ಐಪಿಎಲ್ 2026: ಲುಂಗಿ ಎನ್ಗಿಡಿ ಶೀಘ್ರ ಗುಣಮುಖರಾಗಿ ಮೈದಾನಕ್ಕೆ ಮರಳಲಿ ಎಂದು ಹಾರೈಸಿ ಕ್ರೀಡಾ ಸ್ಫೂರ್ತಿ ಮೆರೆದ 10 ಫ್ರಾಂಚೈಸಿಗಳು
Lungi Ngidi: ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್ಗಿಡಿ ಅವರು ಗಾಯದ ಕಾರಣದಿಂದ ಪ್ರಸಕ್ತ ಐಪಿಎಲ್ ಆವೃತ್ತಿಯಿಂದ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಆರ್‌ಸಿಬಿ ಸೇರಿದಂತೆ ಎಲ್ಲಾ ಐಪಿಎಲ್ ಫ್ರಾಂಚೈಸಿಗಳು ಅವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿವೆ.
ದಕ್ಷಿಣ ಆಫ್ರಿಕಾದ ವೇಗಿ ಲುಂಗಿ ಎನ್ಗಿಡಿ ಅವರು ಗಾಯದ ಸಮಸ್ಯೆಯಿಂದಾಗಿ ಐಪಿಎಲ್ 2026ರ ಉಳಿದ ಪಂದ್ಯಗಳಿಗೆ ಲಭ್ಯವಿರುವುದಿಲ್ಲ ಎಂದು ದೆಹಲಿ ಕ್ಯಾಪಿಟಲ್ಸ್ ತಂಡ ಅಧಿಕೃತವಾಗಿ ತಿಳಿಸಿದೆ. ಎನ್ಗಿಡಿ ಅವರ ಅನುಪಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಕ್ಯಾಪಿಟಲ್ಸ್ ಸೇರಿದಂತೆ ಇತರ ತಂಡಗಳು ಸಾಮಾಜಿಕ ಜಾಲತಾಣಗಳ ಮೂಲಕ ಅವರು ಶೀಘ್ರ ಗುಣಮುಖರಾಗಿ ಮೈದಾನಕ್ಕೆ ಮರಳಲಿ ಎಂದು ಹಾರೈಸಿವೆ.

ಕ್ರೀಡಾ ಸ್ಫೂರ್ತಿ ಮೆರೆದ 10 ಫ್ರಾಂಚೈಸಿಗಳು
ಎನ್ಗಿಡಿ ಅವರ ಸ್ಥಾನಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ದಕ್ಷಿಣ ಆಫ್ರಿಕಾದ ಮತ್ತೊಬ್ಬ ವೇಗಿ ಲಿಜಾದ್ ವಿಲಿಯಮ್ಸ್ ಅವರನ್ನು ಬದಲಿ ಆಟಗಾರನನ್ನಾಗಿ ಸೇರಿಸಿಕೊಂಡಿದೆ. ಲುಂಗಿ ಎನ್ಗಿಡಿ ಅವರು ಈ ಹಿಂದೆ ಚೆನ್ನೈ ಸೂಪರ್ ಕಿಂಗ್ಸ್ ಪರವಾಗಿಯೂ ಆಡಿದ್ದರು ಮತ್ತು ಐಪಿಎಲ್‌ನಲ್ಲಿ ತಮ್ಮ ವೇಗದ ಬೌಲಿಂಗ್ ಮೂಲಕ ಗುರುತಿಸಿಕೊಂಡಿದ್ದರು. ಇದೀಗ ಅವರ ಅಲಭ್ಯತೆಯು ಡೆಲ್ಲಿ ತಂಡದ ಬೌಲಿಂಗ್ ವಿಭಾಗಕ್ಕೆ ಹಿನ್ನಡೆಯಾಗಿ ಪರಿಣಮಿಸಿದೆ. ಒಟ್ಟಿನಲ್ಲಿ ಎಲ್ಲಾ ಫ್ರಾಂಚೈಸಿಗಳು ಗಾಯಗೊಂಡ ಆಟಗಾರನ ಬೆಂಬಲಕ್ಕೆ ನಿಂತು ಕ್ರೀಡಾ ಸ್ಫೂರ್ತಿ ಮೆರೆದಿವೆ.
ಗೆಲುವು ಸಾಧಿಸಿದ ಪಂಜಾಬ್ ಕಿಂಗ್ಸ್
ದೆಹಲಿಯಲ್ಲಿ ಶನಿವಾರ ನಡೆದ ಐಪಿಎಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವು ದಾಖಲೆಗಳನ್ನು ಪುಡಿಗಟ್ಟಿದೆ. ದೆಹಲಿ ಕ್ಯಾಪಿಟಲ್ಸ್ ನೀಡಿದ್ದ 265 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್, ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಯಶಸ್ವಿ ರನ್ ಬೆನ್ನಟ್ಟುವಿಕೆಯ ಹೊಸ ದಾಖಲೆಯನ್ನು ಬರೆಯುವ ಮೂಲಕ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಡೆಲ್ಲಿ ಕ್ಯಾಪಿಟಲ್ಸ್, 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 264 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು. ಕೆ.ಎಲ್. ರಾಹುಲ್ ಸ್ಫೋಟಕ ಬ್ಯಾಟಿಂಗ್ ಆಡಿ ಕೇವಲ 67 ಎಸೆತಗಳಲ್ಲಿ ಅಜೇಯ 152 ರನ್ ಸಿಡಿಸಿದರು. ಇದು ಐಪಿಎಲ್ ಇತಿಹಾಸದ ಮೂರನೇ ಅತಿ ಹೆಚ್ಚು ವೈಯಕ್ತಿಕ ಸ್ಕೋರ್ ಆಗಿದೆ. ಆದರೆ, ಭಾರತೀಯ ಆಟಗಾರನ ಪರವಾಗಿ ಇದೇ ಮೊದಲಾಗಿದೆ.
ಲುಂಗಿ ಎನ್ಗಿಡಿಗಾಗಿ ಒಂದಾದ ಫ್ರಾಂಚೈಸಿಗಳು
ನಿತೀಶ್ ರಾಣಾ ಅವರು 44 ಎಸೆತಗಳಲ್ಲಿ 91 ರನ್ ಬಾರಿಸಿ ರಾಹುಲ್ ಅವರಿಗೆ ಉತ್ತಮ ಬೆಂಬಲ ನೀಡಿದರು. ಈ ಜೋಡಿಯು ಎರಡನೇ ವಿಕೆಟ್‌ಗೆ ದಾಖಲೆಯ 220 ರನ್‌ಗಳ ಜೊತೆಯಾಟವಾಡಿತು. ಇಷ್ಟು ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್ ಕಿಂಗ್ಸ್, ಪ್ರಭ್‌ಸಿಮ್ರಾನ್ ಸಿಂಗ್ 76 ಮತ್ತು ಶ್ರೇಯಸ್ ಅಯ್ಯರ್ ಅಜೇಯ 71 ರನ್‌ಗಳ ನೆರವಿನಿಂದ ಏಳು ಎಸೆತಗಳು ಬಾಕಿ ಇರುವಾಗಲೇ ಗೆಲುವಿನ ಗುರಿ ತಲುಪಿತು. ಈ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಈ ಹಿಂದೆ ತನ್ನದೇ ಹೆಸರಿನಲ್ಲಿದ್ದ (ಕೆಕೆಆರ್ ವಿರುದ್ಧದ 261 ರನ್ ಬೆನ್ನಟ್ಟಿದ) ದಾಖಲೆಯನ್ನು ಅಳಿಸಿ ಹಾಕಿತು. ಇದೆಲ್ಲದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವೇಗಿ ಲುಂಗಿ ಎನ್ಗಿಡಿ ಅವರ ತಲೆಗೆ ಹೊಡೆತ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಶಿಘ್ರ ಗುಣಮುಖರಾಗಿ ಮೈದಾನಕ್ಕೆ ಮರಳಿ ಎಂದು ಎಲ್ಲಾ ಫ್ರಾಂಚೈಸಿಗಳು ಹಾಗೂ ಅಭಿಮಾನಿಗಳು ಹಾರೈಸಿ ಕ್ರೀಡಾ ಸ್ಫೂರ್ತಿ ಮೆರೆದಿದ್ದಾರೆ.
ಕ್ರೀಡಾ ಸ್ಫೂರ್ತಿ ಮೆರೆದ ಫ್ರಾಂಚೈಸಿಗಳು
ಪಂಜಾಬ್ ಕಿಂಗ್ಸ್
Hope Lungi is fine! 🤞
— Punjab Kings (@PunjabKingsIPL) April 25, 2026
ಲಕ್ನೋ ಸೂಪರ್ ಜೈಂಟ್ಸ್
— Delhi Capitals (@DelhiCapitals) April 25, 2026












Click it and Unblock the Notifications