KKR vs SRH: ಕೋಲ್ಕತಾ ನೈಟ್ ರೈಡರ್ಸ್ ಬೌಲಿಂಗ್ ದಾಳಿಗೆ ತತ್ತರಿಸಿದ ಸನ್‌ರೈಸರ್ಸ್ ಹೈದರಾದ್
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಐಪಿಎಲ್ 2024 ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಕೆಕೆಆರ್ ಮಾರಕ ಬೌಲಿಂಗ್ ದಾಳಿಗೆ ತತ್ತರಿಸದ್ದು, 113 ರನ್‌ಗಳಿಗೆ ಆಲೌಟ್ ಆಗಿದೆ.
ಇದು ಐಪಿಎಲ್ ಇತಿಹಾಸದಲ್ಲೇ ಫೈನಲ್ ಪಂದ್ಯದಲ್ಲಿ ದಾಖಲಾದ ಅತ್ಯಂತ ಕಡಿಮೆ ಮೊತ್ತವಾಗಿದೆ. ಕೆಕೆಆರ್ 114 ರನ್ ಗಳಿಸಿ ತಮ್ಮ ಮೂರನೇ ಪ್ರಶಸ್ತಿಯನ್ನು ಎತ್ತಿಹಿಡಿಯುವ ಉತ್ಸಾಹದಲ್ಲಿದೆ.

ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕವೇ ಸದ್ದು ಮಾಡಿದ್ದ ಎಸ್‌ಆರ್‌ಎಚ್ ಈ ಪಂದ್ಯದಲ್ಲಿ ಕೂಡ ಸ್ಫೋಟಕ ಬ್ಯಾಟಿಂಗ್ ಮಾಡುತ್ತದೆ ಎಂದು ನಿರೀಕ್ಷೆ ಮಾಡಲಾಗಿತ್ತು.
ಆದರೆ ಕೆಕೆಆರ್ ಮಾರಕ ಬೌಲಿಂಗ್ ದಾಳಿ ಮುಂದೆ ಸನ್‌ರೈಸಸ್ ಹೈದರಾಬಾದ್ ಬ್ಯಾಟರ್ ಗಳು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ಕೂಡ ನಿಲ್ಲಲು ಕೂಡ ಆಗಲಿಲ್ಲ.
ಆರಂಭಿಕ ಬ್ಯಾಟರ್ ಅಭಿಷೇಕ್ ಶರ್ಮಾ ಮೊದಲ ಓವರ್ ನಲ್ಲೇ ಮಿಚೆಲ್ ಸ್ಟಾರ್ಕ್ ಅವರ ವೇಗದ ಎಸೆತಕ್ಕೆ ಬೌಲ್ಡ್ ಆದರು. ಟ್ರಾವಿಸ್ ಹೆಡ್ ತಮ್ಮ ಮೊದಲ ಎಸೆತದಲ್ಲೇ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.
ಐಡೆನ್ ಮಾರ್ಕ್ರಾಮ್ 20 ರನ್, ನಿತೀಶ್ ರೆಡ್ಡಿ 13 ರನ್, ಹೆನ್ರಿಚ್ ಕ್ಲಾಸೆನ್ 16 ರನ್, ಶಹಬಾಜ್ ಅಹ್ಮದ್ 8 ರನ್, ಅಬ್ದುಲ್ ಸಮದ್ 4 ರನ್, ಜಯದೇವ್ ಉನದ್ಕತ್ 4 ರನ್ ಗಳಿಸಿದರೆ, ನಾಯಕ ಪ್ಯಾಟ್ ಕಮ್ಮಿನ್ಸ್ 24 ರನ್ ಗಳಿಸಿ ಸನ್‌ರೈಸರ್ಸ್ ಪರ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿಕೊಂಡರು.
ಮಿಚೆಲ್ ಸ್ಟಾರ್ಕ್ ಮಿಂಚು
ಐಪಿಎಲ್ ಆರಂಭಿಕ ಪಂದ್ಯಗಳಲ್ಲಿ ದುಬಾರಿಯಾಗಿದ್ದ ಮಿಚೆಲ್ ಸ್ಟಾರ್ಕ್ ಫೈನಲ್‌ನಲ್ಲಿ ತಾವೆಂತ ಚಾಂಪಿಯನ್ ಬೌಲರ್ ಎನ್ನುವುದನ್ನು ಸಾಬೀತುಪಡಿಸಿದರು. 3 ಓವರ್ ಗಳಲ್ಲಿ 14 ರನ್ ನೀಡಿ 2 ವಿಕೆಟ್ ಪಡೆದರು. ಆಂಡ್ರೆ ರಸೆಲ್ 3 ವಿಕೆಟ್ ಪಡೆದರೆ, ಹರ್ಷಿತ್ ರಾಣಾ 2 ಪ್ರಮುಖ ವಿಕೆಟ್ ಪಡೆದರು. ವೈಭವ್ ಅರೋರಾ, ಸುನಿಲ್ ನರೇನ್ ಮತ್ತು ವರುಣ್ ಚಕ್ರವರ್ತಿ ತಲಾ ಒಂದು ವಿಕೆಟ್ ಪಡೆದರು.












Click it and Unblock the Notifications