Asia Cup 2023: ಏಷ್ಯಾಕಪ್‌ಗೆ ಫಿಟ್ ಆದ ಕನ್ನಡಿಗ: ಅಯ್ಯರ್ ಆಡೋದು ಅನುಮಾನ
ಏಷ್ಯಾಕಪ್ 2023ಕ್ಕೆ ಭಾರತ ತಂಡವನ್ನು ಆಯ್ಕೆಯಾಗುವ ಮುನ್ನವೇ ಬಿಸಿಸಿಐಗೆ ಶುಭಸುದ್ದಿ ಸಿಕ್ಕಿದೆ. ಭಾರತ ತಂಡದ ಪ್ರಮುಖ ಬ್ಯಾಟರ್ ಕೆಎಲ್ ರಾಹುಲ್ ಫಿಟ್ ಆಗಿದ್ದು ತಂಡಕ್ಕೆ ಮರಳಲು ಸಿದ್ಧವಾಗಿದ್ದಾರೆ. ಆಗಸ್ಟ್ 30ರಿಂದ ಏಷ್ಯಾಕಪ್ ಆರಂಭವಾಗಲಿದ್ದು ಸೆಪ್ಟೆಂಬರ್ 17ರವರೆಗೆ ನಡೆಯಲಿದೆ.
ಏಷ್ಯಾಕಪ್ ಆರಂಭಕ್ಕೆ ಮುನ್ನವೇ ರಾಹುಲ್ ಸಂಪೂರ್ಣವಾಗಿ ಫಿಟ್ ಆಗಲಿದ್ದು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ. ಆದರೆ ಜೂನ್‌ನಲ್ಲಿ ಬೆನ್ನಿನ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಶ್ರೇಯಸ್ ಅಯ್ಯರ್ ಫಿಟ್ ಆಗಿರುವ ಬಗ್ಗೆ ಖಚಿತತೆ ಇಲ್ಲದ ಕಾರಣ ಅವರು ಏಷ್ಯಾಕಪ್‌ನಲ್ಲಿ ಆಡುವುದು ಅನುಮಾನವಾಗಿದೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುತ್ತಿದ್ದ ವೇಳೆ ಎಲ್‌ಎಸ್‌ಜಿ ತಂಡದ ನಾಯಕ ಕೆಎಲ್ ರಾಹುಲ್ ಗಾಯಗೊಂಡಿದ್ದರು. ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ವಿಶ್ರಾಂತಿಯಲ್ಲಿದ್ದ ಅವರು, ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್, ವೆಸ್ಟ್ ಇಂಡೀಸ್ ಸರಣಿಗಳನ್ನು ಕಳೆದುಕೊಂಡ ನಂತರ ಫಿಟ್ ಆಗಿದ್ದು ತಂಡಕ್ಕೆ ಮರಳಲು ಸಜ್ಜಾಗಿದ್ದಾರೆ.
ಪಂದ್ಯಾವಳಿಗೆ ಮುನ್ನವೇ ಸಂಪೂರ್ಣ ಫಿಟ್
ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಮತ್ತು ಬ್ಯಾಟಿಂಗ್ ಕಸರತ್ತು ಮಾಡುತ್ತಿರುವ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಏಷ್ಯಾಕಪ್ ಮತ್ತು ಏಕದಿನ ವಿಶ್ವಕಪ್‌ನಲ್ಲಿ ಕೆಎಲ್ ರಾಹುಲ್ ತಂಡದ ವಿಕೆಟ್ ಕೀಪಿಂಗ್ ಜವಾಬ್ದಾರಿ ವಹಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
"ಬೆಂಗಳೂರಿನಲ್ಲಿರುವ ಬಿಸಿಸಿಐನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ತರಬೇತುದಾರರು ಮತ್ತು ವೈದ್ಯಕೀಯ ತಜ್ಞರು ರಾಹುಲ್ ಅವರ ಚೇತರಿಕೆಯಿಂದ ತೃಪ್ತರಾಗಿದ್ದಾರೆ. ಅವರು ಏಷ್ಯಾಕಪ್‌ಗೆ ಆಯ್ಕೆಯಾಗಲಿದ್ದಾರೆ" ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ.
ಪ್ರಸ್ತುತ ಭಾರತ ತಂಡಕ್ಕೆ ಇಶಾನ್ ಕಿಶನ್ ಅವರು ವಿಕೆಟ್ ಕೀಪರ್ ಆಗಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಅವರು ವಿಫಲವಾದ ಕಾರಣ ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದಾರೆ. ಕೆಎಲ್ ರಾಹುಲ್ ತಂಡಕ್ಕೆ ಮರಳಿದ ಬಳಿಕ ಮಧ್ಯಮ ಕ್ರಮಾಂಕದಲ್ಲಿ ಭಾರತ ತಂಡದ ಬ್ಯಾಟಿಂಗ್‌ಗೆ ಬಲ ತುಂಬಲಿದ್ದಾರೆ.
ಕೆಎಲ್ ರಾಹುಲ್ ಏಕದಿನ ಮಾದರಿಯಲ್ಲಿ ಉತ್ತಮ ಅಂಕಿ ಅಂಶಗಳನ್ನು ಹೊಂದಿದ್ದಾರೆ. ಕಳೆದ ವರ್ಷ 50 ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ ರನ್ ಗಳಿಸಿದ್ದು, 95 ಸ್ಟ್ರೈಕ್‌ರೇಟ್ ಹೊಂದಿದ್ದಾರೆ. ಏಷ್ಯಾಕಪ್ ಮತ್ತು ವಿಶ್ವಕಪ್‌ನಲ್ಲಿ ಅವರು ತಂಡದಲ್ಲಿ ಪ್ರಮುಖ ಪಾತ್ರ ವಹಿಸುವ ಸಾಧ್ಯತೆ ಇದೆ.
ಶ್ರೇಯಸ್ ಅಯ್ಯರ್ ಆಡೋದು ಅನುಮಾನ
ತಂಡದ ಮತ್ತೊಬ್ಬ ಪ್ರಮುಖ ಬ್ಯಾಟರ್ ಶ್ರೇಯಸ್ ಅಯ್ಯರ್ ಅವರು ಫಿಟ್ ಆಗುವುದು ಅನುಮಾನವಾಗಿದೆ. ಶ್ರೀಲಂಕಾ ವಿರುದ್ಧದ ಸರಣಿಯ ಸಮಯದಲ್ಲಿ ಬೆನ್ನುನೋವಿನಿಂದ ಬಳಲಿದ ನಂತರ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.
ಅಯ್ಯರ್ ಸಂಪೂರ್ಣವಾಗಿ ಫಿಟ್ ಆಗದಿದ್ದರೆ ಅವರು ವಿಶ್ವಕಪ್‌ಗೆ ಮುನ್ನ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಸರಣಿಯಲ್ಲಿ ಆಡುವ ಸಾಧ್ಯತೆ ಇದೆ. ಅಯ್ಯರ್ ಬದಲಾಗಿ ಸಂಜು ಸ್ಯಾಮ್ಸನ್ ಮತ್ತು ಸೂರ್ಯಕುಮಾರ್ ಯಾದವ್ ಏಷ್ಯಾಕಪ್‌ನಲ್ಲಿ ಅವಕಾಶ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಸೋಮವಾರದ ವೇಳೆಗೆ ಏಷ್ಯಾಕಪ್‌ಗೆ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ.












Click it and Unblock the Notifications