KL Rahul: ಟೀಕಿಸಿದವರಿಗೆ ಖಡಕ್ ಉತ್ತರ ಕೊಟ್ಟ ಕನ್ನಡಿಗ ಕೆಎಲ್ ರಾಹುಲ್
ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ್ದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪ್ರವೇಶಿಸಿದೆ. ವಿರಾಟ್ ಕೊಹ್ಲಿ 84 ರನ್ ಗಳಿಸುವ ಮೂಲಕ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಆದರೆ ಕನ್ನಡಿಗ ಕೆಎಲ್ ರಾಹುಲ್ ಪ್ರದರ್ಶನದ ಬಗ್ಗೆ ಮಾತನಾಡುವುದು ಕಡಿಮೆ, ವಿರಾಟ್ ಕೊಹ್ಲಿ ಅವರ ಮೇಲಿನ ಒತ್ತಡ ಕಡಿಮೆ ಮಾಡಿದ್ದು ಕೆಎಲ್ ರಾಹುಲ್ ಎನ್ನುವುದು ಸುಳ್ಳಲ್ಲ.
ಆದರೂ ಕೆಎಲ್ ರಾಹುಲ್‌ಗೆ ಸಿಗಬೇಕಾದ ಸಿಕ್ಕ ಪ್ರಶಂಸೆ ಕಡಿಮೆ, ಕೆಎಲ್ ರಾಹುಲ್ ಒಂದು ಪಂದ್ಯದಲ್ಲಿ ವಿಫಲವಾದರೆ ಅವರ ಬಗ್ಗೆ ಮುಗಿಬೀಳುವ ಟೀಕಾಕಾರಿಗೇನು ಕಡಿಮೆ ಇಲ್ಲ. ಆದರೆ ತಂಡಕ್ಕಾಗಿ ಕೆಎಲ್ ರಾಹುಲ್ ಆರಂಭಿಕನಾಗಿ, ಮಧ್ಯಮ ಕ್ರಮಾಂಕದಲ್ಲಿ ಎಲ್ಲಿ ಬೇಕಾದರೂ ಬ್ಯಾಟಿಂಗ್ ಮಾಡುತ್ತಾರೆ. ಫಿನಿಶರ್ ಆಗಿ ಬ್ಯಾಟಿಂಗ್ ಮಾಡುತ್ತಾರೆ, ವಿಕೆಟ್ ಕೀಪಿಂಗ್ ಮಾಡುತ್ತಾರೆ ಆದರೂ ಅವರ ಕೊಡುಗೆಯನ್ನು ಗುರುತಿಸದೇ ಇರುವುದು ಬೇಸರದ ಸಂಗತಿ.

ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕೆಎಲ್ ರಾಹುಲ್‌ರನ್ನು ಐದನೇ ಕ್ರಮಾಂಕದ ಬದಲಾಗಿ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಕಳಿಸಲಾಯಿತು. 5ನೇ ಕ್ರಮಾಂಕದಲ್ಲಿ ಕೆಎಲ್ ರಾಹುಲ್ 31 ಇನ್ನಿಂಗ್ಸ್‌ಗಳಲ್ಲಿ, ಅವರು 56 ಕ್ಕಿಂತ ಹೆಚ್ಚು ಸರಾಸರಿಯಲ್ಲಿ 1299 ರನ್ ಗಳಿಸಿದ್ದರೂ ಅವರನ್ನು ಮತ್ತೊಂದು ಸ್ಥಾನ ಕೆಳಗಡೆ ಕಳಿಸಲಾಯಿತು.
ಟೀಕೆಗಳ ಬಗ್ಗೆ ಕೆಎಲ್ ರಾಹುಲ್ ಹೇಳಿದ್ದೇನು?
ಅಕ್ಷರ್ ಪಟೇಲ್‌ಗೆ 5ನೇ ಕ್ರಮಾಂಕ ಬಿಟ್ಟುಕೊಟ್ಟರೂ 6ನೇ ಕ್ರಮಾಂಕದಲ್ಲೂ ಕೆಎಲ್ ರಾಹುಲ್ ತಮ್ಮ ಜವಾಬ್ದಾರಿಯನ್ನು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಅಜೇಯ 41 ರನ್ ಗಳಿಸಿ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದ ಅವರು, ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಅಜೇಯ 42 ರನ್ ಗಳಿಸಿ ಮಿಂಚಿದರು.
ಸತತವಾಗಿ ತನ್ನ ಬ್ಯಾಟಿಂಗ್ ಸ್ಥಾನ ಬದಲಾಗುತ್ತಿರುವ ಬಗ್ಗೆ ಮಾತನಾಡಿದ ಕೆಎಲ್ ರಾಹುಲ್, ನಾನು ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವುದನ್ನು ಇಷ್ಟಪಡುತ್ತೇನೆ, ಅದರಲ್ಲಿ ಸುಳ್ಳು ಹೇಳುವುದಿಲ್ಲ. ತಂಡ ಬಯಸಿದರೆ ಯಾವುದೇ ಕ್ರಮಾಂಕದಲ್ಲಿಯೂ ಆಡಬೇಕಾಗುತ್ತದೆ ನಾನು ನನ್ನ ಜವಾಬ್ದಾರಿ ನಿಭಾಯಿಸುತ್ತಿದ್ದೇನೆ ಎಂದರು.
ಮಾರ್ಚ್ 9ರಂದು ಭಾರತ ಚಾಂಪಿಯನ್ಸ್ ಟ್ರೋಫಿ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿದ ನ್ಯೂಜಿಲೆಂಡ್ ಫೈನಲ್‌ಗೆ ಲಗ್ಗೆಯಿಟ್ಟಿದೆ. ಫೈನಲ್‌ನಲ್ಲಿ ಕೂಡ ಕನ್ನಡಿಗ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡಲಿ ಎಂದು ಅಭಿಮಾನಿಗಳು ಹಾರೈಸಿದ್ದಾರೆ.












Click it and Unblock the Notifications