RCB Vs KKR: ಕೆಕೆಆರ್ ವಿರುದ್ಧ ಆರ್‌ಸಿಬಿ ಪ್ಲೇಯಿಂಗ್‌ 11 ಹೇಗಿದೆ ಗೊತ್ತಾ?

RCB Vs KKR: ಅರ್ಧಕ್ಕೆ ರದ್ದಾಗಿದ್ದ ಐಪಿಎಲ್‌ 2025 ಟೂರ್ನಿ ಮತ್ತೆ ಆರಂಭ ಆಗುತ್ತಿದೆ. ಹೊಸ ವೇಳಾಪಟ್ಟಿ ಪ್ರಕಾರ ಮೇ 17ರಂದು ಮೊದಲ ಪಂದ್ಯ ಆರ್‌ಸಿಬಿ ಹಾಗೂ ಕೆಕೆಆರ್ ನಡುವೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಹಾಗಾದ್ರೆ ಆರ್‌ಸಿಬಿ ಪ್ಲೇಯಿಂಗ್‌ 11 ಹೇಗಿರಲಿದ ಎನ್ನುವ ಪ್ರಶ್ನೆ ಮೂಡಿರುತ್ತದೆ. ಅದಕ್ಕೆ ಉತ್ತರ ಇಲ್ಲಿದೆ ತಿಳಿಯಿರಿ.

ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಬಿಕ್ಕಟ್ಟು ಹಿನ್ನೆಲೆ ಐಪಿಎಲ್‌ 2025 ಟೂರ್ನಿಯನ್ನು ಅರ್ಧಕ್ಕೆ ರದ್ದುಗೊಳಿಸಿ ಒಂದು ವಾರಕ್ಕೆ ಮುಂದೂಡಿಕೆ ಮಾಡಲಾಗಿತ್ತು. ಆಟಗಾರರು ಹಾಗೂ ಅಭಿಮಾನಿಗಳ ಹಿತದೃಷ್ಟಿಯಿಂದ ಪ್ರಾಂಚೈಸಿಗಳ ಮನವಿ ಮೇರೆಗೆ ಬಿಸಿಸಿಐ ಈ ನಿರ್ಧಾರ ತೆಗೆದುಕೊಂಡಿತ್ತು. ಆದರೆ ಇದೀಗ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆ ಐಪಿಎಲ್‌ ಉಳಿದ ಪಂದ್ಯಗಳಿಗೆ ಮತ್ತೆ ಹೊಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಮೇ 17ರಿಂದ ಪಂದ್ಯಾವಳಿಗಳು ಆರಂಭ ಆಗಲಿವೆ.

Know RCB playing 11 against KKR

ಮೊದಲ ಪಂದ್ಯ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೊಲ್ಕತ್ತಾ ನೈಟ್‌ ರೈಡರ್ಸ್ ನಡುವೆ ನಡೆಯಲಿದೆ. ಈ ಹಿನ್ನೆಲೆ ಅವರವರ ದೇಶಗಳಿಗೆ ವಾಪಸ್‌ ತೆರಳಿದ್ದ ಆಟಗಾರರು ಮತ್ತೆ ತಮ್ಮ ಐಪಿಎಲ್‌ ತಂಡವನ್ನು ಸೇರ್ಪಡೆ ಆಗಿದ್ದಾರೆ. ಆದರೆ, ವೆಸ್ಟ್‌ ಇಂಡಿಸ್‌ ಹಾಗೂ ಇಂಗ್ಲೆಂಡ್‌ ತಂಡದ ಆಟಗಾರರು ಅವರ ದೇಶದಲ್ಲಿ ಪಂದ್ಯಗಳು ಇರುವುದರಿಂದ ಕೆಲವು ದಿನಗಳಷ್ಟೇ ಐಪಿಎಲ್‌ ಆಡಲಿದ್ದಾರೆ. ಕೊನೆಯಲ್ಲಿ ಅಲಭ್ಯರಾಗುವ ಸಾಧ್ಯತೆಯಿದೆ. ಆದರೆ, ಆಯ್ಕೆ ಆಗದವರು ಮಾತ್ರ ಐಪಿಎಲ್‌ನಲ್ಲಿ ಮುಂದುವರೆಯಲಿದ್ದಾರೆ.

ಗಾಯದ ಕಾರಣದಿಂದಾಗಿ ಜೋಶ್ ಹ್ಯಾಜಲ್‌ವುಡ್ ಕಳೆದ ಪಂದ್ಯದಿಂದಲೂ ಹೊರಗುಳಿದಿದ್ದಾರೆ. ಅವರನ್ನು ಹೊರತುಪಡಿಸಿ, ದಕ್ಷಿಣ ಆಫ್ರಿಕಾದ ಲುಂಗಿ ಎನ್‌ಗಿಡಿ, ಇಂಗ್ಲೆಂಡ್‌ನ ಜಾಕೋಬ್ ಬೆಥೆಲ್ ಮತ್ತು ವೆಸ್ಟ್ ಇಂಡೀಸ್‌ನ ರೊಮಾರಿಯೊ ಶೆಫರ್ಡ್ ಅವರು ಆರ್‌ಸಿಬಿ ಪರ ಅಲಭ್ಯರಾಗುತ್ತಾರೆ ಎನ್ನುವ ಬಗ್ಗೆ ಸುದ್ದಿ ಹರಡಿತ್ತು. ಆದರೆ ಇದೀಗ ಅವರು ಇಂದಿನ ಪಂದ್ಯದಲ್ಲಿ ಆಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಆರ್​ಸಿಬಿ ಸಂಭಾವ್ಯ ತಂಡ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಮಯಾಂಕ್ ಅಗರ್ವಾಲ್, ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಯಶ್ ದಯಾಳ್‌.

ಜೋಶ್‌ ಹೇಜಲ್‌ವುಟ್‌ ಅಲಭ್ಯ ಯಾಕೆ?: ಜೂನ್ 11ರಂದು ಇಂಗ್ಲೆಂಡ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ಟೆಸ್ಟ್ ಆಡಲಿದೆ. ಈ ಹಿನ್ನೆಲೆ ಆಷ್ಟ್ರೇಲಿಯಾ ಆಟಗಾರ ಜೋಶ್‌ ಹೇಜಲ್‌ವುಡ್‌ ಆರ್‌ಸಿಬಿಯ ಮುಂದಿನ ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಎನ್‌ಗಿಡಿ ಅಲಭ್ಯ ಯಾಕೆ?: ಮುಖ್ಯ ಟೂರ್ನಿಗೆ ದಕ್ಷಿಣ ಆಫ್ರಿಕಾ ತಂಡದಲ್ಲಿ ಎನ್‌ಗಿಡಿ ಕೂಡ ಸ್ಥಾನ ಪಡೆದಿದ್ದು, ಜೂನ್ 1ರ ಮೊದಲು ತಂಡವನ್ನು ಸೇರಬೇಕಾಗುತ್ತದೆ. ಜೂನ್ 3ರಂದು ಇಂಗ್ಲೆಂಡ್‌ನಲ್ಲಿ ಪ್ರಾರಂಭವಾಗಲಿರುವ ಜಿಂಬಾಬ್ವೆ ವಿರುದ್ಧದ ಅಭ್ಯಾಸ ಪಂದ್ಯಕ್ಕೆ ಅವರು ಸಿದ್ಧತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಮೇ 29ರಿಂದ ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ತಂಡಗಳು ಸೀಮಿತ ಓವರ್‌ಗಳ ಸರಣಿ ಆಡಲಿವೆ. ಆದ್ದರಿಂದ ಶೆಫರ್ಡ್ (ವೆಸ್ಟ್‌ ಇಂಡೀಸ್) ಹಾಗೂ ಬೆಥೆಲ್ (ಇಂಗ್ಲೇಂಡ್‌) ಮುಂದಿನ ಪಂದ್ಯಗಳಿಗೆ ಅಲಭ್ಯವಾಗುವ ಸಾಧ್ಯತೆಯಿದೆ. ಅವರು ಮೇ 29ರ ಮೊದಲು ಐಪಿಎಲ್ ತೊರೆಯುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಆರ್‌ಸಿಬಿ ಪ್ಲೇಆಫ್‌ ಪ್ರವೇಶಿಸಿದರೆ ಆಡುವವರ ಪಟ್ಟಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್‌ ಕೀಪರ್), ಟಿಮ್ ಡೇವಿಡ್, ಲಿಯಾಮ್ ಲಿವಿಂಗ್‌ಸ್ಟೋನ್, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಭುವನೇಶ್ವರ್ ಕುಮಾರ್, ಯಶ್ ದಯಾಲ್, ನುವಾನ್ ತುಸಾಹರಾ.

ಆರ್‌ಸಿಬಿ ತಂಡ ಪ್ಲೇಆಫ್‌ಗೆ ಪ್ರವೇಶಿಸಿದರೆ, ಲುಂಗಿ ಎನ್‌ಗಿಡಿ ಅವರ ಸ್ಥಾನದಲ್ಲಿ ಶ್ರೀಲಂಕಾದ ವೇಗಿ ನುವಾನ್ ತುಷಾರ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ ಎನ್ನುವ ಮಾಹಿತಿ ಇದೆ. ಇನ್ನು ಗಾಯಗೊಂಡಿರುವ ಪಾಟಿದಾರ್ ಪ್ಲೇ ಆಫ್‌ಗೆ ಮುನ್ನ ಫಿಟ್ ಆಗದಿದ್ದರೆ, ಬ್ಯಾಟಿಂಗ್ ಅಥವಾ ಬೌಲಿಂಗ್‌ನಲ್ಲಿ ಯಾರನ್ನು ಆಡಿಸಬೇಕು ಎಂಬ ಪ್ರಶ್ನೆ ಎದುರಾಗಿದೆ.

ಐಪಿಎಲ್ 2025 ಆರ್‌ಸಿಬಿ ತಂಡ: ಜೇಕಬ್ ಬೆಥೆಲ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಮಯಾಂಕ್ ಅಗರ್ವಾಲ್, ಟಿಮ್ ಡೇವಿಡ್, ಕೃನಾಲ್ ಪಾಂಡ್ಯ, ರೊಮಾರಿಯೋ ಶೆಫರ್ಡ್, ಭುವನೇಶ್ವರ್ ಕುಮಾರ್, ಲುಂಗಿ ಎನ್‌ಗಿಡಿ, ಯಶ್ ದಯಾಲ್, ಸುಯಶ್ ಶರ್ಮಾ, ಸ್ವಪ್ನಿಲ್ ಸಿಂಗ್, ರಸಿಖ್ ದರ್ ಸಲಾಮ್, ಮನೋಜ್ ಭಾಂಡಗೆ, ನುವಾನ್ ತುಷಾರ, ಮೋಹಿತ್ ರಥಿ, ಸ್ವಸ್ತಿಕ್ ಚಿಕಾರ, ಅಭಿನಂದನ್ ಸಿಂಗ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+