KL Rahul: 544 ದಿನಗಳ ಬಳಿಕ ಟೆಸ್ಟ್‌ನಲ್ಲಿ ಶತಕ ಬಾರಿಸಿದ ಕನ್ನಡಿಗ ರಾಹುಲ್
ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಕೆಎಲ್ ರಾಹುಲ್, ಲೀಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಆರ್ಭಟಿಸಿದ್ದಾರೆ. ಆಂಡರ್ಸನ್-ತೆಂಡೂಲ್ಕರ್ ಸರಣಿಯ ಮೊದಲ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ರಾಹುಲ್ ಅಮೋಘ ಬ್ಯಾಟಿಂಗ್ ನಡೆಸಿ ತಂಡಕ್ಕೆ ಆಧಾರವಾದರು. ಇವರು ತಮ್ಮ ಕಲಾತ್ಮಕ ಬ್ಯಾಟಿಂಗ್ ನಡೆಸಿದ ಕರ್ನಾಟಕದ ಕೆಎಲ್ ರಾಹುಲ್ ಟೆಸ್ಟ್ ಕ್ರಿಕೆಟ್‌ನಲ್ಲಿನ ಒಂಬತ್ತನೇ ಶತಕ ಬಾರಿಸಿ ಸಂಭ್ರಮಿಸಿದರು.
ಲೀಡ್ಸ್ ಅಂಗಳದಲ್ಲಿ ಸೋಮವಾರ 2 ವಿಕೆಟ್‌ಗೆ 90 ರನ್‌ಗಳಿಂದ ಆಟ ಮುಂದುವರಿಸಿದ ಟೀಮ್ ಇಂಡಿಯಾ ಉತ್ತಮ ಮೊತ್ತದತ್ತ ದೃಷ್ಟಿ ಇಟ್ಟಿದೆ. ಮೊದಲಾವಧಿಯ ಆಟದಲ್ಲಿ ಶುಭಮನ್ ಗಿಲ್ ಬೋಲ್ಡ್ ಆದರು. ಕೆಎಲ್ ರಾಹುಲ್ ಅಜೇಯ 47 ರನ್‌ಗಳಿಂದ ಆಟ ಮುಂದುವರೆಸಿ ಅಬ್ಬರಿಸಿದರು. ಇವರು ನಾಲ್ಕನೇ ವಿಕೆಟ್‌ಗೆ ರಿಷಭ್ ಪಂತ್ ಅವರೊಂದಿಗೆ ಅಮೋಘ ಬ್ಯಾಟಿಂಗ್ ನಡೆಸಿದರು. ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ರಾಹುಲ್ ವಿಫಲರಾದರು.

ಇಂಗ್ಲೆಂಡ್ ವಿರುದ್ಧ ಕೆಎಲ್ ಮೊದಲ ಇನಿಂಗ್ಸ್‌ನಲ್ಲಿ ದೊಡ್ಡ ಇನಿಂಗ್ಸ್ ಕಟ್ಟುವ ಸೂಚನೆಯನ್ನು ನೀಡಿದ್ದರು. ಆದರೆ ಇಲ್ಲದ ಹೊಡೆತಕ್ಕೆ ಮುಂದಾಗಿ ಔಟ್ ಆಗಿದ್ದರು. ಆದರೆ ಎರಡನೇ ಇನಿಂಗ್ಸ್‌ನಲ್ಲಿ ರಾಹುಲ್, ಮೊದಲ ಇನಿಂಗ್ಸ್‌ನಲ್ಲಿ ಯಾವ ಕಾರ್ಯವನ್ನು ಮಾಡಲು ಸಾಧ್ಯವೇ ಆಗಿರಲಿಲ್ಲವೋ, ಆ ಕೆಲಸವನ್ನು ಎರಡನೇ ಇನಿಂಗ್ಸ್‌ನಲ್ಲಿ ಮಾಡಿದರು. ಇವರನ್ನು ಕಟ್ಟಿ ಹಾಕುವಲ್ಲಿ ಇಂಗ್ಲೆಂಡ್ ಬೌಲರ್‌ಗಳು ಹೈರಾಣಾದರು.
ಇಂಗ್ಲೆಂಡ್‌ನಲ್ಲಿ ಮೂರನೇ ಶತಕ
ಇಂಗ್ಲೆಂಡ್‌ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ ರಾಹುಲ್ 202 ಎಸೆತಗಳಲ್ಲಿ 13 ಬೌಂಡರಿ ನೆರವಿನಿಂದ ಶತಕ ಬಾರಿಸಿದರು. ಈ ಮೂಲಕ ರಾಹುಲ್ ಇಂಗ್ಲೆಂಡ್ ವಿರುದ್ಧ ನಾಲ್ಕನೇ ಶತಕ ಸಿಡಿಸಿದರು. ಅಲ್ಲದೆ ಇಂಗ್ಲೆಂಡ್‌ನಲ್ಲಿ ಮೂರನೇ ಶತಕ ಬಾರಿಸಿ ಮಿಂಚಿದರು. ಎದುರಾಳಿಗಳ ತವರಿನಲ್ಲಿ ಕೆಎಲ್ ರಾಹುಲ್ ಬಾರಿಸಿದ ಎಂಟನೇ ಶತಕ ಇದಾಗಿದೆ. ಹೀಗಾಗಿ ರಾಹುಲ್ ತಮ್ಮ ಕ್ಲಾಸ್ ಆಟದ ಪ್ರದರ್ಶನ ನೀಡಿದರು.
544 ದಿನಗಳ ಬಳಿಕ ಟೆಸ್ಟ್‌ನಲ್ಲಿ ಶತಕ
ಕೆಎಲ್ ರಾಹುಲ್ ಈ ಮೂಲಕ 544 ದಿನಗಳ ಬಳಿಕ ಟೆಸ್ಟ್ ಕ್ರಿಕೆಟ್‌ನಲ್ಲಿ ಶತಕ ಬಾರಿಸಿದ ಹಿರಿಮೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ರಾಹುಲ್ ಸೆಂಚೂರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಅಲ್ಲಿಂದ ರಾಹುಲ್ ಈ ವರೆಗೆ ಒಮ್ಮೆಯೂ ಮೂರಂಕಿ ಮುಟ್ಟಿರಲಿಲಿಲ್ಲ. ಆದರೆ ಆಸ್ಟ್ರೇಲಿಯಾ ನೆಲದಲ್ಲಿ ಇವರು ಹಲವು ಬಾರಿ ಶತಕದತ್ತ ಮುನ್ನುಗುತ್ತಿದ್ದಾಗ ಔಟ್ ಆಗಿದ್ದರು. ಈ ವೇಳೆ ರಾಹುಲ್ ಹಲವು ಬಾರಿ ತಂಡಕ್ಕೆ ಆಧಾರವಾಗಿದ್ದರು.












Click it and Unblock the Notifications