ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಸ್ಟಾರ್ ಆಟಗಾರ ಕೆಎಲ್ ರಾಹುಲ್‌ಗೆ ಕೊರೊನಾವೈರಸ್ ಸೋಂಕು

|
Google Oneindia Kannada News

ಮುಂಬೈ, ಜುಲೈ 21: ಟೀಂ ಇಂಡಿಯಾದ ಸ್ಟಾರ್ ಆಟಗಾರ ಕೆಎಲ್ ರಾಹುಲ್ ಅವರಿಗೆ ಕೊರೊನಾವೈರಸ್ ಸೋಂಕು ದೃಢಪಟ್ಟಿದೆ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿರುವ ಕೆಎಲ್ ರಾಹುಲ್ ಈ ಸರಣಿಯಿಂದ ಹೊರಗುಳಿಯುವ ಸಾಧ್ಯತೆಯಿದೆ.

ಜುಲೈ 29ರಿಂದ ತರೌಬಾದಲ್ಲಿ ಟಿ20ಐ ಸರಣಿ ಆರಂಭವಾಗಲಿದೆ. ಗಾಯಾಳುವಾಗಿ ಚೇತರಿಕೆ ಕಂಡಿದ್ದ ರಾಹುಲ್ ತಂಡ ಸೇರುವ ತವಕದಲ್ಲಿದ್ದರು. ಆದರೆ, ಕೋವಿಡ್ 19 ಸೋಂಕಿನಿಂದಾಗಿ ಸರಣಿ ತಪ್ಪಿಸಿಕೊಳ್ಳಲಿದ್ದಾರೆ.

ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಈ ಬಗ್ಗೆ ತಿಳಿಸಿದ್ದು, ಬೋರ್ಡ್ ಸದಸ್ಯರ ಸಭೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಆಡಲು ತೆರಳಿರುವ ಮಹಿಳಾ ಕ್ರಿಕೆಟ್ ತಂಡದ ಸದಸ್ಯೆಯೊಬ್ಬರಿಗೂ ಕೊರೊನಾಸೋಂಕು ತಗುಲಿದೆ ಎಂದು ಗಂಗೂಲಿ ಹೇಳಿದರು.

ಇದೇ ಮೊದಲ ಬಾರಿಗೆ ಬಹು ಕ್ರೀಡೆಗಳ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟವೊಂದರಲ್ಲಿ ಭಾರತದ ಮಹಿಳಾ ಕ್ರಿಕೆಟ್ ತಂಡ ಪಾಲ್ಗೊಳ್ಳುತ್ತಿದೆ. ಈ ಬಾರಿಯ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯ ಎಲ್ಲರ ಆಕರ್ಷಣೆಯ ಕೇಂದ್ರಬಿಂದುವಾಗಲಿದೆ ಎಂದು ಆಯೋಜಕರು ಹೇಳಿದ್ದಾರೆ. ಜುಲೈ 31ರಂದು ಭಾರತ ಹಾಗೂ ಪಾಕಿಸ್ತಾನ ಮಹಿಳೆಯರ ಕ್ರಿಕೆಟ್ ನೋಡಲು ಎಜ್ ಬಾಸ್ಟನ್ ಮೈದಾನದಲ್ಲಿ ಭಾರತ ಉಪಖಂಡ ಮೂಲದ ನಿವಾಸಿಗಳು ಅಧಿಕ ಸಂಸ್ಥೆಯಲ್ಲಿ ಉಪಸ್ಥಿತರಿರುತ್ತಾರೆ ಎಂಬ ನಿರೀಕ್ಷೆಯಿದೆ. ಸದ್ಯಕ್ಕೆ ಯಾವ ಆಟಗಾರ್ತಿಗೆ ಸೋಂಕು ತಗುಲಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

ಕೆಎಲ್ ರಾಹುಲ್ ಕಮ್ ಬ್ಯಾಕ್ ವಿಳಂಬ?:

ಐಪಿಎಲ್ 2022ರ ಸೀಸನ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದ ಕೆ.ಎಲ್ ರಾಹುಲ್, ನಂತರ ಇಂಗ್ಲೆಂಡ್ ಸರಣಿಗೂ ತಂಡದಿಂದ ಹೊರಗುಳಿದಿದ್ದರು. ಸದ್ಯ ಜರ್ಮನಿಯಲ್ಲಿ ಸರ್ಜರಿ ಯಶಸ್ವಿಯಾಗಿದ್ದು, ತಂಡಕ್ಕೆ ಸೇರಲು ಸಜ್ಜಾಗಿದ್ದಾರೆ. ಎನ್ ಸಿ ಎ ಅಂಗಳದಲ್ಲಿ ಅಭ್ಯಾಸ ಆರಂಭಿಸಿದ್ದರು.

Breaking News: KL Rahul tests positive for COVID, participation in T20s in WI doubtful

ರಾಹುಲ್‌ ಮತ್ತು ಕುಲದೀಪ್ ಫಿಟ್‌ನೆಸ್‌ ಸಾಬೀತು ಪಡಿಸಿದ ನಂತರವಷ್ಟೇ ತಂಡಕ್ಕೆ ಸೇರಿಕೊಳ್ಳಲಿದ್ದಾರೆ ಎಂದು ಬಿಸಿಸಿಐ ಈ ಹಿಂದೆಯೇ ಸ್ಪಷ್ಟಪಡಿಸಿತ್ತು. ಆದರೆ, ಈಗ ವಿಂಡೀಸ್ ಪ್ರವಾಸಕ್ಕೆ ಅಲಭ್ಯರಾಗಲಿದ್ದಾರೆ.

ವೆಸ್ಟ್ ಇಂಡೀಸ್ ಪ್ರವಾಸ: ಕೆಎಲ್ ರಾಹುಲ್ ಕಮ್‌ಬ್ಯಾಕ್, ಕೊಹ್ಲಿ, ಬುಮ್ರಾ, ಚಾಹಲ್‌ಗೆ ಬ್ರೇಕ್ ವೆಸ್ಟ್ ಇಂಡೀಸ್ ಪ್ರವಾಸ: ಕೆಎಲ್ ರಾಹುಲ್ ಕಮ್‌ಬ್ಯಾಕ್, ಕೊಹ್ಲಿ, ಬುಮ್ರಾ, ಚಾಹಲ್‌ಗೆ ಬ್ರೇಕ್

ವಿಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದ್ದು, ಶಿಖರ್ ಧವನ್‌ ತಂಡದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಆಲ್‌ರೌಂಡರ್‌ ರವೀಂದ್ರ ಜಡೇಜಾರ ಉಪನಾಯಕರಾಗಿದ್ದಾರೆ. ಈ ತಂಡದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್, ಜಸ್ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್‌ ಶಮಿಗೆ ವಿಶ್ರಾಂತಿ ನೀಡಲಾಗಿದೆ.

ಆಗಸ್ಟ್ ತಿಂಗಳಲ್ಲಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿರುವ ತಂಡ ಮೂರು ಪಂದ್ಯಗಳ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಲಿದೆ. ಆಗಸ್ಟ್ 18, 20 ಹಾಗೂ 22 ರಂದು ಪಂದ್ಯಾವಳಿ ನಿಗದಿಯಾಗಿದೆ. ಈ ಸರಣಿಗೆ ಕೆಎಲ್ ರಾಹುಲ್ ನಾಯಕರಾಗಿ ಆಯ್ಕೆಯಾಗುವ ಸಾಧ್ಯತೆ ನಿಚ್ಚಳವಾಗಿದೆ. ಆದರೆ, ಅದಕ್ಕೂ ಮುನ್ನ ಫಿಟ್ನೆಸ್ ಪ್ರಮಾಣ ಪತ್ರ ಅಗತ್ಯವಾಗಿದೆ.

ಭಾರತ- ಪಾಕಿಸ್ತಾನ ಕ್ರಿಕೆಟ್ ಕದನ, ಟಿಕೆಟ್ ಪಡೆದವನೇ ಜಾಣ!ಭಾರತ- ಪಾಕಿಸ್ತಾನ ಕ್ರಿಕೆಟ್ ಕದನ, ಟಿಕೆಟ್ ಪಡೆದವನೇ ಜಾಣ!

ಭಾರತವು ಇತ್ತೀಚೆಗಷ್ಟೇ ಇಂಗ್ಲೆಂಡ್ ಪ್ರವಾಸವನ್ನು ಟಿ20ಐ ಮತ್ತು ಏಕದಿನ ಸರಣಿ ವಿಜಯಗಳೊಂದಿಗೆ ಮುಗಿಸಿದೆ. ಶಿಖರ್ ಧವನ್ ನಾಯಕತ್ವದಲ್ಲಿ ಯುವ ಭಾರತೀಯ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ ಮತ್ತು ನಂತರ ಆಗಸ್ಟ್ 7 ರಂದು ಮುಕ್ತಾಯಗೊಳ್ಳುವ ಐದು T20I ಗಳನ್ನು ಆಡಲಿದೆ.

ಭಾರತ ವಿರುದ್ಧದ ಸರಣಿಗೂ ಮುನ್ನ ಬಾಂಗ್ಲಾದೇಶವನ್ನು ಜಿಂಬಾಬ್ವೆ ಎದುರಿಸಲಿದ್ದು, ಜುಲೈ 30 ರಿಂದ ಮೂರು T20 ಪಂದ್ಯಗಳಿಗೆ ಆತಿಥ್ಯ ವಹಿಸಲಿದೆ. ನಂತರ ಆಗಸ್ಟ್ 28 ರಿಂದ ಮೂರು ಏಕದಿನ ಪಂದ್ಯಗಳನ್ನಾಡಲು ಆಸ್ಟ್ರೇಲಿಯಾಕ್ಕೆ ಪ್ರವಾಸ ಕೈಗೊಳ್ಳಲಿದೆ.

English summary
Team India batter K L Rahul on Thursday tested positive for COVID-19, which is likely to rule him out of the upcoming five-match T20 series against the West Indies, starting July 29 at Tarouba.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X