ಕಾಮನ್‌ವೆಲ್ತ್ ವೇಟ್‌ಲಿಫ್ಟಿಂಗ್‌ನಲ್ಲಿ ಕಂಚು ಗೆದ್ದ ಹೆಮ್ಮೆಯ ಕನ್ನಡಿಗ ಗುರುರಾಜ ಪೂಜಾರಿ
ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟ 2022ರಲ್ಲಿ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಭಾರತದ ವೇಟ್‌ಲಿಫ್ಟರ್ ಗಳು ಭರ್ಜರಿ ಪ್ರದರ್ಶನ ನೀಡಿದ್ದಾರೆ. ಭಾರತ ಇದುವರೆಗೂ ಒಟ್ಟು ನಾಲ್ಕು ಪದಕಗಳನ್ನು ಗೆದ್ದುಕೊಂಡಿದ್ದು, ಎಲ್ಲಾ ಪದಕಗಳೂ ವೇಟ್‌ಲಿಫ್ಟಿಂಗ್ ವಿಭಾಗದಲ್ಲಿ ಬಂದಿವೆ.
ಮೀರಾಬಾಯಿ ಚಾನು ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದರೆ. ಕೂದಲೆಳೆಯ ಅಂತರದಲ್ಲಿ ಚಿನ್ನದ ಪದಕ ತಪ್ಪಿಸಿಕೊಂಡ ಸಂಜಯ್ ಮಹದೇವ್ ಬರ್ಗರ್, ಬಿಂದ್ಯಾರಾಣಿದೇವಿ ಬೆಳ್ಳಿ ಪದಕ ಗೆದ್ದರು. ಇನ್ನು ಹೆಮ್ಮೆಯ ಕನ್ನಡಿಗೆ ಗುರುರಾಜ ಪೂಜಾರಿ ಪುರುಷರ 61 ಕೆಜಿ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.
ಗುರುರಾಜ ಪೂಜಾರಿ ಒಟ್ಟು 269 ಕೆಜಿ (ಸ್ನ್ಯಾಚ್‌ನಲ್ಲಿ 118 ಕೆ.ಜಿ ಮತ್ತು ಕ್ಲೀನ್ ಮತ್ತು ಜರ್ಕ್‌ನಲ್ಲಿ 151 ಕೆಜಿ) ಎತ್ತುವ ಮೂಲಕ ಮೂರನೇ ಸ್ಥಾನ ಪಡೆದರು. ಮಲೇಷ್ಯಾದ ಅಜ್ನಿಲ್ ಬಿನ್ ಬಿದಿನ್ ಮುಹಮದ್ 285 ಕೆ.ಜಿ ಎತ್ತುವ ಮೂಲಕ ಚಿನ್ನದ ಪದಕವನ್ನು ಗೆದ್ದರೆ, ಪಪುವಾ ನ್ಯೂಗಿನಿಯಾದ ಮೋರಿಯಾ ಬಾರು ಒಟ್ಟು 273 ಕೆ.ಜಿ ಎತ್ತುವ ಮೂಲಕ ಬೆಳ್ಳಿ ಗೆದ್ದರು.

ಹೆಮ್ಮೆಯ ಕನ್ನಡಿಗ ಗುರುರಾಜ ಪೂಜಾರಿ
ಕಾಮನ್‌ವೆಲ್ತ್‌ನಲ್ಲಿ ಕಂಚು ಗೆದ್ದ ಗುರುರಾಜ ಪೂಜಾರಿ ಕುಂದಾಪುರದವರು. ಆಗಸ್ಟ್ 15, 1992ರಂದು ಜನಿಸಿದರು. 2010ರಲ್ಲಿ ತಮ್ಮ ಕಾಲೇಜು ದಿನಗಳಲ್ಲಿ ವೇಟ್‌ಲಿಫ್ಟಿಂಗ್ ಕ್ರೀಡಾಲೋಕಕ್ಕೆ ಪ್ರವೇಶಿಸಿದರು. ಆರಂಭದ ದಿನಗಳಲ್ಲಿ ಗುರುರಾಜ ಅವರು ಕುಸ್ತಿಪಟುವಾಗಿದ್ದರು, ನಂತರ ವೇಟ್‌ಲಿಫ್ಟಿಂಗ್‌ನಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡರು.
2015ರಲ್ಲಿ ಭಾರತೀಯ ವಾಯುಪಡೆಯಲ್ಲಿ ಸಾರ್ಜೆಂಟ್ ಆಗಿ ಸೇರಿದರು. 2016ರಲ್ಲಿ ರಾಷ್ಟ್ರೀಯ ಶಿಬಿರದಲ್ಲಿ ಗುರುತಿಸಿಕೊಂಡರು, ಅಲ್ಲಿಂದಲೇ ಅವರ ಯಶೋಗಾಥೆ ಆರಂಭವಾಯಿತು.

ಹಲವು ಪದಕಗಳ ಸರದಾರ ಗುರುರಾಜ ಪೂಜಾರಿ
2016 ರಲ್ಲಿ ಮಲೇಷ್ಯಾ ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್‌ನಲ್ಲಿ ಗುರುರಾಜ ಪೂಜಾರಿ ಚಿನ್ನದ ಪದಕ ಗೆದ್ದಿದ್ದರು. ಅದೇ ವರ್ಷ ದಕ್ಷಿಣ ಏಷ್ಯಾ ಕ್ರೀಡಾಕೂಟದಲ್ಲಿ ಮತ್ತೊಂದು ಚಿನ್ನವನ್ನು ಗೆದ್ದರು.
2017ರ ಕಾಮನ್‌ವೆಲ್ತ್ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಗುರುರಾಜ ಪೂಜಾರಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದರು. 2018ರ ಗೋಲ್ಡ್ ಕೋಸ್ಟ್‌ನಲ್ಲಿ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ ಪೂಜಾರಿ ಶ್ರೇಷ್ಠ ಸಾಧನೆ ಮಾಡಿದರು. ಪೂಜಾರಿ 2018 ರಲ್ಲಿ ಜೂನಿಯರ್ ವಿಶ್ವಕಪ್‌ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.
|
ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ಕ್ರಿಡಾಪಟುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಪದಕ ಗೆದ್ದ ಎಲ್ಲರಿಗೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಗುರುರಾಜ ಪೂಜಾರಿ ಅವರಿಗೂ ಅಭಿನಂದನೆ ಸಲ್ಲಿಸಿದ್ದಾರೆ.
"ಪಿ.ಗುರುರಾಜರ ಸಾಧನೆ ಅತೀವ ಸಂತಸ ತಂದಿದೆ. ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಕಂಚು ಗೆದ್ದಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು. ಅವರು ಉತ್ತಮವಾಗಿ ಪ್ರದರ್ಶನ ನೀಡಿದರು. ಅವರ ಕ್ರೀಡಾ ಪಯಣದಲ್ಲಿ ಇನ್ನೂ ಹಲವು ಮೈಲಿಗಲ್ಲುಗಳನ್ನು ಸಾಧಿಸಲಿ ಎಂದು ಹಾರೈಸುತ್ತೇನೆ." ಎಂದು ಟ್ವೀಟ್ ಮಾಡಿದ್ದಾರೆ.
|
ಸಿಎಂ ಬಸವರಾಜ ಬೊಮ್ಮಾಯಿ ಅಭಿನಂದನೆ
ಭಾರತಕ್ಕೆ ಕಂಚಿನ ಪದಕ ಗೆದ್ದುಕೊಟ್ಟ ಗುರುರಾಜ ಪೂಜಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದ್ದಾರೆ.
"ಕಾಮನ್ ವೆಲ್ತ್ ಕ್ರೀಡಾಕೂಟದ 61 ಕೆಜಿ ವೈಟ್ ಲಿಫ್ಟಿಂಗ್ ವಿಭಾಗದಲ್ಲಿ ಕಂಚಿನ ಪದಕ ಗೆಲ್ಲುವ ಮೂಲಕ ರಾಷ್ಟ್ರದ ಕೀರ್ತಿ ಪತಾಕೆಯನ್ನು ಎತ್ತರಕ್ಕೇರಿಸಿದ ಪಿ. ಗುರುರಾಜ ಅವರಿಗೆ ಹಾರ್ದಿಕ ಅಭಿನಂದನೆಗಳು. ಅವರು ಕರ್ನಾಟಕದ ಕುಂದಾಪುರದವರು ಎನ್ನುವುದು ನಾಡಿಗೆ ಹೆಮ್ಮೆಯ ಸಂಗತಿ. ಅವರಿಗೆ ಉಜ್ವಲ ಯಶಸ್ಸು ಪ್ರಾಪ್ತವಾಗಲಿ ಎಂದು ಹಾರೈಸುತ್ತೇನೆ." ಎಂದು ಅಭಿನಂದನೆ ಸಲ್ಲಿಸಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications