Paris Olympics 2024: ಶೂಟಿಂಗ್‌ನಲ್ಲಿ ಕಂಚು ಗೆದ್ದು ಹೊಸ ಇತಿಹಾಸ ಬರೆದ ಮನು ಭಾಕರ್; ಭಾರತದ ಪದಕದ ಭೇಟೆ ಆರಂಭ
ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಶೂಟಿಂಗ್ ಸೆನ್ಸೇಶನ್ ಮನು ಭಾಕರ್ ಕಂಚಿನ ಪದಕವನ್ನು ಗೆದ್ದು ಇತಿಹಾಸ ಬರೆದಿದ್ದಾರೆ. ಇದು ಮಹಿಳಾ ಶೂಟಿಂಗ್‌ನಲ್ಲಿ ಭಾರತಕ್ಕೆ ಮೊದಲ ಒಲಿಂಪಿಕ್ ಪದಕವಾಗಿದೆ.
ಮೂರನೇ ಸ್ಥಾನದಲ್ಲಿ ಫೈನಲ್‌ಗೆ ಅರ್ಹತೆ ಪಡೆದ ಮನು ಭಾಕರ್, ಅಪಾರ ಒತ್ತಡದಲ್ಲೂ ಸ್ಥಿರ ಪ್ರದರ್ಶನ ನೀಡಿದರು. ಕಂಚಿನ ಪದಕವನ್ನು ಭದ್ರಪಡಿಸಿಕೊಳ್ಳಲು ಭಾಕರ್ ಅತ್ಯುತ್ತಮ ಪ್ರದರ್ಶನ ನೀಡಿದರು. ತೀವ್ರ ಪೈಪೋಟಿ ನಡುವೆವೂ ಕಂಚು ಗೆಲ್ಲುವಲ್ಲಿ ಯಶಸ್ವಿಯಾದರು.

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ವಿಫಲವಾಗಿದ್ದ ಮನು ಭಾಕರ್, ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದುಕೊಂಡಿದ್ದಾರೆ. ಈ ಮೂಲಕ ತಮ್ಮ ವಿರುದ್ಧದ ಟೀಕೆಗಳಿಗೆ ಉತ್ತರ ಕೊಟ್ಟಿದ್ದಾರೆ.
ಕೇವಲ 0.1 ಅಂಕಗಳಿಂದ ಅವರು ಬೆಳ್ಳಿ ಪದಕವನ್ನು ತಪ್ಪಿಸಿಕೊಂಡರು. ಆದರೂ ಕಂಚನ್ನು ಗೆಲ್ಲುವಲ್ಲಿ ಯಶಸ್ವಿಯಾದರು. ತೀವ್ರ ಟೀಕೆಗಳನ್ನು ಎದರುಸಿದ್ದ 22 ವರ್ಷ ಮನು ಭಾಕರ್, ಎಲ್ಲವನ್ನೂ ಮೆಟ್ಟಿ ನಿಂತು ಶೂಟಿಂಗ್‌ನಲ್ಲಿ ಮೊದಲ ಪದಕ ಗೆದ್ದ ಭಾರತೀಯ ಮಹಿಳೆ ಎನಿಸಿಕೊಂಡಿದ್ದಾರೆ.
ಮಹಿಳಾ ಶೂಟಿಂಗ್ ವಿಭಾಗದಲ್ಲಿ ಪದಕದ ಗೆಲುವಿನ ಖಾತೆಯನ್ನು ಭಾರತ ತೆರೆದಂತಾಗಿದೆ. ಕಂಚು ಗೆಲ್ಲುವ ಮೂಲಕ ಮನು ಭಾಕರ್ ರಾಷ್ಟ್ರ ಮಟ್ಟದಲ್ಲಿ ಪ್ರಸಿದ್ಧಿ ಪಡೆದುಕೊಮಡಿದ್ದಾರೆ. ಆಕೆಯ ಸಾಧನೆಯು ಅಸಂಖ್ಯಾತ ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡುತ್ತದೆ.
A historic medal!
— Narendra Modi (@narendramodi) July 28, 2024
Well done, @realmanubhaker, for winning India’s FIRST medal at #ParisOlympics2024! Congrats for the Bronze. This success is even more special as she becomes the 1st woman to win a medal in shooting for India.
An incredible achievement!#Cheer4Bharat
ಪ್ರಧಾನಿ ಮೋದಿ ಶ್ಲಾಘನೆ
ಮನು ಭಾಕರ್ ಅವರು ಪದಕ ಗೆಲ್ಲುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. "ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತದ ಮೊದಲ ಪದಕ ಗೆದ್ದ ಮನು ಭಾಕರ್ ಅವರಿಗೆ ಅಭಿನಂದನೆಗಳು. ಭಾರತಕ್ಕಾಗಿ ಶೂಟಿಂಗ್‌ನಲ್ಲಿ ಪದಕ ಗೆದ್ದ ಮೊದಲ ಮಹಿಳೆ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ." ಇದು ನಂಬಲಾಗದ ಸಾಧನೆ ಎಂದು ಹೇಳಿದ್ದಾರೆ.












Click it and Unblock the Notifications