KS Bharat: ಇಂಗ್ಲೆಂಡ್ ಲಯನ್ಸ್ ವಿರುದ್ಧ ಶತಕ ಸಿಡಿಸಿ 'ರಾಮ'ನಿಗೆ ಅರ್ಪಿಸಿದ 'ಭರತ'
ಅಯೋಧ್ಯೆ ರಾಮ ಮಂದಿರ ಪ್ರಾಣ ಪ್ರತಿಷ್ಠಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು ದೇಶಾದ್ಯಂತ ಸಂಭ್ರಮ ಮನೆ ಮಾಡಿದೆ. ಹಲವು ಮಂದಿ ತಮ್ಮ ಭಕ್ತಿಯನ್ನು ಹಲವು ವಿಧದಲ್ಲಿ ತೋರಿಸುತ್ತಿದ್ದಾರೆ. ರಾಮಜಪ ಕ್ರಿಕೆಟ್ ಪಂದ್ಯಕ್ಕೂ ವ್ಯಾಪಿಸಿದ್ದು, ಭಾರತದ ಬ್ಯಾಟರ್ ಶತಕ ಗಳಿಸಿ ಅದನ್ನು ರಾಮನಿಗೆ ಅರ್ಪಿಸಿದ್ದಾರೆ.
ಇಂಗ್ಲೆಂಡ್ ಲಯನ್ಸ್ ವಿರುದ್ಧದ ನಾಲ್ಕು ದಿನಗಳ ಅಭ್ಯಾಸ ಪಂದ್ಯವನ್ನಾಡಿದ ಭಾರತ ಎ ತಂಡ ಪಂದ್ಯವನ್ನು ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ವಿಕೆಟ್ ಕೀಪರ್ ಬ್ಯಾಟರ್ ಕೆಎಸ್ ಭರತ್ ಅಜೇಯ ಶತಕ ಗಳಿಸುವ ಮೂಲಕ ತಂಡಕ್ಕೆ ನೆರವಾದರು.

ಕೆಎಸ್ ಭರತ್ ಅವರು ಇಂಗ್ಲೆಂಡ್ ಲಯನ್ಸ್ ವಿರುದ್ಧ ಶತಕ ಸಿಡಿಸಿದ ಬಳಿಕ ಬಿಲ್ಲು ಮತ್ತು ಬಾಣದ ಸನ್ನೆ ಮಾಡಿದ್ದಾರೆ. ಭರತ್ ಅವರ ಸಂಭ್ರಮಾಚರಣೆಯ ವಿಡಿಯೋ ವೈರಲ್ ಆಗಿದೆ. ವೀಡಿಯೊದಲ್ಲಿ, ಭರತ್ ಬಿಲ್ಲು ಮತ್ತು ಬಾಣದ ಸನ್ನೆ ಮಾಡುವುದನ್ನು ಕಾಣಬಹುದು. ಕೆಎಸ್ ಭರತ್ ರಾಮಭಕ್ತಿಗೆ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸೋಮವಾರ ರಾಮ ಮಂದಿರ ಪ್ರಾಣ ಪ್ರತಿಷ್ಠಾನ ಕಾರ್ಯಕ್ರಮ ಇರುವ ಕಾರಣ ಭರತ್ ಅವರ ಸಂಭ್ರಮಾಚರಣೆ ಪ್ರಾಮುಖ್ಯತೆ ಪಡೆದುಕೊಂಡಿದೆ.
ಡ್ರಾನಲ್ಲಿ ಅಂತ್ಯವಾದ ಪಂದ್ಯ
ಇಂಗ್ಲೆಂಡ್ ವಿರುದ್ಧದ ಅಭ್ಯಾಸ ಪಂದ್ಯವನ್ನು ಭಾರತ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 8 ವಿಕೆಟ್ ಕಳೆದುಕೊಂಡು 553 ರನ್ ಗಳಿಸಿ ಡ್ರಾ ಮಾಡಿಕೊಂಡಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಎ ತಂಡ 227 ರನ್‌ಗಳಿಗೆ ಆಲೌಟ್ ಆಗಿತ್ತು. ರಜತ್ ಪಾಟಿದಾರ್ 158 ಎಸೆತಗಳಲ್ಲಿ 151 ರನ್ ಗಳಿಸುವ ಮೂಲಕ ಭಾರತ ಎ ತಂಡಕ್ಕೆ ನೆರವಾಗಿದ್ದರು.
ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ 6 ವಿಕೆಟ್ ಕಳೆದುಕೊಂಡು 163 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಹೋರಾಟ ನೀಡಿದ ಭಾರತ ಎ ತಂಡ, ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು.
ಸಾಯಿ ಸುದರ್ಶನ್ 97 ರನ್ ಗಳಿಸಿದರೆ, ಸರ್ಫರಾಜ್ ಖಾನ್ 55 ರನ್ ಗಳಿಸಿದರು. ಪ್ರದೋಷ್ ರಂಜನ್ ಪೌಲ್ 43 ರನ್ ಗಳಿಸಿದರು. ಎಂಜೆ ಅಜೇಯ 89 ರನ್ ಗಳಿಸಿದರೆ, ಕೆಎಸ್ ಭರತ್ ಅಜೇಯ 116 ರನ್ ಗಳಿಸುವ ಮೂಲಕ ಭಾರತ ಎ ತಂಡದ ಸೋಲನ್ನು ತಪ್ಪಿಸಿದರು.
ಇಂಗ್ಲೆಂಡ್ ಭಾರತದ ವಿರುದ್ಧ 5 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದ್ದು. ಜನವರಿ 25ರಂದು ಮೊದಲ ಟೆಸ್ಟ್ ಪಂದ್ಯ ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ.
-
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ












Click it and Unblock the Notifications