LSG Vs MI: ಸ್ಟೊಯಿನಿಸ್ ಜವಾಬ್ದಾರಿಯುತ ಆಟ; ಮುಂಬೈ ಮಣಿಸಿದ ಲಕ್ನೋ
ಲಕ್ನೋದ ಏಕಾನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ನಾಲ್ಕು ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ. ಈ ಮೂಲಕ ಪ್ಲೇ ಆಫ್ ಸ್ಥಾನಕ್ಕೆ ಲಕ್ನೋ ಮತ್ತಷ್ಟು ಹತ್ತಿರವಾಗಿದೆ.
ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 144 ರನ್ ಕಲೆಹಾಕಿತು. ಇಶಾನ್ ಕಿಶಾನ್ 36 ಎಸೆತಗಳಲ್ಲಿ 32 ರನ್ ಗಳಿಸಿದರೆ, ನೇಹಲ್ ವಧೇರಾ 41 ಎಸೆತಗಳಲ್ಲಿ 46 ರನ್ ಗಳಿಸಿ ತಂಡಕ್ಕೆ ನೆರವಾದರು. ಕೊನೆಯ ಓವರ್ ಗಳಲ್ಲಿ ಟಿಮ್ ಡೇವಿಡ್ 18 ಎಸೆತಗಳಲ್ಲಿ ಅಜೇಯ 35 ರನ್ ಗಳಿಸಿ ಸವಾಲಿನ ಮೊತ್ತ ಕಲೆಹಾಕಲು ಕಾರಣವಾದರು.

ಮೊಹ್ಸಿನ್ ಖಾನ್ 2 ವಿಕೆಟ್ ಪಡೆದರೆ, ಮಾರ್ಕಸ್ ಸ್ಟೊಯಿನಿಸ್, ನವೀನ್ ಉಲ್ ಹಕ್, ಮಯಾಂಕ್ ಯಾದವ್, ರವಿ ಬಿಷ್ಣೋಯಿ ತಲಾ ಒಂದು ವಿಕೆಟ್ ಪಡೆದರು.
ಸ್ಟೊಯಿನಿಸ್ ಜವಾಬ್ದಾರಿಯುತ ಆಟ
145 ರನ್‌ಗಳ ಮೊತ್ತವನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ 19.2 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು ಈ ಗುರಿಯನ್ನು ಬೆನ್ನತ್ತುವ ಮೂಲಕ ನಾಲ್ಕು ವಿಕೆಟ್‌ಗಳ ಗೆಲುವು ಸಾಧಿಸಿತು. ಆರಂಭದಲ್ಲೇ ಅರ್ಷಿನ್ ಕುಲಕರ್ಣಿ ಸೊನ್ನೆಗೆ ಔಟಾದರು, ನಾಯಕ ಕೆಎಲ್ ರಾಹುಲ್ ಮತ್ತು ಮಾರ್ಕಸ್ ಸ್ಟೊಯಿನಿಸ್ ಜವಾಬ್ದಾರಿಯುತ ಇನ್ನಿಂಗ್ಸ್ ಆಡಿದರು.
ಕೆಎಲ್ ರಾಹುಲ್ 22 ಎಸೆತಗಳಲ್ಲಿ 28 ರನ್ ಗಳಿಸಿದರು, ಮಾರ್ಕಸ್ ಸ್ಟೊಯಿನಿಸ್ 45 ಎಸೆತಗಳಲ್ಲಿ 62 ರನ್ ಗಳಿಸಿದರು. ನಿಕೋಲಸ್ ಪೂರನ್ 14 ಎಸೆತಗಳಲ್ಲಿ ಅಜೇಯ 14 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.
ಈ ಗೆಲುವಿನ ಮೂಲಕ ಲಕ್ನೋ ಸೂಪರ್ ಜೆಂಟ್ಸ್ 12 ಅಂಕಗಳೊಂದಿಗೆ, ಮೂರನೇ ಸ್ಥಾನಕ್ಕೇರಿದೆ. ಇನ್ನು ನಾಲ್ಕು ಪಂದ್ಯಗಳು ಇದ್ದು, ಎರಡು ಪಂದ್ಯಗಳಲ್ಲಿ ಗೆಲುವು ಸಾಧಿಸಿದರೂ ಪ್ಲೇ ಆಫ್ ತಲುಪುವ ಸಾಧ್ಯತೆ ಇದೆ.












Click it and Unblock the Notifications