KL Rahul: ಕನ್ನಡಿಗ ಕೆಎಲ್ ರಾಹುಲ್ ವಿರುದ್ಧ ಎಲ್‌ಎಸ್‌ಜಿ ಮಾಲಿಕರ ಅಸಮಾಧಾನ; ರೊಚ್ಚಿಗೆದ್ದ ಫ್ಯಾನ್ಸ್!
ಐಪಿಎಲ್ 2024ರ ಆವೃತ್ತಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆದರೂ ತಂಡದ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ. ಬುಧವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 164 ರನ್ ಕಲೆಹಾಕಿತು. ಈ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ 9.4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 165 ರನ್ ಗಳಿಸುವ ಮೂಲಕ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ಲಕ್ನೋ ಸೂಪರ್ ಜೈಂಟ್ಸ್ ತಂಡದ ಪ್ರದರ್ಶನ ಕಂಡು ಪ್ರಾಂಚೈಸ್‌ನ ಮಾಲಿಕ ಸಂಜೀವ್ ಗೊಯೆಂಕಾ ಅಸಮಾಧಾನಗೊಂಡಿದ್ದರು. ಕ್ಯಾಮೆರಾ ಎದುರಿಗೇ ತಂಡದ ನಾಯಕ ಕೆಎಲ್ ರಾಹುಲ್ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಇದು ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
ಗೊಯೆಂಕಾ ವಿರುದ್ಧ ಫ್ಯಾನ್ಸ್ ಆಕ್ರೋಶ
ಸಂಜೀವ್ ಗೊಯೆಂಕಾ ವರ್ತನೆಗೆ ಕ್ರಿಕೆಟ್ ಅಭಿಮಾನಿಗಳು ಕೋಪಗೊಂಡಿದ್ದು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೊಯೆಂಕಾ ಅವರಿಗೆ ಕ್ರಿಕೆಟ್ ಗಂಧಗಾಳಿಯೇ ಗೊತ್ತಿಲ್ಲ, ಸುಮ್ಮನೆ ಬಂದು ತಂಡದ ನಾಯಕನ ಮೇಲೆ ಕೂಗಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಇನ್ನೂ ಕೆಲವರು ಈ ರೀತಿ ಬಹಿರಂಗವಾಗಿ ಕ್ಯಾಮೆರಾ ಎದುರು ನಿಮ್ಮ ಅಸಮಾಧಾನ ತೋರಿಸುವ ಬದಲು ಡ್ರೆಸ್ಸಿಂಗ್ ರೂಮ್‌ನಲ್ಲಿ ಮಾತನಾಡಿದ್ದರೆ ಘನತೆಗೆ ತಕ್ಕಂತೆ ಇರುತ್ತಿತ್ತು, ಆಟದಲ್ಲಿ ಸೋಲು ಗೆಲುವು ಸಹಜ ಎಂದು ಹೇಳಿದ್ದಾರೆ.
This Sanjiv Goenka Lucknow IPL team’s owner is disrespecting our Kannadiga pride KL Rahul.
— Chandan Sinha (@chandanAIPC) May 8, 2024
He is a serial offender and he has disrespected MS Dhoni when he captained Pune team.
pic.twitter.com/szajAvEfPU
ಕೆಎಲ್ ರಾಹುಲ್ ಭಾರತ ತಂಡದ ಹೆಮ್ಮೆಯ ಆಟಗಾರ ಆತನನ್ನು ನಿಂದಿಸುವ ಯಾವ ಹಕ್ಕು ನಿಮಗಿಲ್ಲ ಎಂದು ಅಭಿಮಾನಿಗಳು ಸಂಜೀವ್ ಗೊಯೆಂಕಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕೆಎಲ್ ರಾಹುಲ್ ವಿರುದ್ಧ ಮಾತ್ರವಲ್ಲದ ಕೋಚಿಂಗ್ ಸಿಬ್ಬಂದಿ ವಿರುದ್ಧ ಕೂಡ ಅಸಮಾಧಾನ ವ್ಯಕ್ತಪಡಿಸುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಟ್ರೆಂಡಿಂಗ್ ಆಗುತ್ತಿವೆ.
ಕೆಲವು ಅಭಿಮಾನಿಗಳು ಇದು ಕೊನೆಯ ಬಾರಿ ಎಲ್‌ಎಸ್‌ಜಿ ತಂಡಕ್ಕಾಗಿ ಕೆಎಲ್ ರಾಹುಲ್ ಆಡಲಿದ್ದು, ಮುಂದಿನ ವರ್ಷ ಅವರನ್ನು ಗೊಯೆಂಕಾ ರಿಟೈನ್ ಮಾಡುವುದಿಲ್ಲ ಎಂದಿದ್ದಾರೆ. ಇನ್ನೂ ಕೆಲವರು ಕೆಎಲ್ ರಾಹುಲ್ ಅವರೇ ತಂಡದಿಂದ ಹೊರಬರಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications