KL Rahul: ಒಂದೇ ಇನ್ನಿಂಗ್ಸ್‌ನಲ್ಲಿ ಟೀಕಾಕಾರರ ಬಾಯಿ ಮುಚ್ಚಿಸಿದ ಕನ್ನಡಿಗ ಕೆಎಲ್ ರಾಹುಲ್

ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ ವಿರುದ್ಧದ ಟೆಸ್ಟ್‌ನ ನಾಲ್ಕನೇ ದಿನದಾಟದಲ್ಲಿ ಭಾರತ ಹಲವು ವಿಶ್ವದಾಖಲೆಗಳನ್ನು ಬರೆದಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಟಿ20ಯಂತೆ ಸ್ಫೋಟಕ ಬ್ಯಾಟಿಂಗ್ ಮಾಡಿದ ಭಾರತ 3 ಓವರ್ ಗಳಲ್ಲಿ 50 ರನ್ ಗಳಿಸಿದರೆ, 10 ಓವರ್ ಗಳಲ್ಲಿ 100 ರನ್ ಗಡಿದಾಟಿತ್ತು. ಟೆಸ್ಟ್ ಕ್ರಿಕೆಟ್‌ನಲ್ಲಿ ವೇಗವಾಗಿ 50, 100, 150, 200, 250 ರನ್‌ ಕಲೆಹಾಕಿದ ದಾಖಲೆ ಇದೀಗ ಭಾರತದ ಪಾಲಾಗಿದೆ. ಹಲವು ದಿನಗಳಿಂದ ಟೀಕೆಗೆ ಗುರಿಯಾಗಿದ್ದ ಕೆಎಲ್ ರಾಹುಲ್ ಕೂಡ ಸ್ಫೋಟಕ ಅರ್ಧಶತಕ ಸಿಡಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದರು.

ಕೆಎಲ್ ರಾಹುಲ್‌ ಎರಡನೇ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ 43 ಎಸೆತಗಳಲ್ಲಿ 7 ಬೌಂಡರಿ 2 ಭರ್ಜರಿ ಸಿಕ್ಸರ್ ಸಹಿತ 68 ರನ್ ಗಳಿಸುವ ಮೂಲಕ ಮಿಂಚಿದರು. ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಇಬ್ಬರ ಮಿಂಚಿನ ಬ್ಯಾಟಿಂಗ್ ನೆರವಿನ ಮೂಲಕ ಭಾರತ ಇನ್ನಿಂಗ್ಸ್ ಮುನ್ನಡೆ ಪಡೆಯಲು ಸಾಧ್ಯವಾಯಿತು.

KL Rahul Responds to Critics with Quickfire Fifty in Kanpur

ಇತ್ತೀಚೆಗೆ ನಡೆದ ದುಲೀಪ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತ ಎ ಪರ ಆಡಿದ್ದ ಕೆಎಲ್ ರಾಹುಲ್ 111 ಎಸೆತಗಳಲ್ಲಿ ಕೇವಲ 37 ರನ್ ಗಳಿಸಿದ್ದು ಟೀಕೆಗೆ ಕಾರಣವಾಗಿತ್ತು. ಕೆಎಲ್ ರಾಹುಲ್ ಅಗತ್ಯಕ್ಕಿಂತ ಹೆಚ್ಚು ರಕ್ಷಣಾತ್ಮಕವಾಗಿ ಆಡುತ್ತಾರೆ ಎಂದು ಮಾಜಿ ಕ್ರಿಕೆಟಿಗರು ಕೂಡ ಟೀಕಿಸಿದ್ದರು.

ಆದರೆ ಕೆಎಲ್ ರಾಹುಲ್ ತನ್ನ 15ನೇ ಟೆಸ್ಟ್ ಅರ್ಧಶತಕ ಗಳಿಸುವ ಮೂಲಕ ಟೀಕೆಗಳಿಗೆ ಉತ್ತರ ಕೊಟ್ಟಿದ್ದಾರೆ. 33 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ಅವರು, ಟೆಸ್ಟ್ ಕ್ರಿಕೆಟ್‌ನಲ್ಲಿ ತಮ್ಮ ವೇಗದ ಅರ್ಧಶತಕವನ್ನು ದಾಖಲಿಸಿದರು. ವಿರಾಟ್ ಕೊಹ್ಲಿ ಅವರೊಂದಿಗೆ ಕೇವಲ 59 ಎಸೆತಗಳಲ್ಲಿ 87 ರನ್ ಜೊತೆಯಾಟ ಭಾರತ ಇನ್ನಿಂಗ್ಸ್ ಮುನ್ನಡೆ ಪಡೆಯಲು ಮಹತ್ವದ ಕೊಡುಗೆ ನೀಡಿದರು.

ಟೀಕೆಗಳಿಗೆ ಉತ್ತರ ಕೊಟ್ಟ ಕನ್ನಡಿಗ

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್‌ರಿಂದ ನಿರೀಕ್ಷಿತ ಪ್ರದರ್ಶನ ಬಂದಿರಲಿಲ್ಲ. ಆದರೂ, ಭಾರತದ ಸಹಾಯಕ ಕೋಚ್ ಅಭಿಷೇಕ್ ನಾಯರ್, ಕೋಚ್ ಗೌತಮ್ ಗಂಭೀರ್ ಅವರ ಮಾರ್ಗದರ್ಶನದಲ್ಲಿ ಕೆಎಲ್ ರಾಹುಲ್ ಮತ್ತೆ ಫಾರ್ಮ್‌ಗೆ ಮರಳಿದ್ದಾರೆ. ಏಳು ತಿಂಗಳ ವಿರಾಮದ ನಂತರ, ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ 16 ಮತ್ತು ಅಜೇಯ 22 ರನ್ ಗಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+