Ind vs Aus: ಗಬ್ಬಾ ಟೆಸ್ಟ್‌ನಲ್ಲಿ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ!

ಅಡಿಲೇಟ್‌ನಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಎರಡನೇ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳ ಹೀನಾಯ ಸೋಲನುಭವಿಸಿದ್ದು, ಮೂರನೇ ಟೆಸ್ಟ್‌ಗೆ ಸಜ್ಜಾಗುತ್ತಿದೆ. ಡಿಸೆಂಬರ್ 14ರಂದು ಮೂರನೇ ಟೆಸ್ಟ್ ಆರಂಭವಾಗಲಿದ್ದು ಭಾರತ ಸೋಲಿನ ಸುಳಿಯಿಂದ ಹೊರಬರಲು ರಣತಂತ್ರ ರೂಪಿಸುತ್ತಿದೆ.

ಮೂರನೇ ಟೆಸ್ಟ್‌ ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಭಾರತ ತಂಡ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ ಎಂದು ನಿರೀಕ್ಷೆ ಮಾಡಲಾಗಿದೆ. ಪರ್ತ್ ಟೆಸ್ಟ್‌ನಲ್ಲಿ ಭಾರತ ಗೆಲುವು ಸಾಧಿಸಿದ್ದು, ಅಡಿಲೇಡ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ಗೆಲುವು ಸಾಧಿಸಿದೆ. ಸದ್ಯ 5 ಪಂದ್ಯಗಳ ಸರಣಿ 1-1ರಲ್ಲಿ ಸಮಬಲ ಸಾಧಿಸಿದ್ದು ಮೂರನೇ ಟೆಸ್ಟ್ ಗೆದ್ದು ಸರಣಿ ಮುನ್ನಡೆ ಸಾಧಿಸುವ ಯೋಜನೆ ಹೊಂದಿದೆ.

major changes team india playing xi in gabba test

ಪ್ಲೆಯಿಂಗ್ ಇಲೆವೆನ್ ಬದಲಾಯಿಸಲು ಪೂಜಾರಾ ಸಲಹೆ

ಭಾರತ ತಂಡದ ಹಿರಿಯ ಆಟಗಾರ ಚೇತೇಶ್ವರ ಪೂಜಾರ ಪ್ಲೇಯಿಂಗ್ ಇಲೆವೆನ್‌ನಲ್ಲಿ ಬದಲಾವಣೆ ಮಾಡಲು ಶಿಫಾರಸ್ಸು ಮಾಡಿದ್ದಾರೆ. ಗಬ್ಬಾ ಟೆಸ್ಟ್‌ನಲ್ಲಿ ಭಾರತ ಗೆಲ್ಲಬೇಕು ಎಂದರೆ ರವಿಚಂದ್ರನ್ ಅಶ್ವಿನ್ ಬದಲಾಗಿ ವಾಷಿಂಗ್ಟನ್ ಸುಂದರ್ ಆಡಬೇಕು ಎಂದಿದ್ದಾರೆ. ಅಡಿಲೇಡ್‌ನಲ್ಲಿ ರವಿಚಂದ್ರನ್ ಅಶ್ವಿನ್‌ ಉತ್ತಮ ಪ್ರದರ್ಶನ ನೀಡದ ಕಾರಣ ವಾಷಿಂಗ್ಟನ್ ಸುಂದರ್ ಗೆ ಅವಕಾಶ ನೀಡಬೇಕು ಎಂದು ಹೇಳಿದ್ದಾರೆ.

ಪ್ಲೇಯಿಂಗ್ ಇಲೆವೆನ್‌ನಲ್ಲಿ ಅದೊಂದು ಬದಲಾವಣೆ ಮಾಡಬೇಕು ಎಂದು ನಾನು ಭಾವಿಸುತ್ತೇನೆ. ಅಶ್ವಿನ್ ಬದಲಾಗಿ ವಾಷಿಂಗ್ಟನ್ ಸುಂದರ್ ಆಡಬಹುದು, ಹರ್ಷಿತ್ ರಾಣಾ ಬದಲಾಗಿ ಬೇರೊಬ್ಬ ಬೌಲರ್ ಕಣಕ್ಕಿಳಿಯಬೇಕಾ ಎನ್ನುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಅಭಿಪ್ರಾಯ ಅದಲ್ಲ, ಮೊದಲ ಎರಡು ಪಂದ್ಯಗಳಲ್ಲಿ ಅವರು ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಗಬ್ಬಾ ಟೆಸ್ಟ್‌ನಲ್ಲಿ ಆಡಬೇಕು ಎಂದಿದ್ದಾರೆ.

2021ರಲ್ಲಿ ನಡೆದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಬ್ರಿಸ್ಬೇನ್ ಟೆಸ್ಟ್‌ನಲ್ಲಿ ಭಾರತದ ಗೆಲುವಿನಲ್ಲಿ ವಾಷಿಂಗ್ಟನ್ ಸುಂದರ್ ಪ್ರಮುಖ ಪಾತ್ರ ವಹಿಸಿದ್ದರು. ವಾಷಿಂಗ್ಟನ್ ಸುಂದರ್ ಆಡಿದರೆ ಭಾರತದ ಬೌಲಿಂಗ್ ಜೊತೆ ಬ್ಯಾಟಿಂಗ್ ಕೂಡ ಬಲಿಷ್ಠವಾಗಲಿದೆ ಎಂದರು. ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ವಾಷಿಂಗ್ಟನ್ ಸುಂದರ್ 2 ವಿಕೆಟ್ ಪಡೆದಿದ್ದರು.

ಹರ್ಷಿತ್‌ ರಾಣಾರನ್ನು ಕೈಬಿಡಬೇಕಾ ಎಂದು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ಹರ್ಷಿತ್ ರಾಣಾ ಉತ್ತಮ ಬೌಲರ್, ಒಂದು ಪಂದ್ಯ ಕೆಟ್ಟದಾಗಿರಬಹುದು. ಅದಕ್ಕೆ ಅವರನ್ನು ಕೈಬಿಡಲು ಸಾಧ್ಯವಿಲ್ಲ ಬ್ಯಾಟಿಂಗ್‌ ಬಲ ಹೆಚ್ಚಿಸಬೇಕು ಎಂದು ಅಶ್ವಿನ್ ಬದಲಾಗಿ ಸುಂದರ್ ಆಡಬೇಕು ಎಂದು ಬಯಸುತ್ತೇನೆ ಎಂದರು. ಬ್ರಿಸ್ಬೇನ್ ಕಂಡಿಷನ್‌ ಹರ್ಷಿತ್ ರಾಣಾಗೆ ಉಪಯುಕ್ತವಾಗಲಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+