KL Rahul: ಅಭ್ಯಾಸದ ವೇಳೆ ಗಾಯಗೊಂಡ ಕೆಎಲ್ ರಾಹುಲ್‌! ಭಾರತ ತಂಡಕ್ಕೆ ಹೊಸ ಆತಂಕ

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ಸದ್ಯ 1-1 ರಲ್ಲಿ ಸಮಬಲಗೊಂಡಿದ್ದು ನಾಲ್ಕನೇ ಟೆಸ್ಟ್‌ಗೆ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ತಯಾರಿ ಆರಂಭಿಸಿವೆ. ಡಿಸೆಂಬರ್ 26ರಿಂದ ಮೆಲ್ಬೋರ್ನ್‌ನಲ್ಲಿ ನಾಲ್ಕನೇ ಟೆಸ್ಟ್ ಆರಂಭವಾಗಲಿದ್ದು, ಬಾಕ್ಸಿಂಗ್‌ ಡೇ ಟೆಸ್ಟ್‌ ಗೆಲ್ಲಲು ಎರಡೂ ತಂಡಗಳು ರಣತಂತ್ರ ರೂಪಿಸುತ್ತಿವೆ. ಈ ಬೆನ್ನಲ್ಲೇ ಭಾರತ ತಂಡಕ್ಕೆ ಆಘಾತ ಎದುರಾಗಿದೆ.

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತಕ್ಕೆ ಬ್ಯಾಟಿಂಗ್‌ನದ್ದೇ ದೊಡ್ಡ ಸಮಸ್ಯೆಯಾಗಿದೆ. ಕೆಎಲ್ ರಾಹುಲ್‌ ಮಾತ್ರ ಸದ್ಯ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ಬಾಕ್ಸಿಂಗ್‌ ಡೇ ಟೆಸ್ಟ್‌ಗಾಗಿ ಅಭ್ಯಾಸ ಮಾಡುವ ಸಂದರ್ಭದಲ್ಲಿ ಕೆಎಲ್ ರಾಹುಲ್ ಗಾಯಗೊಂಡಿದ್ದು ಆತಂಕಕ್ಕೆ ಕಾರಣವಾಗಿದೆ.

KL Rahul injury scare ahead ind vs aus test

ಮೆಲ್ಬೋರ್ನ್‌ನಲ್ಲಿ ಅಭ್ಯಾಸ ಮಾಡುವ ಸಂದರ್ಭದಲ್ಲಿ ಕೆಎಲ್ ರಾಹುಲ್ ಕೈಗೆ ಪೆಟ್ಟು ಬಿದ್ದಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಯಲ್ಲಿ ಇಂತಹ ಘಟನೆ ನಡೆದಿರುವುದು ಇದೇ ಮೊದಲನೇಲ್ಲ. ಪರ್ತ್ ಟೆಸ್ಟ್‌ಗೆ ಮುನ್ನ ಕೂಡ ಕೆಎಲ್ ರಾಹುಲ್ ಕೈಗೆ ಪೆಟ್ಟಾಗಿತ್ತು. ಶನಿವಾರ ಕೂಡ ಅವರ ಕೈಗೆ ಮತ್ತೆ ಪೆಟ್ಟಾಗಿರುವುದು ಆತಂಕ ಹೆಚ್ಚಲು ಕಾರಣವಾಗಿದೆ.

ಕೆಎಲ್ ರಾಹುಲ್‌ ಅವರ ಬಲಗೈ ಮಣಿಕಟ್ಟಿಗೆ ಪೆಟ್ಟು ಬಿದ್ದಿದ್ದು, ತಕ್ಷಣವೇ ಅವರನ್ನು ಫಿಸಿಯೋ ಪರೀಕ್ಷಿಸಿದರು. ಈ ವಿಡಿಯೋ ಸದ್ಯ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು ಭಾರತ ತಂಡದ ಅಭಿಮಾನಿಗಳು ಆತಂಕಗೊಂಡಿದ್ದಾರೆ.

ಭಾರತದ ಪ್ರಮುಖ ಬ್ಯಾಟರ್

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಕೆಎಲ್ ರಾಹುಲ್ ಭಾರತ ತಂಡದ ಪ್ರಮುಖ ಆಟಗಾರರಾಗಿದ್ದಾರೆ. ಮೂರು ಟೆಸ್ಟ್ ಪಂದ್ಯಗಳಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ. ಟ್ರಾವಿಸ್‌ ಹೆಡ್‌ ಬಳಿಕ ಬಿಜಿಟಿ ಸರಣಿಯಲ್ಲಿ ಹೆಚ್ಚು ರನ್ ಗಳಿಸಿರುವ ಆಟಗಾರನಾಗಿದ್ದಾರೆ. ಶತಕ ಗಳಿಸದೇ ಇದ್ದರೂ 5 ಇನ್ನಿಂಗ್ಸ್‌ಗಳಲ್ಲಿ 235 ರನ್ ಗಳಿಸಿದ್ದಾರೆ.

ರೋಹಿತ್ ಶರ್ಮಾ ಬದಲಾಗಿ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಕೆಎಲ್ ರಾಹುಲ್‌ ಸರಣಿಯಲ್ಲಿ ಯಶಸ್ವಿ ಬ್ಯಾಟರ್ ಆಗಿದ್ದಾರೆ. ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿರುವ 4 ಮತ್ತು 5 ನೇ ಟೆಸ್ಟ್‌ ಪಂದ್ಯಗಳಲ್ಲಿ ಭಾರತದ ಪ್ರಮುಖ ಬ್ಯಾಟಿಂಗ್ ಅಸ್ತ್ರವಾಗಿದ್ದಾರೆ.

ಕೆಎಲ್ ರಾಹುಲ್‌ ಗಾಯಗೊಂಡಿದ್ದರು ಅದರ ಪ್ರಮಾಣ ಎಷ್ಟು ಗಂಭೀರವಾಗಿದೆ ಎಂದು ಇನ್ನೂ ತಿಳಿದುಬಂದಿಲ್ಲ. ನಾಲ್ಕನೇ ಟೆಸ್ಟ್ ಆರಂಭವಾಗಲು ಇನ್ನೂ 5 ದಿನಗಳು ಬಾಕಿ ಇರುವ ಕಾರಣ ವಿಶ್ರಾಂತಿ ಪಡೆದು ಫಿಟ್ ಆಗುವ ಸಾಧ್ಯತೆ ಇದೆ.

ಕೆಎಲ್ ರಾಹುಲ್ ಗಾಯಗೊಂಡರೆ ಭಾರತಕ್ಕೆ ದೊಡ್ಡ ಹಿನ್ನಡೆಯಾಗುವುದಂತೂ ಸ್ಪಷ್ಟ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಬೇಕಾದರೆ ಭಾರತ ಮುಂದಿನ ಎರಡೂ ಟೆಸ್ಟ್ ಪಂದ್ಯಗಳನ್ನು ಗೆಲ್ಲಬೇಕಾಗಿದ್ದು, ಭಾರತ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಲೇಬೇಕಾಗಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಿಷಬ್ ಪಂತ್‌ರಿಂದ ಉತ್ತಮ ಬ್ಯಾಟಿಂಗ್‌ ಪ್ರದರ್ಶನ ಬರಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+