ್ಗೆಯಿಟ್ಟಿದೆ.
ಅಹಮದಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ 19.3 ಓವರ್ ಗಳಲ್ಲಿ 159 ರನ್‌ಗಳಿಗೆ ಆಲೌಟ್ ಆಯಿತು.

ಮಿಚೆಲ್ ಸ್ಟಾರ್ಕ್ ಅವರ ಮಾರಕ ಬೌಲಿಂಗ್ ದಾಳಿಗೆ ಸನ್‌ರೈಸರ್ಸ್ ಹೈದರಾಬಾದ್ ನಲುಗಿ ಹೋಯಿತು. ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಹಲವು ದಾಖಲೆ ಬರೆದಿದ್ದ ಎಸ್‌ಆರ್‌ಎಚ್ ಈ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಕಂಡಿತು.
ಟ್ರಾವಿಸ್ ಹೆಡ್, ಶಹಬಾಜ್ ಅಹ್ಮದ್, ಸನ್ವೀರ್ ಸಿಂಗ್ ಮೂವರು ಸೊನ್ನೆಗೆ ಔಟಾದರು. ಅಭಿಷೇಕ್ ಶರ್ಮಾ 3 ರನ್‌ಗಳಿಗೆ ಔಟಾದರೆ, ನಿತೀಶ್ ರೆಡ್ಡಿ 9 ರನ್‌ಗಳಿಸಿ ಔಟಾದರು. ರಾಹುಲ್ ತ್ರಿಪಾಠಿ 55 ರನ್ ಗಳಿಸಿ ತಂಡಕ್ಕೆ ನೆರವಾದರು. ಹೆನ್ರಿಚ್ ಕ್ಲಾಸೆನ್ 32 ರನ್, ಪಾಟ್ ಕಮಿನ್ಸ್ 30 ರನ್ ಗಳಿಸುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್ 159 ರನ್ ಗಳಿಸಲು ನೆರವಾದರು.
ಮಿಚೆಲ್ ಸ್ಟಾರ್ಕ್ 3 ವಿಕೆಟ್ ಪಡೆದು ಮಿಂಚಿದರೆ, ವರುಣ್ ಚಕ್ರವರ್ತಿ 2 ವಿಕೆಟ್ ಪಡೆದರು. ವೈಭವ್ ಅರೋರಾ, ಹರ್ಷಿತ್ ರಾಣಾ, ಸುನಿಲ್ ನರೇನ್, ಆಂಡ್ರೆ ರಸೆಲ್ ತಲಾ ಒಂದು ವಿಕೆಟ್ ಪಡೆದರು.
ಸುಲಭವಾಗಿ ಗೆದ್ದ ಕೆಕೆಆರ್
160 ರನ್‌ಗಳ ಗುರಿಯನ್ನು ಬೆನ್ನತ್ತಿದ ಕೆಕೆಆರ್ ಕೇವಲ 13.4 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 164 ರನ್ ಗಳಿಸುವ ಮೂಲಕ ಗೆದ್ದು ಬೀಗಿತು. ರಹಮಾನುಲ್ಲಾ ಗುರ್ಬಾಜ್ 14 ಎಸೆತಗಳಲ್ಲಿ 23 ರನ್ ಗಳಿಸಿದರೆ, ಸುನಿಲ್ ನರೇನ್ 21 ರನ್ ಗಳಿಸಿದರು.
ಬಳಿಕ ಜೊತೆಯಾದ ವೆಂಕಟೇಶ್ ಅಯ್ಯರ್ ಮತ್ತು ಶ್ರೇಯಸ್ ಅಯ್ಯರ್ ಮೂರನೇ ವಿಕೆಟ್‌ಗೆ ಅಜೇಯ 93 ರನ್‌ಗಳ ಜೊತೆಯಾಟ ಆಡುವ ಮೂಲಕ ಸುಲಭವಾಗಿ ಗುರಿಯನ್ನು ಬೆನ್ನತ್ತಿದರು.
ವೆಂಕಟೇಶ್ ಅಯ್ಯರ್ 28 ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 51 ರನ್ ಗಳಿಸಿದರೆ, ನಾಯಕ ಶ್ರೇಯಸ್ ಅಯ್ಯರ್ 24 ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 58 ರನ್ ಗಳಿಸಿದರು.












Click it and Unblock the Notifications