Ind vs Afg: ಟಿ20 ತಂಡಕ್ಕೆ ವಾಪಸಾದ ರೋಹಿತ್, ಕೊಹ್ಲಿ: ಪ್ರಮುಖ ಆಟಗಾರರಿಗೆ ವಿಶ್ರಾಂತಿ

ಟಿ20 ವಿಶ್ವಕಪ್ 2024 ಸನಿಹವಾಗುತ್ತಿರುವ ಬೆನ್ನಲ್ಲೇ ಬಿಸಿಸಿಐ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದೆ. ಅಫ್ಘಾನಿಸ್ತಾನದ ವಿರುದ್ಧದ ಟಿ20 ಸರಣಿಗೆ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದ್ದು ಕೊಹ್ಲಿ, ರೋಹಿತ್ ಟಿ20 ಕ್ರಿಕೆಟ್‌ಗೆ ಮರಳಿದ್ದಾರೆ.

ಟಿ20 ತಂಡದ ನಾಯಕನಾಗಿ ರೋಹಿತ್ ಶರ್ಮಾ ವಾಪಸಾಗಿದ್ದರೆ, ವಿರಾಟ್ ಕೊಹ್ಲಿ ಕೂಡ ಟಿ20 ಕ್ರಿಕೆಟ್‌ಗೆ ಮರಳಿದ್ದಾರೆ. ಜೂನ್ 1 ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ ಈ ಟಿ20 ಸರಣಿ ತಯಾರಿಯಾಗಿರಲಿದೆ. ಬಳಿಕ ಐಪಿಎಲ್ ಪ್ರದರ್ಶನವನ್ನು ಕೂಡ ಆಯ್ಕೆದಾರರು ಪರಿಗಣಿಸುವ ಸಾಧ್ಯತೆ ಇದೆ.

Ind vs Afg

14 ತಿಂಗಳ ಬಳಿಕ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ಗೆ ವಾಪಸಾಗಿದ್ದಾರೆ. ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್ ನಲ್ಲಿ ಆಡಿದ್ದ ಅವರು ನಂತರ ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ ಆಡಿರಲಿಲ್ಲ.

ಏಕದಿನ ವಿಶ್ವಕಪ್ ಇದ್ದ ಕಾರಣ ರೋಹಿತ್ ಮತ್ತು ಕೊಹ್ಲಿ ಏಕದಿನ ನಾದರಿ ಕ್ರಿಕೆಟ್ ನತ್ತ ಹೆಚ್ಚು ಗಮನ ನೀಡಿದ್ದರು. ಈಗ ಇಬ್ಬರೂ ಕೂರ ಟಿ20 ಮಾದರಿ ಕ್ರಿಕೆಟ್ ಆಡಲು ಒಪ್ಪಿಗೆ ನೀಡಿದ್ದಾರೆ. ಆಯ್ಕೆದಾರ ಅಜಿತ್ ಅಗರ್ಕರ್ ಇಬ್ಬರ ಜೊತೆ ಚರ್ಚೆ ನಡಿಸಿಯೇ ತಂಡವನ್ನು ಅಂತಿಮಗೊಳಿಸಿದ್ದಾರೆ.

ನಾಯಕತ್ವ ವಹಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ಸದ್ಯ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು ಐಪಿಎಲ್ ಶುರುವಾಗುವ ವೇಳೆಗೆ ಫಿಟ್ ಆಗುವ ಸಾಧ್ಯತೆ ಇದೆ. ಒಂದು ವೇಳೆ ಪಾಂಡ್ಯ ಫಿಟ್ ಆಗದೇ ಇದ್ದರೆ, ರೋಹಿತ್ ನಾಯಕನಾಗಿ ಮುಂದುವರೆಯಬಹುದು.

ಸಂಜು ಸ್ಯಾಮ್ಸನ್‌ಗೆ ಅವಕಾಶ

ಪದೇ ಪದೇ ಆಯ್ಕೆದಾರರಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಮತ್ತೊಬ್ಬ ವಿಕೆಟ್ ಕೀಪರ್ ಬ್ಯಾಟರ್ ಜಿತೇಶ್ ಶರ್ಮಾ ಕೂಡ ಅವಕಾಶ ಪಡೆದುಕೊಂಡಿದ್ದಾರೆ. ಕೆಎಲ್ ರಾಹುಲ್ ಅವರಿಗೆ ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿದೆ.

ಆವೇಶ್ ಖಾನ್, ಮುಖೇಶ್ ಕುಮಾರ್, ಅರ್ಷದೀಪ್ ಸಿಂಗ್ ಅವರಿಗೆ ಅವಕಾಶ ನೀಡಲಾಗಿದೆ. ಪ್ರಮುಖ ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಗೆ ವಿಶ್ರಾಂತಿ ನೀಡಲಾಗಿದೆ. ಉಳಿದಂತೆ ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಹಾರ್ದಿಕ್ ಪಾಂಡ್ಯ ಮತ್ತು ಸೂರ್ಯಕುಮಾರ್ ಯಾದವ್ ಹೊರಗುಳಿದಿದ್ದಾರೆ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್‌ಫೋ ವರದಿ ತಿಳಿಸಿದೆ. ಬೆರಳಿನ ಗಾಯದಿಂದಾಗಿ ರುತುರಾಜ್ ಗಾಯಕ್ವಾಡ್ ಅಲಭ್ಯರಾಗಿದ್ದಾರೆ.

ಭಾರತ ತಂಡ :ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್ದೀಪ್ ಸಿಂಗ್ , ಅವೇಶ್ ಖಾನ್, ಮುಖೇಶ್ ಕುಮಾರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+