Virat Kohli: ಐಪಿಎಲ್‌ನಲ್ಲಿ ವಿರಾಟ್‌ ಕೊಹ್ಲಿ ಬರೆದ ದಾಖಲೆಗಳು ಯಾವವು ಗೊತ್ತಾ?

ಟೀಮ್ ಇಂಡಿಯಾದ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ವಿರಾಟ್ ಕೊಹ್ಲಿ ತಮ್ಮ ಧಮಾಕೆದಾರ್‌ ಬ್ಯಾಟ್‌ನಿಂದ ಅಭಿಮಾನಿಗಳ ಮನ ಗೆಲ್ಲುತ್ತಿದ್ದಾರೆ. ಶನಿವಾರ ಎಂ ಚಿನ್ನಸ್ವಾಮಿ ಅಂಗಳದಲ್ಲೂ ವಿರಾಟ್‌ ಸೊಗಸಾದ ಬ್ಯಾಟಿಂಗ್ ಮಾಡಿ ಅಬ್ಬರಿಸಿದರು. ಸಿಎಸ್‌ಕೆ ವಿರುದ್ಧ ಪಂದ್ಯದಲ್ಲಿ ವಿರಾಟ್ ಹಲವು ದಾಖಲೆಗಳಿಗೆ ತಮ್ಮ ಹೆಸರು ನಮೂದಿಸಿದರು.

ಶನಿವಾರ ನಡೆದ ಪಂದ್ಯದಲ್ಲಿ ವಿರಾಟ್‌ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇವರು 29 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್‌ ಸಹಾಯದಿಂದ 47 ರನ್‌ ಬಾರಿಸಿ, ಮೂರು ರನ್‌ಗಳಿಂದ ಅರ್ಧ ಶತಕ ವಂಚಿತರಾದರು. ಆದರೆ ಅವರ ಈ ಇನ್ನಿಂಗ್ಸ್‌ನಲ್ಲಿ ಹಲವು ದಾಖಲೆಗಳು ಮೂಡಿ ಬಂದಿವೆ.

Kohli Matches Pooran s Six Record Surpasses 700-Run Mark Again in RCB vs CSK

ಚಿನ್ನಸ್ವಾಮಿಯ ರಾಜ

ಕೊಹ್ಲಿ ಇದೀಗ ಐಪಿಎಲ್ ಇತಿಹಾಸದಲ್ಲಿ ಒಂದೇ ಮೈದಾನದಲ್ಲಿ 3000ಕ್ಕೂ ಹೆಚ್ಚು ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2024ರ 69ನೇ ಲೀಗ್ ಪಂದ್ಯದಲ್ಲಿ ಕೊಹ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಕ್ಸರ್ ಬಾರಿಸುವ ಮೂಲಕ ಈ ದಾಖಲೆ ಬರೆದರು.

ಮೊದಲ ಆವೃತ್ತಿಯಿಂದ ಆರ್‌ಸಿಬಿ ಪರ ಬ್ಯಾಟ್ ಮಾಡುತ್ತಿರುವ ವಿರಾಟ್ ಕೊಹ್ಲಿ, ಈ ಮೈದಾನದಲ್ಲಿ 86 ಇನ್ನಿಂಗ್ಸ್‌ಗಳಲ್ಲಿ 22 ಅರ್ಧ ಶತಕ ಮತ್ತು 4 ಶತಕಗಳನ್ನು ಬಾರಿಸಿದ್ದಾರೆ. ಇದರಲ್ಲಿ ಅವರು 3012 ರನ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ರೋಹಿತ್ ಶರ್ಮಾ ಕಾಣಿಸಿಕೊಳ್ಳುತ್ತಾರೆ. ರೋಹಿತ್ ವಾಂಖೆಡೆ ಸ್ಟೇಡಿಯಂನಲ್ಲಿ 2295 ರನ್ ಗಳಿಸಿ ದಾಖಲೆ ಬರೆದಿದ್ದಾರೆ. ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಎಬಿ ಡಿವಿಲಿಯರ್ಸ್ ಐಪಿಎಲ್‌ನಲ್ಲಿ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡುವಾಗ 1960 ರನ್ ಗಳಿಸಿದ್ದಾರೆ. ಆದರೆ ಟಿ20 ಕ್ರಿಕೆಟ್‌ನಲ್ಲಿ ಕೊಹ್ಲಿ ಇದುವರೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 3400ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ.

700 ಬೌಂಡರಿ

ಐಪಿಎಲ್‌ನಲ್ಲಿ 700 ಬೌಂಡರಿ ಬಾರಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ವಿರಾಟ್‌ ಕೊಹ್ಲಿ ಪಾತ್ರರಾಗಿದ್ದಾರೆ. ಶಿಖರ್ ಧವನ್ ನಂತರ 700 ಬೌಂಡರಿಗಳನ್ನು ಬಾರಿಸಿದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ. ಶಿಖರ್ ಧವನ್ ತಮ್ಮ ಐಪಿಎಲ್ ವೃತ್ತಿ ಜೀವನದಲ್ಲಿ ಒಟ್ಟು 768 ಬೌಂಡರಿಗಳನ್ನು ಬಾರಿಸಿದ್ದಾರೆ. ಐಪಿಎಲ್‌ನಲ್ಲಿ 663 ಬೌಂಡರಿಗಳನ್ನು ಬಾರಿಸಿರುವ ಡೇವಿಡ್ ವಾರ್ನರ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.

Kohli Matches Pooran s Six Record Surpasses 700-Run Mark Again in RCB vs CSK

ಒಂದೇ ಅಂಗಳದಲ್ಲಿ 400 ಬೌಂಡರಿ ಬಾರಿಸಿದ ಮೊದಲ ಆಟಗಾರ ಎಂಬ ಶ್ರೇಯ ವಿರಾಟ್ ಅವರದ್ದಾಗಿದೆ. ಇವರ ನಂತರ ರೋಹಿತ್ ಈ ಪಟ್ಟಿಯಲ್ಲಿ ರೋಹಿತ್ ಕಾಣಿಸಿಕೊಂಡಿದ್ದು, ಇವರು 315 ಬೌಂಡರಿ ಬಾರಿಸಿದ್ದಾರೆ.

700 ರನ್ ಸಾಧನೆ

ಐಪಿಎಲ್‌ ಇತಿಹಾಸದಲ್ಲೇ 700 ರನ್‌ಗಳನ್ನು ಎರಡು ಬಾರಿ ಮುಟ್ಟಿದ ಹಿರಿಮೆ ವಿರಾಟ್‌ ಕೊಹ್ಲಿ ಅವರದ್ದಾಗಿದೆ. ಇವರು ಪ್ರಸಕ್ತ ಸಾಲೀನಲ್ಲೂ ಅಬ್ಬರದ ಬ್ಯಾಟಿಂಗ್ ನಡೆಸಿ 708 ರನ್ ಕಲೆ ಹಾಕಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಎರಡನೇ ಆಟಗಾರ ಎಂಬ ಹಿರಿಮೆ ತನ್ನದಾಗಿಸಿಕೊಂಡಿದ್ದಾರೆ.

37 ಸಿಕ್ಸರ್‌

ವಿರಾಟ್ ಕೊಹ್ಲಿ ಪ್ರಸಕ್ತ ಆವೃತ್ತಿಯಲ್ಲಿ ಸ್ಟ್ರೈಕ್ ರೇಟ್ ಬಗ್ಗೆಯೂ ಹೆಚ್ಚಿನ ಒತ್ತು ನೀಡಿದ್ದಾರೆ. ಇದರ ಪರಿಣಾಮವೇ ಅವರ ಬ್ಯಾಟ್‌ನಿಂದಲೂ ಸಿಕ್ಸರ್‌ಗಳು ಸಲೀಸಾಗಿ ಹರಿದು ಬರುತ್ತಿವೆ. ಈ ಸಾಲಿನಲ್ಲಿ ಆಡಿದ 14 ಪಂದ್ಯಗಳಲ್ಲಿ ವಿರಾಟ್ 37 ಸಿಕ್ಸರ್ ಬಾರಿಸಿ, ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ವಿರಾಟ್‌ ಕೊಹ್ಲಿ ಬರೀ ಬ್ಯಾಟಿಂಗ್‌ನಿಂದೇ ತಂಡಕ್ಕೆ ನೆರವಾಗುವ ಆಟಗಾರನಲ್ಲ. ಬದಲಿಗೆ ಫೀಲ್ಡಿಂಗ್‌ನಲ್ಲೂ ಇವರನ್ನು ಮೀರಿಸುವ ಇನ್ನೋಬ್ಬ ಆಟಗಾರನಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+