Lok Sabha Election 2024; ಐಪಿಎಲ್ ವೇಳಾಪಟ್ಟಿ ಬದಲು?

ಬೆಂಗಳೂರು, ಜನವರಿ 29: ಲೋಕಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು, ಚುನಾವಣಾ ಆಯೋಗ ತಯಾರಿ ಮಾಡಿಕೊಳ್ಳುತ್ತಿದೆ. ದೇಶಾದ್ಯಂತ ಚುನಾವಣೆ ನಡೆಯುವುದರಿಂದ ಐಪಿಎಲ್ 2024ರ ವೇಳಾಪಟ್ಟಿಯಲ್ಲಿಯೂ ಕೆಲವು ಬದಲಾವಣೆ ಮಾಡಲಾಗುತ್ತದೆ.

ಬಿಸಿಸಿಐ ಮಾರ್ಚ್ 22ರಿಂದ ಮೇ 26ರ ತನಕ ಈ ಬಾರಿಯ ಐಪಿಎಲ್ ಟೂರ್ನಿ ಆಯೋಜನೆ ಮಾಡಲು ಮುಂದಾಗಿದೆ. ಆದರೆ ಇದೇ ಸಮಯಕ್ಕೆ ಲೋಕಸಭೆ ಚುನಾವಣೆಯೂ ನಡೆಯಲಿದೆ. ಆದ್ದರಿಂದ 2 ಹಂತದಲ್ಲಿ ಐಪಿಎಲ್ ಪಂದ್ಯಗಳನ್ನು ನಡೆಸುವ ಲೆಕ್ಕಾಚಾರವಿದೆ.

Lok Sabha Election IPL 2024 Schedule In Two Phase

ಕೇಂದ್ರ ಸರ್ಕಾರ 2024-25ನೇ ಸಾಲಿನ ಬಜೆಟ್ ಅನ್ನು ಫೆಬ್ರವರಿ 1ರಂದು ಮಂಡಿಸಲಿದೆ. ಮಾರ್ಚ್‌ 20ರೊಳಗೆ ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುವ ನಿರೀಕ್ಷೆ ಇದೆ. ಆದ್ದರಿಂದ ಲೋಕಸಭೆ ಚುನಾವಣೆ ದಿನಾಂಕ ನೋಡಿಕೊಂಡು ಐಪಿಎಲ್ ವೇಳಾಪಟ್ಟಿ ಪ್ರಕಟಿಸಲು ಬಿಸಿಸಿಐ ಮುಂದಾಗಿದೆ.

ಎರಡು ಹಂತದಲ್ಲಿ ಐಪಿಎಲ್ ಪಂದ್ಯಾವಳಿ; ಲೋಕಸಭೆ ಚುನಾವಣೆ ಎದುರಾದರೂ ಸಹ ಮಾರ್ಚ್‌ನಿಂದ ಮೇ ಒಳಗೆ ಐಪಿಎಲ್ 2024 ಪಂದ್ಯಾವಳಿಗಳನ್ನು ನಡೆಸಬೇಕು. ಜೂನ್‌ನಲ್ಲಿ ಟಿ20 ವಿಶ್ವಕಪ್ ಪಂದ್ಯಾವಳಿಯ ದಿನಾಂಕವನ್ನು ಈಗಾಗಲೇ ನಿಗದಿ ಮಾಡಲಾಗಿದೆ.

ಕೇಂದ್ರ ಚುನಾವಣಾ ಆಯೋಗ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಬಳಿಕ ಬಿಸಿಸಿಐ ಐಪಿಎಲ್ 2024ರ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಚುನಾವಣೆ ನಡೆಯುವ ರಾಜ್ಯಗಳಿಗೆ ಅನುಗುಣವಾಗಿ ಒಟ್ಟು 2 ಹಂತದಲ್ಲಿ ಐಪಿಎಲ್ ಪಂದ್ಯಾವಳಿ ಆಯೋಜಿಸಲು ತೀರ್ಮಾನಿಸಲಾಗಿದೆ.

ವಿವಿಧ ರಾಜ್ಯಗಳಲ್ಲಿ ಚುನಾವಣೆ ನಡೆಯುವುದರಿಂದ ಚುನಾವಣಾ ಕಾರ್ಯಕ್ಕೆ ಪೊಲೀಸರನ್ನು ನಿಯೋಜಿಸಬೇಕಾಗುತ್ತದೆ. ಆಗ ಆ ರಾಜ್ಯದ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳಿಗೆ ಭದ್ರತೆ ನೀಡುವುದು ಕಷ್ಟವಾಗಬಹುದು. ಆಗ ರಾಜ್ಯಗಳು ಕ್ರಿಕೆಟ್ ಪಂದ್ಯಗಳ ಸ್ಥಳಾಂತರಕ್ಕೆ ಸಹ ಸೂಚಿಸಬಹುದು. ಆದ್ದರಿಂದ ಚುನಾವಣಾ ದಿನಾಂಕ ನೋಡಿಕೊಂಡು ಪಂದ್ಯಾವಳಿ ವೇಳಾಪಟ್ಟಿ ಬಿಡುಗಡೆ ಮಾಡಲಾಗುತ್ತದೆ.

2019ರಲ್ಲಿ ಮಾರ್ಚ್ 10ರಂದು ಲೋಕಸಭೆ ಚುನಾವಣೆ ಘೋಷಣೆ ಮಾಡಲಾಗಿತ್ತು. ಏಪ್ರಿಲ್ 11 ರಿಂದ ಮೇ 19ರ ತನಕ 7 ಹಂತದಲ್ಲಿ ಚುನಾವಣೆ ನಡೆಸಲಾಗಿತ್ತು. ಮೇ 23ರಂದು ಮತ ಎಣಿಕೆ ನಡೆದಿತ್ತು. ಈ ಬಾರಿ ಎಷ್ಟು ಹಂತದಲ್ಲಿ ಚುನಾವಣೆ ನಡೆಸಲಾಗುತ್ತದೆ? ಎಂಬುದು ಇನ್ನೂ ತಿಳಿದುಬಂದಿಲ್ಲ.

ಈ ಬಾರಿಯ ಐಪಿಎಲ್ ಪಂದ್ಯಾವಳಿಯನ್ನು ಭಾರತದಲ್ಲಿಯೇ ನಡೆಸಲು ಬಿಸಿಸಿಐ ಚಿಂತನೆ ನಡೆಸಿದೆ. ಭದ್ರತೆಯ ಕಾರಣಕ್ಕೆ ಅನಿವಾರ್ಯ ಪರಿಸ್ಥಿತಿ ಎದುರಾದರೆ ಮಾತ್ರ ಬೇರೆ ದೇಶಗಳಲ್ಲಿ ನಡೆಸಲಾಗುತ್ತದೆ. ಯಾವ ರಾಜ್ಯದಲ್ಲಿ ಚುನಾವಣೆ ನಡೆಯುತ್ತದೆ? ಅಲ್ಲಿ 2ನೇ ಹಂತದಲ್ಲಿ, ಚುನಾವಣೆ ಇಲ್ಲದ ರಾಜ್ಯಗಳಲ್ಲಿ ಮೊದಲ ಹಂತದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸುವಂತೆ ವೇಳಾಪಟ್ಟಿಯನ್ನು ಮಾಡಲಾಗುತ್ತದೆ.

ಲೋಕಸಭೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ತಯಾರಿ ಮಾಡಿಕೊಳ್ಳುತ್ತಿದೆ. ರಾಜ್ಯಗಳ ಚುನಾವಣಾ ಆಯೋಗದ ಜೊತೆ ಸಭೆಯನ್ನು ನಡೆಸಿದೆ. ಕಳೆದ ವಾರ ಏಪ್ರಿಲ್ 16ರಂದು ಲೋಕಸಭೆ ಚುನಾವಣೆ ನಡೆಯಲಿದೆ ಎಂಬ ಸುದ್ದಿ ಹಬ್ಬಿತ್ತು. ಬಳಿಕ ಈ ಕುರಿತು ಚುನಾವಣಾ ಆಯೋಗ ಸ್ಪಷ್ಟನೆಯನ್ನು ನೀಡಿತ್ತು.

ದೆಹಲಿ, ಬೆಂಗಳೂರು, ಗುಜರಾತ್, ಪಶ್ಚಿಮ ಬಂಗಾಳ, ಪಂಜಾಬ್ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯಲಿವೆ. ಈ ರಾಜ್ಯಗಳಲ್ಲಿ ಚುನಾವಣೆ ನಡೆಯುವಾಗ ಅಲ್ಲಿ ಪಂದ್ಯಾವಳಿಗಳನ್ನು ನಡೆಸಲು ಸಾಧ್ಯವಿಲ್ಲ. ಆದ್ದರಿಂದ ಇದನ್ನು ನೋಡಿಕೊಂಡು ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+