Car Accident: ಭೀಕರ ಕಾರು ಅಪಘಾತ: ಶ್ರೀಲಂಕಾ ಮಾಜಿ ಕ್ರಿಕೆಟಿಗ ಆಸ್ಪತ್ರೆಗೆ ದಾಖಲು
ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕ ಲಾಹಿರು ತಿರಿಮನ್ನೆ ಗುರುವಾರ ಶ್ರೀಲಂಕಾದ ಅನುರಾಧಪುರದಲ್ಲಿ ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಯಾಣಿಸುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದು ನಂತರ ಅವರನ್ನು ಅನುರಾಧಪುರ ಬೋಧನಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಲಾಹಿರು ತಿರಿಮನ್ನೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಗಾಯದ ಪ್ರಮಾಣದ ಬಗ್ಗೆ ಇನ್ನು ನಿಖರವಾದ ಮಾಹಿತಿ ಸಿಕ್ಕಿಲ್ಲ. ಆದರೆ ಮೂಲಗಳ ಪ್ರಕಾರ ಅವರು ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿ ಲಾಹಿರು ತಿರಿಮನ್ನೆ ಅವರೊಂದಿಗೆ ಮತ್ತೊಬ್ಬರು ಪ್ರಯಾಣಿಸುತ್ತಿದ್ದು, ಆ ವ್ಯಕ್ತಿಯೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಲಾಹಿರು ತಿರಿಮನ್ನೆ ಪ್ರಸ್ತುತ ಲೆಜೆಂಡ್ಸ್ ಕ್ರಿಕೆಟ್‌ನಲ್ಲಿ ನ್ಯೂಯಾರ್ಕ್ ಸ್ಟ್ರೈಕರ್ಸ್ ಪರ ಆಡುತ್ತಿದ್ದು, ಘಟನೆಗೆ ಸಂಬಂಧಿಸಿದಂತೆ ಫ್ರಾಂಚೈಸಿ ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಿದೆ.
ದೇವಸ್ಥಾನಕ್ಕೆ ಭೇಟಿ ನೀಡುವಾಗ ಅಪಘಾತ
"ಲಾಹಿರು ತಿರಿಮನ್ನೆ ಮತ್ತು ಅವರ ಕುಟುಂಬ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾಗ ಕಾರು ಅಪಘಾತವಾಗಿದೆ ಎಂದು ನಾವು ನಿಮಗೆ ತಿಳಿಸಲು ಬಯಸುತ್ತೇವೆ. ಅದೃಷ್ಟವಶಾತ್, ಅವರಿಗೆ ತೀವ್ರ ಗಾಯವಾಗಿಲ್ಲ, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ." ಎಂದು ಹೇಳಿಕೆಯಲ್ಲಿ ತಿಳಿಸಿದೆ.
"ಅದೃಷ್ಟವಶಾತ್, ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನವನ್ನು ಅನುಸರಿಸಿ, ಅವರೆಲ್ಲರೂ ಸುರಕ್ಷಿತ ಮತ್ತು ದೃಢವಾಗಿದ್ದಾರೆ ಎಂದು ನಾವು ಖಚಿತಪಡಿಸಿಕೊಳ್ಳಬಹುದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಈ ಸಮಯದಲ್ಲಿ ಪ್ರತಿಯೊಬ್ಬರ ಕಾಳಜಿ ಮತ್ತು ಬೆಂಬಲವನ್ನು ನಾವು ಪ್ರಶಂಸಿಸುತ್ತೇವೆ. ಅವರು ಚೇತರಿಸಿಕೊಂಡಾಗ ನಾವು ಅವರ ಗೌಪ್ಯತೆಗೆ ಗೌರವವನ್ನು ಕೋರುತ್ತೇವೆ." ಎಂದು ನ್ಯೂಯಾರ್ಕ್ ಸ್ಟ್ರೈಕರ್ಸ್ ಹೇಳಿಕೆಯಲ್ಲಿ ತಿಳಿಸಲಾಗಿದೆ.
ವರದಿಗಳ ಪ್ರಕಾರ ಅಪಘಾತ ಸಂಭವಿಸಿದಾಗ ಲಾಹಿರು ತಿರಿಮನ್ನೆ ತೀರ್ಥಯಾತ್ರೆಗೆ ತೆರಳಿದ್ದರು. ಘಟನೆಯಲ್ಲಿ ಇನ್ನೊಂದು ಕಡೆಯಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ತೀವ್ರ ಜಖಂಗೊಂಡಿದೆ.
ಕಳೆದ ವರ್ಷ ಕ್ರಿಕೆಟ್‌ಗೆ ವಿದಾಯ
ಲಾಹಿರು ತಿರಿಮನ್ನೆ ತಮ್ಮ ದಶಕದ ಕ್ರಿಕೆಟ್ ವೃತ್ತಿಜೀವನದಲ್ಲಿ 44 ಟೆಸ್ಟ್ ಪಂದ್ಯಗಳು, 127 ಏಕದಿನ ಪಂದ್ಯಗಳು ಮತ್ತು 26 ಟಿ20I ಗಳನ್ನು ಆಡಿದ್ದಾರೆ. 2014 ರಲ್ಲಿ ಶ್ರೀಲಂಕಾ ಟಿ20 ವಿಶ್ವಕಪ್ ಗೆದ್ದ ಆವೃತ್ತಿ ಸೇರಿದಂತೆ ಮೂರು ಟಿ20 ವಿಶ್ವಕಪ್ ಅಭಿಯಾನದ ಭಾಗವಾಗಿದ್ದರು. ಅವರು ಜುಲೈ 2023 ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದರು.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications