Champions Trophy: ಲಾಹೋರ್ ಕ್ರೀಡಾಂಗಣದಲ್ಲಿ ಭಾರತ ಧ್ವಜವನ್ನು ಹಾರಿಸದ ಪಾಕಿಸ್ತಾನ

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಆಡಲು ಭಾರತ ತಂಡ ಪಾಕಿಸ್ತಾನಕ್ಕೆ ಹೋಗದೆ ತಟಸ್ಥ ಸ್ಥಳದಲ್ಲಿ ಆಯೋಜನೆ ಮಾಡುವಂತೆ ಮಾಡಿತು. ಪಾಕಿಸ್ತಾನಕ್ಕೆ ಭಾರತದ ಮೇಲಿನ ಕೋಪ ಇನ್ನೂ ಕಡಿಮೆಯಾಗಿಲ್ಲ. ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಲಾಹೋರ್ ನಲ್ಲಿ ಪಂದ್ಯಾವಳಿಯಲ್ಲಿ ಆಡುವ ದೇಶಗಳ ಧ್ವಜವನ್ನು ಹಾರಿಸಲಾಗಿದ್ದು ಅದರಲ್ಲಿ ಭಾರತದ ಧ್ವಜವನ್ನೇ ಕೈಬಿಟ್ಟಿದೆ.

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಮೊದಲ ಪಂದ್ಯ ಫೆಬ್ರವರಿ 19 ರಂದು ಲಾಹೋರ್ ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ದೇಶಗಳು ಪ್ರಶಸ್ತಿಗಾಗಿ ಸೆಣೆಸಲಿವೆ. ಲಾಹೋರ್ ಕ್ರೀಡಾಂಗಣದಲ್ಲಿ ಏಳು ದೇಶಗಳ ಬಾವುಟವನ್ನು ಮಾತ್ರ ಹಾರಿಸಲಾಗಿದ್ದು ಭಾರತದ ಬಾವುಟವನ್ನು ಕೈಬಿಟ್ಟಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

lahore stadium pcb removes indian flag icc champions trophy

8 ವರ್ಷಗಳ ಸುಧೀರ್ಘ ಬ್ರೇಕ್ ಬಳಿಕ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯವಾಳಿಯನ್ನು ಆಯೋಜನೆ ಮಾಡಲಾಗುತ್ತಿದೆ. 2017ರಲ್ಲಿ ಕೊನೆಯ ಬಾರಿಗೆ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ನಡೆದಿತ್ತು, ವಿರಾಟ್ ಕೊಹ್ಲಿ ನಾಯಕತ್ವದ ಭಾರತ ತಂಡವನ್ನು ಫೈನಲ್‌ನಲ್ಲಿ ಸೋಲಿಸಿದ್ದ ಪಾಕಿಸ್ತಾನ ಪ್ರಶಸ್ತಿ ಗೆದ್ದುಕೊಂಡಿತ್ತು. ಹಾಲಿ ಚಾಂಪಿಯನ್ ಪಾಕಿಸ್ತಾನವೇ ಈ ಬಾರಿ ಪಂದ್ಯಾವಳಿ ಆಯೋಜನೆ ಮಾಡುತ್ತಿದೆ.

ಭಾರತ ತಂಡವು ಪಾಕಿಸ್ತಾನಕ್ಕೆ ತೆರಳಲು ಸರ್ಕಾರ ಅನುಮತಿ ನೀಡಲು ನಿರಾಕರಿಸಿದ್ದರಿಂದ, ಬಿಸಿಸಿಐ ತಟಸ್ಥ ಸ್ಥಳದಲ್ಲಿ ಭಾರತದ ಪಂದ್ಯಗಳನ್ನು ಆಯೋಜನೆ ಮಾಡುವಂತೆ ಐಸಿಸಿಗೆ ಮನವಿ ಮಾಡಿತ್ತು. ದುಬೈನಲ್ಲಿ ಭಾರತದ ಪಂದ್ಯಗಳು ನಡೆಯಲಿದ್ದು, ಫೆಬ್ರವರಿ 20ರಂದು ಭಾರತ ಬಾಂಗ್ಲಾದೇಶವನ್ನು ಎದುರಿಸಲಿದೆ.

ನಷ್ಟವಿಲ್ಲ ಎಂದ ಅಭಿಮಾನಿಗಳು

ಲಾಹೋರ್ ಕ್ರೀಡಾಂಗಣದ ಮೇಲೆ ಭಾರತದ ಧ್ವಜವನ್ನು ಹಾರಿಸದ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ನಿರ್ಧಾರದ ಬಗ್ಗೆ ಭಾರತದ ಕ್ರಿಕೆಟ್ ಅಭಿಮಾನಿಗಳು ವ್ಯಂಗ್ಯವಾಡಿದ್ದಾರೆ. ಅಲ್ಲಿ ಭಾರತದ ಬಾವುಟ ಹಾರಿಸದೇ ಇದ್ದರೂ ನಮಗೇನೂ ನಷ್ಟವಿಲ್ಲ, ಭಾರತ ತಂಡ ಪಾಕಿಸ್ತಾನದಲ್ಲಿ ಆಡದಿದ್ದ ಕಾರಣ ಪಾಕಿಸ್ತಾನಕ್ಕೆ ಕೋಟ್ಯಂತರ ರೂಪಾಯಿ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಭಾರತ ತಂಡ ಆಡದೇ ಇದ್ದರೆ ಐಸಿಸಿ ಪಂದ್ಯಾವಳಿಯಾದರೂ ಹೆಚ್ಚಿನ ನೋಡಲು ಆಸಕ್ತಿ ತೋರಿಸುವುದಿಲ್ಲ. ಭಾರತ ತಂಡ ಆಡದೇ ಇದ್ದರೆ ಚಾಂಪಿಯನ್ಸ್ ಟ್ರೋಫಿ ಕೂಡ ಅಟ್ಟರ್ ಪ್ಲಾಫ್‌ ಆಗುತ್ತದೆ ಎಂದು ಮತ್ತೊಬ್ಬ ಅಭಿಮಾನಿ ಕಮೆಂಟ್ ಮಾಡಿದ್ದಾರೆ.

ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಪಾಕಿಸ್ತಾನದ ವಿರುದ್ಧ ಕೂಡ ಆಡಲಿದೆ. ಫೆಬ್ರವರಿ 23ರಂದು ಭಾನುವಾರ ಈ ಪಂದ್ಯ ನಡೆಯಲಿದ್ದು ಈಗಾಗಲೇ ಪಂದ್ಯದ ಟಿಕೆಟ್‌ಗಳು ಸೋಲ್ಡ್‌ಔಟ್ ಆಗಿವೆ. ಬ್ಲಾಕ್‌ನಲ್ಲಿ ಲಕ್ಷಾಂತರ ರೂಪಾಯಿಗೆ ಟಿಕೆಟ್ ಮಾರಾಟ ಮಾಡಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+