KL Rahul Daughter Name: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮಗಳ ಹೆಸರು ರಿವೀಲ್
KL Rahul: ಇತ್ತೀಚೆಗಷ್ಟೇ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಪತ್ನಿ ಅಥಿಯಾ ಶೆಟ್ಟಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಇದೀಗ ಈ ಜೋಡಿ ತಮ್ಮ ಮಗಳಿಗೆ ಮುದ್ದಾದ ಹೆಸರೊಂದನ್ನು ಇಟ್ಟಿದ್ದಾರೆ. ಹಾಗಾದ್ರೆ, ಹೆಸರು ಏನು ಎನ್ನುವ ಕುತೂಹಲ ಎಲ್ಲರಲ್ಲೂ ಇದ್ದೇ ಇರುತ್ತದೆ. ಮಾಹಿತಿ ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇದೀಗ ಕೆಎಲ್ ರಾಹುಲ್ ಅವರು ಐಪಿಎಲ್‌ನಲ್ಲಿ ಬ್ಯುಸಿಯಾಗಿದ್ದು, ಡೆಲ್ಲಿ ಕ್ಯಾಪಿಟಲ್ಸ್ ಪರ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರುತ್ತಿದ್ದಾರೆ. ಈ ನಡುವೆಯೇ ಇತ್ತೀಚೆಗಷ್ಟೇ ಜನಿಸಿದ್ದ ಅವರ ಮಗಳ ಹೆಸರನ್ನು ತಮ್ಮ ಇನ್ಸ್ಟಾಗ್ರಾಂ ಖಾತೆ ಮೂಲಕ ರಿವೀಲ್ ಮಾಡಿದ್ದಾರೆ.

ಕೆಎಲ್ ರಾಹುಲ್ ಅವರ ಪತ್ನಿ ಬಾಲಿವುಡ್ ನಟಿ ಅಥಿಯಾ ಶೆಟ್ಟಿ ಮಾರ್ಚ್ 24ರಂದು ಅಥಿಯಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಬಗ್ಗೆ ದಂಪತಿಗಳು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆದ್ದರಿಂದ ಕೆಎಲ್ ರಾಹುಲ್ ಐಪಿಎಲ್ನಲ್ಲಿ ತಮ್ಮ ತಂಡದ ಮೊದಲ ಪಂದ್ಯವನ್ನು ಆಡಲು ಸಾಧ್ಯ ಆಗಿರಲಿಲ್ಲ.
ಇನ್ನು ಕೆಎಲ್ ರಾಹುಲ್ ಅವರು ಅಥಿಯಾ ಶೆಟ್ಟಿ ಮತ್ತು ಅವರ ಮಗಳೊಂದಿಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಜೊಯೆಗೆ ಅವರು ಶೀರ್ಷಿಕೆಯಲ್ಲಿ ತಮ್ಮ ಮಗಳ ಹೆಸರನ್ನು ಉಲ್ಲೇಖಿಸಿದ್ದು, ನಮ್ಮ ಮಗಳು, ನಮ್ಮ ಸರ್ವಸ್ವ. ಇವಾರಾ ದೇವರ ಕೊಡುಗೆ. ಇವಾರಾ ಎಂಬುದು ಸಂಸ್ಕೃತ ಪದ ಆಗಿದೆ. ಇದರ ಅರ್ಥ ದೇವರ ಕೊಡುಗೆ ಎಂದು ಬರೆದುಕೊಂಡಿದ್ದಾರೆ.
ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಜನವರಿ 2023ರಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಅವರ ವಿವಾಹ ಸಮಾರಂಭದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರು ಮಾತ್ರ ಭಾಗವಹಿಸಿದ್ದರು. ಇದಕ್ಕೂ ಮುಂಚೆ ಇಬ್ಬರೂ ದೀರ್ಘಕಾಲ ಡೇಟಿಂಗ್ ಮಾಡಿದ್ದರು. ಬಳಿಕ 2024ರ ನವೆಂಬರ್ನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದ ಕೆಎಲ್ ರಾಹುಲ್ ಮತ್ತು ಅಥಿಯಾ ತಾವು ಪೋಷಕರಾಗಲಿರುವ ಮಾಹಿತಿ ಹಂಚಿಕೊಂಡಿದ್ದರು.
ಐಪಿಎಲ್‌ನಲ್ಲಿ ಕೆಎಲ್ ರಾಹುಲ್ ಸಾಧನೆ: ಐಪಿಎಲ್ 2025ರಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಕೆಎಲ್ ರಾಹುಲ್ ಅವರನ್ನು 14 ಕೋಟಿ ರೂಪಾಯಿಗೆ ಖರೀದಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ತಂಡದ ಪರ ಅದ್ಭುತ ಪ್ರದರ್ಶನ್ ನೀಡುತ್ತಿರುವ ಕೆಎಲ್ ರಾಹುಲ್ ಇಲ್ಲಿಯವರೆಗೆ ಆಡಿರುವ 5 ಪಂದ್ಯಗಳಲ್ಲಿ ಎರಡು ಅರ್ಧ ಶತಕ ಸೇರಿದಂತೆ 238 ರನ್‌ಗಳನ್ನು ಕಲೆಹಾಕಿದ್ದಾರೆ.












Click it and Unblock the Notifications