Sreesanth: ಮಾಜಿ ಕ್ರಿಕೆಟಿಗ ಶ್ರೀಶಾಂತ್‌ ವಿರುದ್ಧ ವಂಚನೆ ಆರೋಪದಡಿ ಪ್ರಕರಣ ದಾಖಲು

ಕ್ರಿಕೆಟಿಗ ಶ್ರೀಶಾಂತ್ ಮತ್ತೊಂದು ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ಶ್ರೀಶಾಂತ್ ಮತ್ತು ಇತರ ಇಬ್ಬರ ವಿರುದ್ಧ ಕೇರಳ ಪೊಲೀಸರು ವಂಚನೆ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಎಸ್ ಶ್ರೀಶಾಂತ್ ಪ್ರಸ್ತುತ ನಡೆಯುತ್ತಿರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್ (LLC) ನಲ್ಲಿ ಗುಜರಾತ್ ಜೈಂಟ್ಸ್ ಪರವಾಗಿ ಆಡುತ್ತಿದ್ದಾರೆ.

ಶ್ರೀಶಾಂತ್ ವಿರುದ್ಧ ಐಪಿಸಿ ಸೆಕ್ಷನ್ 420 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ
ಆರೋಪಿಗಳಾದ ರಾಜೀವ್ ಕುಮಾರ್ ಮತ್ತು ವೆಂಕಟೇಶ್ ಕಿಣಿ ಅವರು ಏಪ್ರಿಲ್ 25, 2019 ರಿಂದ ವಿವಿಧ ದಿನಾಂಕಗಳಲ್ಲಿ 18.70 ಲಕ್ಷ ರೂಪಾಯಿ ಹಣ ತೆಗೆದುಕೊಂಡಿದ್ದಾರೆ ಎಂದು ಸರೀಶ್ ಗೋಪಾಲನ್ ಅವರು ದಾಖಲಿಸಿದ ದೂರಿನಲ್ಲಿ ಆರೋಪಿಸಿದ್ದಾರೆ. ಕರ್ನಾಟಕದ ಕೊಲ್ಲೂರಿನಲ್ಲಿ ಕ್ರೀಡಾ ಅಕಾಡೆಮಿಯನ್ನು ನಿರ್ಮಿಸುವುದಾಗಿ ಇಬ್ಬರೂ ಹೇಳಿಕೊಂಡಿದ್ದಾರೆ. ಕ್ರಿಕೆಟಿಗ ಶ್ರೀಶಾಂತ್ ಕೂಡ ಪಾಲುದಾರರಾಗಿದ್ದಾರೆ ಎಂದು ಆರೋಪಿಸಲಾಗಿದೆ.

Legal Woes Return for Cricketer S Sreesanth as He Faces Allegations in a Fraud Case

ಅಕಾಡೆಮಿಯಲ್ಲಿ ಪಾಲುದಾರರಾಗಲು ಅವಕಾಶ ನೀಡಿದ ನಂತರ ಹಣವನ್ನು ಹೂಡಿಕೆ ಮಾಡಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ. ವರದಿಯ ನಂತರ, ಶ್ರೀಶಾಂತ್ ಮತ್ತು ಇತರ ಇಬ್ಬರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 420 (ವಂಚನೆ ಮತ್ತು ಅಪ್ರಾಮಾಣಿಕವಾಗಿ ಆಸ್ತಿ ವಿತರಣೆಯನ್ನು ಪ್ರೇರೇಪಿಸುವುದು) ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಈ ಪ್ರಕರಣದಲ್ಲಿ ಶ್ರೀಶಾಂತ್ ಮೂರನೇ ಆರೋಪಿಯಾಗಿದ್ದಾರೆ.

ಲೆಜೆಂಡ್ಸ್ ಲೀಗ್‌ನಲ್ಲಿ ಉತ್ತಮ ಪ್ರದರ್ಶನ

ನಡೆಯುತ್ತಿರುವ ಲೆಜೆಂಡ್ಸ್ ಲೀಗ್ ಕ್ರಿಕೆಟ್‌ನಲ್ಲಿ ಶ್ರೀಶಾಂತ್ ಗುಜರಾತ್ ಜೈಂಟ್ಸ್ ಪರವಾಗಿ ಆಡುತ್ತಿದ್ದಾರೆ. ಹಿರಿಯ ವೇಗಿ ಇತ್ತೀಚೆಗಷ್ಟೇ ಪಂದ್ಯ-ವಿಜೇತ ಅಂತಿಮ ಓವರ್ ಬೌಲ್ ಮಾಡಿ ತಂಡವನ್ನು ಗೆಲ್ಲಿಸಿದ್ದಾರೆ. ಭಿಲ್ವಾರಾ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಶ್ರೀಶಾಂತ್ ಕೊನೆಯ ಓವರ್‌ನಲ್ಲಿ 14 ರನ್‌ಗಳನ್ನು ಡಿಫೆಂಡ್ ಮಾಡಬೇಕಿತ್ತು. ಮೊದಲ ಎಸೆತದಲ್ಲಿ ಸಿಕ್ಸರ್ ಹೊಡೆಸಿಕೊಂಡರೂ ಶ್ರೀಶಾಂತ್ ಅತ್ಯುತ್ತಮ ಬೌಲಿಂಗ್ ಮಾಡುವ ಮೂಲಕ ಪಂದ್ಯವನ್ನು ಗೆಲ್ಲಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+