ಭದ್ರಾವತಿ; ಕ್ರಿಕೆಟ್ ಆಡುತ್ತಿದ್ದಾಗಲೇ ಯುವಕನಿಗೆ ಹೃದಯಾಘಾತ
ಶಿವಮೊಗ್ಗ, ಜೂನ್ 20: ಕ್ರಿಕೆಟ್ ಆಡುವಾಗ ಹೃದಯಾಘಾತ ಸಂಭವಿಸಿ ನಗರಸಭೆ ಹೊರಗುತ್ತಿಗೆ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಭದ್ರಾವತಿ ವಿಐಎಸ್ಎಲ್ ಕ್ರೀಡಾಂಗಣದಲ್ಲಿ ಘಟನೆ ಸಂಭವಿಸಿದೆ.
38 ವರ್ಷದ ದಿನೇಶ್ ರಾವ್ ಎಂಬುವರು ಮೃತಪಟ್ಟವರುದ. ಕ್ರಿಕೆಟ್ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುತ್ತಿದ್ದ ಸಂದರ್ಭದಲ್ಲಿ ದಿನೇಶ್ ರಾವ್ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಂಬುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆ ತಲುಪುವ ಮೊದಲೆ ದಿನೇಶ್ ರಾವ್ ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ. ದಿನೇಶ್‌ಗೆ ಪತ್ನಿ, ಪುತ್ರಿ ಮತ್ತು 20 ದಿನದ ಪುತ್ರ ಇದ್ದಾರೆ.
ನ್ಯೂಟೌನ್ ವಿಐಎಸ್‌ಎಲ್ ಕ್ರೀಡಾಂಗಣದಲ್ಲಿ ನಗರಸಭೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳು, ಸಿಬ್ಬಂದಿಗಾಗಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಉದ್ಘಾಟನಾ ಸಮಾರಂಭದ ಬಳಿಕ ನಗರಸಭೆ ಸದಸ್ಯರು ಮತ್ತು ವಾಟರ್ ಸಪ್ಲೆಯರ್‌ಗಳ ತಂಡದ ನಡುವೆ ಪಂದ್ಯಾವಳಿ ನಡೆಯುತ್ತಿತ್ತು. ಈ ವೇಳೆ ದಿನೇಶ್ ರಾವ್ ಫೀಲ್ಡಿಂಗ್ ಮಾಡುತ್ತಿದ್ದಾಗ ಕುಸಿದುಬಿದ್ದಿದ್ದರು.

ದಿನೇಶ್ ಕಳೆದ 7 ವರ್ಷಗಳಿಂದ ಗುತ್ತಿಗೆ ಆಧಾರದ ನೌಕರನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ದಿನೇಶ್ ಮೃತದೇಹವನ್ನು ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ದು ಮರಣೋತ್ತರ ಶವ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.












Click it and Unblock the Notifications