RR vs LSG: ರಾಜಸ್ಥಾನ ರಾಯಲ್ಸ್ ವಿರುದ್ಧ ರೋಚಕ ಗೆಲುವು ಸಾಧಿಸಿದ ಲಕ್ನೋ ಸೂಪರ್ ಜೈಂಟ್ಸ್

ಐಪಿಎಲ್ 2025ರ ಆವೃತ್ತಿಯಲ್ಲಿ ಮತ್ತೊಂದು ರೋಚಕ ಪಂದ್ಯಕ್ಕೆ ಕ್ರಿಕೆಟ್ ಅಭಿಮಾನಿಗಳು ಸಾಕ್ಷಿಯಾದರು. ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ರಾಜಸ್ಥಾನ ರಾಯಲ್ಸ್ ವಿರುದ್ಧ 2 ರನ್‌ಗಳ ರೋಚಕ ಗೆಲುವು ಸಾಧಿಸಿತು. ಕೊನೆಯ ಓವರ್ ವರೆಗೂ ಸುಲಭ ಗೆಲುವಿನ ನಿರೀಕ್ಷೆಯಲ್ಲಿದ್ದ ರಾಜಸ್ಥಾನ ರಾಯಲ್ಸ್‌ಗೆ ಸೋಲಿನ ಆಘಾತ ಸಿಕ್ಕಿತು.

ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 180 ರನ್ ಕಲೆಹಾಕಿತು. ಏಡೆನ್ ಮಾರ್ಕ್ರಮ್ 45 ಎಸೆತಗಳಲ್ಲಿ 66 ರನ್ ಗಳಿಸಿದರು. ಆಯುಷ್ ಬದೋನಿ 34 ಎಸೆತಗಳಲ್ಲಿ 50 ರನ್ ಗಳಿಸಿದರೆ, ಅಬ್ದುಲ್ ಸಮದ್ 10 ಎಸೆತಗಳಲ್ಲಿ ಅಜೇಯ 30 ರನ್ ಗಳಿಸುವ ಮೂಲಕ ಲಕ್ನೋ ಸೂಪರ್ ಜೈಂಟ್ಸ್‌ ಸವಾಲಿನ ಮೊತ್ತ ಕಲೆಹಾಕಲು ನೆರವಾದರು. ವನಿಂದು ಹಸರಂಗ 2 ವಿಕೆಟ್ ಪಡೆದರೆ, ಜೋಫ್ರಾ ಆರ್ಚರ್, ಸಂದೀಪ್ ಶರ್ಮಾ ಮತ್ತು ತುಷಾರ್ ದೇಶಪಾಂಡೆ ತಲಾ 1 ವಿಕೆಟ್ ಪಡೆದರು.

Lucknow super giants win against rajasthan royals in last over thriller ipl 2025

ಉತ್ತಮ ಆರಂಭ ಪಡೆದ ರಾಜಸ್ಥಾನ

ನಾಯಕ ಸಂಜು ಸ್ಯಾಮ್ಸನ್ ಗಾಯದ ಕಾರಣದಿಂದ ಈ ಪಂದ್ಯದಲ್ಲಿ ತಂಡದಿಂದ ಹೊರಗುಳಿದಿದ್ದರು. ಅವರ ಬದಲಾಗಿ ಅವಕಾಶ ಪಡೆದ 14 ವರ್ಷದ ವೈಭವ್ ಸೂರ್ಯವಂಶಿ ಯಶಸ್ವಿ ಜೈಸ್ವಾಲ್ ಜೊತೆ ಸ್ಫೋಟಕ ಆರಂಭ ಒದಗಿಸಿದರು. 8.4 ಓವರ್ ಗಳಲ್ಲೇ ಈ ಜೋಡಿ ಮೊದಲ ವಿಕೆಟ್‌ಗೆ 85 ರನ್ ಕಲೆಹಾಕಿತು. ವೈಭವ್ ಸೂರ್ಯವಂಶಿ 20 ಎಸೆತಗಳಲ್ಲಿ 34 ರನ್ ಗಳಿಸಿದರು. ಯಶಸ್ವಿ ಜೈಸ್ವಾಲ್ 52 ಎಸೆತಗಳಲ್ಲಿ 5 ಬೌಂಡರಿ 4 ಸಿಕ್ಸರ್ ಸಹಿತ 74 ರನ್ ಗಳಿಸಿದರೂ ತಂಡವನ್ನು ಗೆಲುವಿನ ದಡ ಸೇರಿಸುವ ಮೊದಲೇ ಔಟಾದರು.

ನಿತೀಶ್ ರಾಣಾ 8 ರನ್ ಗಳಿಸಿದರೆ, ನಾಯಕ ರಿಯಾನ್ ಪರಾಗ್ 39 ರನ್ ಗಳಿಸಿದರು. ಧ್ರುವ್ ಜುರೆಲ್ ಅಜೇಯ 6 ರನ್ ಗಳಿಸಿದರು. ಶಿಮ್ರಾನ್ ಹೆಟ್ಮೆಯರ್ 12 ರನ್ ಗಳಿಸಿ ಔಟಾದರು. ಕೊನೆಯ ಓವರ್ ನಲ್ಲಿ ರಾಜಸ್ಥಾನ ರಾಯಲ್ಸ್ ಗೆಲುವಿಗೆ 9 ರನ್ ಬೇಕಿತ್ತು, ಆವೇಶ್ ಖಾನ್ ಉತ್ತಮ ಬೌಲಿಂಗ್ ಮಾಡುವ ಮೂಲಕ 2 ವಿಕೆಟ್ ಪಡೆದು ಕೇವಲ 6 ರನ್ ನೀಡಿ ಲಕ್ನೋ ಸೂಪರ್ ಜೈಂಟ್ಸ್‌ಗೆ 2 ರನ್‌ಗಳ ರೋಚಕ ಗೆಲುವು ತಂದುಕೊಟ್ಟರು.

ಈ ಗೆಲುವಿನ ಮೂಲಕ ಲಕ್ನೋ ಸೂಪರ್ ಜೈಂಟ್ಸ್ 8 ಪಂದ್ಯಗಳಲ್ಲಿ 5 ರಲ್ಲಿ ಗೆಲುವು ಸಾಧಿಸಿದ್ದು 10 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ಜಿಗಿದಿದೆ. ಆರ್ ಸಿಬಿ 5ನೇ ಸ್ಥಾನಕ್ಕೆ ಕುಸಿದಿದ್ದು, ಭಾನುವಾರ ನಡೆಯಲಿರುವ ಪಂಜಾಬ್ ಕಿಂಗ್ಸ್ ವಿರುದ್ಧ ಗೆಲುವು ಸಾಧಿಸಿದರೆ ಮತ್ತೊಮ್ಮೆ ಮೂರನೇ ಸ್ಥಾನಕ್ಕೇರುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+