LSG vs CSK: ಸಿಎಸ್‌ಕೆ ವಿರುದ್ಧ ಕಣಕ್ಕಿಳಿಯಲ್ಲ ಕೆಎಲ್ ರಾಹುಲ್: ನಾಯಕನಾಗಿ ಮುನ್ನಡೆಸಲಿದ್ದಾರೆ ಕೃನಾಲ್ ಪಾಂಡ್ಯ

ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ಅಂಕಪಟ್ಟಿಯಲ್ಲಿ ಎರಡು ತಂಡಗಳು ಕೂಡ ಉತ್ತಮ ಸ್ಥಿತಿಯಲ್ಲಿದ್ದು ಮೂರು ಹಾಗೂ ನಾಲ್ಕನೇ ಸ್ಥಾನವನ್ನು ಪಡೆದುಕೊಂಡಿದೆ. ಈ ಸ್ಥಾನವನ್ನು ಉತ್ತಮ ಗೊಳಿಸುವ ಅವಕಾಶ ಇಂದು ಎರಡು ತಂಡಗಳಿಗೂ ಇದೆ. ಆದರೆ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಈ ಪಂದ್ಯದ ಆರಂಭಕ್ಕೂ ಮುನ್ನವೇ ಹಿನ್ನಡೆಯುಂಟಾಗಿದೆ.

ಲಕ್ನೋ ಸೂಪರ್ ಜೈಂಟ್ಸ್ ತಂಟದ ನಾಯಕ ಕೆಎಲ್ ರಾಹುಲ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ. ಕಳೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಫೀಲ್ಡಿಂಗ್ ವೇಳೆ ಕೆಎಲ್ ರಾಹುಲ್ ಗಾಯಕ್ಕೆ ತುತ್ತಾಗಿದ್ದರು. ಆ ಪಂದ್ಯದಲ್ಲಿ ಫೀಲ್ಡಿಂಗ್ ಮಾಡದೆ ಹೊರಗುಳಿದ ಕೆಎಲ್ ರಾಹುಲ್ ಕೊನೆಯ ಕ್ಷಣದಲ್ಲಿ ಬ್ಯಾಟಿಂಗ್‌ಗೆ ಇಳಿದಿದ್ದರು.ಇದೀಗ ಕೆಎಲ್ ರಾಹುಲ್ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಿಂದ ಹೊರಗುಳಿಯುವುದು ಅನಿವಾರ್ಯವಾಗಿದೆ.

LSG vs CSK: Lucknow Super Giants skipper KL Rahul will miss match against CSK, Krunal Pandya to lead

ಕ್ರಿಕ್ ಬಜ್ ಮಾಹಿತಿಯ ಪ್ರಕಾರ ಬೆಂಗಳೂರಿನ ನ್ಯಾಶನಲ್ ಕ್ರಿಕೆಟ್ ಅಕಾಡೆಮಿ(ಎನ್‌ಸಿಎ)ಯ ವೈದ್ಯಕೀಯ ತಂಡ ಕೆಎಲ್ ರಾಹುಲ್ ಅವರ ಫಿಟ್‌ನೆಸ್ ಪರೀಕ್ಷಿಸಲಿದ್ದು ಟೂರ್ನಿಯ ಉಳಿದ ಪಂದ್ಯಗಳಿಗೆ ರಾಹುಲ್ ಲಭ್ಯತೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ವರದಿ ಮಾಡಿದೆ. ಹೀಗಾಗಿ ಕೆಎಲ್ ರಾಹುಲ್ ಟೂರ್ನಿಯ ಉಳಿದ ಪಂದ್ಯಗಳಿಗೆ ಲಭ್ತವಾಗುವ ಬಗ್ಗೆ ಇನ್ನಷ್ಟೇ ಸ್ಪಷ್ಟ ಮಾಹಿತಿಗಳು ಲಭ್ಯವಾಗಲಿದೆ.

GT vs DC: ನನ್ನಿಂದಾಗಿಯೇ ಸೋತೆವು: ತಲೆ ತಗ್ಗಿಸಿದ GT ನಾಯಕ ಹಾರ್ದಿಕ್ ಪಾಂಡ್ಯ

ಆದರೆ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಕನ್ನಡಿಗ ಕೆಎಲ್ ರಾಹುಲ್ ಅಲಭ್ಯವಾಗುವುದು ಖಚಿತವಾಗಿದೆ. ಅನುಭವಿ ಆಟಗಾರ ಕೆಎಲ್ ರಾಹುಲ್ ಅವರ ಅಲಭ್ಯತೆಯಲ್ಲಿ ಆಲ್‌ರೌಂಡರ್ ಕೃನಾಲ್ ಪಾಂಡ್ಯ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಮುನ್ನಡೆಸಲಿದ್ದಾರೆ. ಕಳೆದ ಆರ್‌ಸಿಬಿ ವಿರುದ್ಧದ ಪಂದ್ಯದಲ್ಲಿಯೂ ಕೃನಾಲ್ ಮುನ್ನಡೆಸುವ ಜವಾಬ್ಧಾರಿ ವಹಿಸಿಕೊಂಡಿದ್ದರು.

ಟೂರ್ನಿಯಿಮದ ಹೊರಬಿದ್ದ ವೇಗಿ ಉನಾದ್ಕಟ್

ಇನ್ನು ಲಕ್ನೋ ಸೂಪರ್ ಜೈಂಟ್ಸ್ ತಂಡದ ಅನುಭವಿ ವೇಗಿ ಜಯ್‌ದೇವ್ ಉನಾದ್ಕಟ್ ಅಭ್ಯಾಸ ನಡೆಸುವ ಸಂದರ್ಭದಲ್ಲಿ ಭುಜದ ನೋವಿಗೆ ತುತ್ತಾಗಿದ್ದು ಉಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ಆಡಲು ಉನಾದ್ಕಟ್ ಅಸಮರ್ಥರಾಗಿರುವ ಕಾರಣ ಟೂರ್ನಿಯಿಂದ ಹೊರಗುಳಿಯುವಂತಾಗಿದೆ. ಹೀಗಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಈ ಆವೃತ್ತಿಯ ಮುಂದಿನ ಪಂದ್ಯಗಳಲ್ಲಿ ಅನುಭವಿ ವೇಗಿಯ ಸೇವೆಯಿಂದ ವಂಚಿತವಾಗಲಿದೆ.

"ಕೊಟ್ರೆ ಅದನ್ನು ತೆಗೆದುಕೊಳ್ಳಲು ಸಿದ್ಧವಿರಬೇಕು": ಡ್ರೆಸ್ಸಿಂಗ್‌ರೂಮ್‌ನಲ್ಲಿ ಕೊಹ್ಲಿ ಆಡಿದ ಮಾತು ಬಹಿರಂಗ!:ವಿಡಿಯೋ

ಲಕ್ನೋ ಸೂಪರ್ ಜೈಂಟ್ಸ್ ತಂಡ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದು ಆಡಿರುವ 9 ಪಂದ್ಯಗಳ ಪೈಕಿ ಐದು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ನಾಲ್ಕರಲ್ಲಿ ಸೋಲು ಕಂಡಿದೆ. ಹೀಗಾಗಿ 10 ಅಂಕಗಳನ್ನು ಖಾತೆಯಲ್ಲಿ ಹೊಂದಿದೆ. ಆದರೆ ಕಳೆದ ಪಂದ್ಯದಲ್ಲಿ ಆರ್‌ಸಿಬಿ ತಂಡದ ವಿರುದ್ಧ ತನ್ನ ತವರಿನಲ್ಲಿಯೇ ಆಘಾತಕಾರಿ ರೀತಿಯಲ್ಲಿ ಸೋಲು ಅನುಭವಿಸಿದ್ದು ತಂಡದ ಆತ್ಮವಿಶ್ವಾಸ ಕುಗ್ಗಿಸಿದೆ. ಲೋ ಸ್ಕೋರಿಂಗ್ ಪಂದ್ಯದಲ್ಲಿಯೂ ಆರ್‌ಸಿಬಿ ತಂಡದ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ ತನ್ನ ತವರಿನಲ್ಲಿಯೇ ಸೋಲಿನ ಮುಖಭಂಗಕ್ಕೆ ಒಳಗಾಗಿತ್ತು.

ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ವಿರುದ್ಧದ ಈ ಪಂದ್ಯ ಲಕ್ನೋದ ಏಕಾನ ಕ್ರೀಡಾಂಗಣದಲ್ಲಿ ಮೇ 3 ಬುಧವಾರ ಸಂಜೆ ಆಯೋಜನೆಯಾಗಲಿದೆ. ಸಂಜೆ 7:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 7 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಇನ್ನು ಸ್ಟಾರ್ ಸ್ಪೋರ್ಟ್ಸ್ ವಾಹಿನಿ ಪಂದ್ಯದ ನೇರಪ್ರಸಾರ ಮಾಡಿದರೆ ಜಿಯೋ ಸಿನಿಮಾದಲ್ಲಿ ಲೈವ್‌ಸ್ಟ್ರೀಮಿಂಗ್ ಮೂಲಕ ವೀಕ್ಷಿಸುವ ಅವಕಾಶವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+