KL Rahul: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೆಎಲ್‌ ರಾಹುಲ್‌ಗೆ ಭಾರಿ ಬೆಂಬಲ; ಆರ್​​ಸಿಬಿ ಕ್ಯಾಪ್ಟನ್ ಎಂದ ಫ್ಯಾನ್ಸ್!

ದುಲೀಪ್ ಟ್ರೋಫಿ ಪಂದ್ಯಾವಳಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ಇಂಡಿಯಾ ಎ ತಂಡದ ಪರವಾಗಿ ಆಡುತ್ತಿದ್ದಾರೆ. ಭಾರತ ಎ ಮತ್ತು ಭಾರತ ಬಿ ತಂಡಗಳ ನಡುವಿನ ಪಂದ್ಯವು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟೆಸ್ಟ್ ಕ್ರಿಕೆಟ್ ನೋಡಲು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಾವಿರಾರು ಜನ ಸೇರಿದ್ದರು. ಈ ಸಂದರ್ಭದಲ್ಲಿ ಕನ್ನಡಿಗ ಕೆಎಲ್ ರಾಹುಲ್‌ಗೆ ಅಪಾರ ಬೆಂಬಲ ಸಿಕ್ಕಿದೆ.

ಕೆಎಲ್ ರಾಹುಲ್ ಬ್ಯಾಟಿಂಗ್ ಮಾಡಲು ಅಂಗಳಕ್ಕೆ ಇಳಿಯುತ್ತಿದ್ದಂತೆ ನೆರೆದಿದ್ದ ಪ್ರೇಕ್ಷಕರು ಜೋರಾಗಿ ಕೂಗುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ. ಆರ್ ಸಿಬಿ ಕ್ಯಾಪ್ಟನ್, ಕೆಎಲ್ ರಾಹುಲ್ ಎಂದು ಕಿರುಚುವ ಮೂಲಕ ಐಪಿಎಲ್‌ನಲ್ಲಿ ಮತ್ತೆ ಆರ್ ಸಿಬಿ ತಂಡಕ್ಕೆ ವಾಪಸ್ ಬನ್ನಿ ಎಂದು ಮನವಿ ಮಾಡಿದ್ದಾರೆ.

KL Rahul Gains Massive Fan Support at Duleep Trophy RCB Chants Emerge

ಕೆಎಲ್ ರಾಹುಲ್ ಆರ್ ಸಿಬಿ ತಂಡದ ಮಾಜಿ ಆಟಗಾರ, ಬಳಿಕ ಪಂಜಾಬ್ ಕಿಂಗ್ಸ್ ತಂಡದ ನಾಯಕರಾಗಿದ್ದ ಅವರು, ಕಳೆದ ಮೂರು ವರ್ಷಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. 2024ರ ಐಪಿಎಲ್‌ ವೇಳೆ ತಂಡ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಹೀನಾಯವಾಗಿ ಸೋತಿದ್ದಕ್ಕೆ ಮೈದಾನದಲ್ಲೇ ಕೆಎಲ್ ರಾಹುಲ್ ಅವರಿಗೆ ತಂಡದ ಮಾಲೀಕ ಸಂಜೀವ್ ಗೋಯೆಂಕಾ ನಿಂದಿಸಿದ್ದರು.

ಕಹಿ ಘಟನೆ ಬಳಿಕ ಕೆಎಲ್ ರಾಹುಲ್ 2025ರ ಐಪಿಎಲ್‌ನಲ್ಲಿ ಲಕ್ನೋ ತಂಡದಲ್ಲಿ ಉಳಿಯುವುದು ಅನುಮಾನವಾಗಿದೆ. ಎಲ್‌ಎಸ್‌ಜಿ ಫ್ರಾಂಚೈಸಿ ಕೂಡ ಹೊಸ ನಾಯಕನ ನೇಮಿಸಲು ಉತ್ಸುಕವಾಗಿದ್ದು, ಕೆಎಲ್ ರಾಹುಲ್‌ರನ್ನು ಬರಿ ಆಟಗಾರನಾಗಿ ಉಳಿಸಿಕೊಳ್ಳಲು ಆಸಕ್ತಿ ತೋರಿಸಿದೆ, ಒಂದು ವೇಳೆ ಕೆಎಲ್ ರಾಹುಲ್ ಏನಾದರು ಈ ಬಾರಿ ಮೆಗಾ ಹರಾಜಿನಲ್ಲಿ ತಮ್ಮ ಹೆಸರು ನೊಂದಾಯಿಸಿಕೊಂಡರೆ, ಆರ್ ಸಿಬಿ ಅವರನ್ನು ಖರೀದಿ ಮಾಡಬಹುದು ಎನ್ನಲಾಗಿದೆ.

ಆರ್ ಸಿಬಿಗೆ ಬರ್ತಾರ ಕನ್ನಡಿಗ?

ಕೆಎಲ್ ರಾಹುಲ್ ಕರ್ನಾಟಕದ ಆಟಗಾರ, ಆರ್ ಸಿಬಿ ಬಗ್ಗೆ ವಿಶೇಷ ಅಭಿಮಾನ ಇಟ್ಟುಕೊಂಡಿದ್ದಾರೆ. ಬಹಿರಂಗವಾಗಿಯೇ ಆರ್ ಸಿಬಿ ತನ್ನ ಮೆಚ್ಚಿನ ತಂಡ ಎಂದು ಕೂಡ ಹೇಳಿದ್ದಾರೆ. ಕೆಎಲ್ ರಾಹುಲ್ ಏನಾದರೂ ಆರ್ ಸಿಬಿ ಸೇರಿದರೆ ಅಭಿಮಾನಿಗಳ ಬೆಂಬಲ ಕೂಡ ಹೆಚ್ಚಾಗುತ್ತದೆ. ಆದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅವರನ್ನು ಮತ್ತೆ ಸೇರಿಸಿಕೊಳ್ಳಲು ಆಸಕ್ತಿ ತೋರಿಸಬೇಕಿದೆ.

ದುಲೀಪ್ ಟ್ರೋಫಿಯಲ್ಲಿ ಕೆಎಲ್ ರಾಹುಲ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಮೊದಲ ಇನ್ನಿಂಗ್ಸ್‌ನಲ್ಲಿ ಅವರು 37 ರನ್ ಗಳಿಸಿ ಔಟಾದರು. ಭಾರತ ಎ ತಂಡವು ಮೊದಲ ಇನ್ನಿಂಗ್ಸ್‌ನಲ್ಲಿ 231 ರನ್‌ಗಳಿಗೆ ಆಲೌಟ್ ಆಗುವ ಮೂಲಕ, 90 ರನ್‌ಗಳ ಹಿನ್ನಡೆಯಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಬಿ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 321 ರನ್‌ಗಳಿಗೆ ಆಲೌಟ್ ಆಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+