LSG vs PBKS: ಮಯಾಂಕ್ ಯಾದವ್ ವೇಗಕ್ಕೆ ದಂಗಾದ ಕ್ರಿಕೆಟ್ ಜಗತ್ತು; ಐಪಿಎಲ್ 2024ರ ವೇಗದ ಬೌಲರ್!
ಭಾರತ ತಂಡಕ್ಕೆ ಮತ್ತೊಬ್ಬ ವೇಗಿ ಸಿಕ್ಕಿದ್ದಾನೆ. 21 ವರ್ಷದ ಯುವಕ ವೇಗ ನೋಡಿ ಕ್ರಿಕೆಟ್ ಜಗತ್ತೇ ಅಚ್ಚರಿಗೊಂಡಿದೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಆವೃತ್ತಿಯ ವೇಗದ ಎಸೆತ ಎಸದ ಮಯಾಂಕ್ ಯಾದವ್ ಎದುರಾಳಿಗಳನ್ನು ತಬ್ಬಿಬ್ಬುಗೊಳಿಸಿದರು.
ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪರವಾಗಿ ಚೊಚ್ಚಲ ಪಂದ್ಯವನ್ನಾಡಿದ ಮಯಾಂಕ್ ಯಾದವ್ ತಮ್ಮ ವೇಗದ ಬೌಲಿಂಗ್ ಮೂಲಕ ಪಂಜಾಬ್ ಕಿಂಗ್ಸ್ ಬ್ಯಾಟರ್ ಗಳನ್ನು ದಂಗಾಗಿಸಿದರು.

ಐಪಿಎಲ್ 2024 ಆವೃತ್ತಿಯಲ್ಲಿ ಗಂಟೆಗೆ 150 ಕಿ.ಮೀ. ವೇಗದಲ್ಲಿ ಬೌಲ್ ಮಾಡಿದ ಮೊದಲ ಭಾರತೀಯ ವೇಗಿ ಎನಿಸಿಕೊಂಡರು. ಬಳಿಕ ಕೆಲವೇ ಕ್ಷಣಗಳಲ್ಲಿ ಅವರ ಬೌಲಿಂಗ್ ವೇಗ 155.8 ಕಿಮೀ ವೇಗವನ್ನು ತಲುಪಿತು. ಇದು ಈ ಬಾರಿ ಐಪಿಎಲ್‌ನ ಅತ್ಯಂತ ವೇಗದ ಎಸೆತವಾಗಿದೆ.
ಪಂಜಾಬ್ ಗೆಲುವಿನ ಕನಸಿಗೆ ಅಡ್ಡಿ
200 ರನ್‌ಗಳ ಗುರಿಯನ್ನು ಬೆನ್ನತ್ತಿದ ಪಂಜಾಬ್ ಒಂದು ಹಂತದಲ್ಲಿ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು. ಮೊದಲ ವಿಕೆಟ್‌ಗೆ ಜಾನಿ ಬೈರ್ ಸ್ಟೋ ಮತ್ತು ನಾಯಕ ಶಿಖರ್ ಧವನ್ 11.4 ಓವರ್ ಗಳಲ್ಲಿ 102 ರನ್ ಕಲೆಹಾಕಿದರು. ಈ ಹಂತದಲ್ಲಿ ದಾಳಿಗೆ ಇಳಿದ ಮಯಾಂಕ್ ಯಾದವ್ ಜಾನಿ ಬೈರ್‍ಸ್ಟೋ ವಿಕೆಟ್ ಪಡೆದು ಪಂಜಾಬ್ ಓಟಕ್ಕೆ ಅಡ್ಡಿಯಾದರು.
ಅದಾದ ಬಳಿಕ ಪ್ರಭ್‌ಸಿಮ್ರಾನ್ ಸಿಂಗ್, ಜಿತೇಶ್ ಶರ್ಮಾ ಅವರ ವಿಕೆಟ್ ಪಡೆಯುವ ಮೂಲಕ ಮತ್ತೆ ಆಘಾತ ನೀಡಿದರು. ಮೊದಲ ಪಂದ್ಯದಲ್ಲೇ ಅತಿ ವೇಗದ ಬೌಲಿಂಗ್ ಮಾಡಿದ ಮಯಾಂಕ್ ಯಾದವ್ 4 ಓವರ್ ಗಳಲ್ಲಿ ಕೇವಲ 27 ರನ್ ನೀಡಿ 3 ವಿಕೆಟ್ ಪಡೆದು ಮಿಂಚಿದರು.
ಮಯಾಂಕ್ ಯಾದವ್ ಪ್ರದರ್ಶನ ನೋಡಿದ ಮಾಜಿ ಕ್ರಿಕೆಟಿಗರು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದು, ಇವರು ಶೀಘ್ರದಲ್ಲೇ ಭಾರತ ತಂಡಕ್ಕೆ ಆಡುವಂತಾಗಲಿ ಎಂದು ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧ ನಡೆದ ಟೆಸ್ಟ್ ಸರಣಿಯಲ್ಲೇ ಮಯಾಂಕ್ ಯಾದವ್ ಭಾರತ ತಂಡಕ್ಕಾಗಿ ಆಯ್ಕೆಯಾಗಬೇಕಿತ್ತು, ಆದರೆ ಆಗ ಅವರು ಮಂಡಿರಜ್ಜು ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ ಅವಕಾಶ ತಪ್ಪಿಸಿಕೊಂಡಿದ್ದರು. ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಅವರು ಮಯಾಂಕ್ ಯಾದವ್ ಮೇಲೆ ಕಣ್ಣಿಟ್ಟಿದ್ದು ಆದಷ್ಟು ಬೇಗನೆ ಭಾರತ ತಂಡಕ್ಕೆ ಆಯ್ಕೆ ಮಾಡುವ ಸಾಧ್ಯತೆ ಇದೆ.
ಜಸ್ಪ್ರೀತ್ ಬುಮ್ರಾ ಜೊತೆ ಮಯಾಂಕ್ ಯಾದವ್ ಬೌಲಿಂಗ್ ಮಾಡುವುದನ್ನು ನೋಡಲು ಅಭಿಮಾನಿಗಳು ಕಾತರರಾಗಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications