MI Vs CSK: ರೋಹಿತ್ ಶರ್ಮಾ ಶತಕ ವ್ಯರ್ಥ; ಸಿಎಸ್‌ಕೆ ತಂಡಕ್ಕೆ 20 ರನ್‌ಗಳ ಗೆಲುವು

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024 ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್‌ಕೆ) ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ 20 ರನ್‌ಗಳ ಗೆಲುವು ಸಾಧಿಸಿದೆ. ರೋಹಿತ್ ಶರ್ಮಾ ಶತಕ ಸಿಡಿಸಿದರೂ ಮುಂಬೈ ಗೆಲುವಿನ ಗೆರೆ ದಾಟುವಲ್ಲಿ ವಿಫಲವಾಯಿತು.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಸಿಎಸ್‌ಕೆ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಅಜಿಂಕ್ಯ ರಹಾನೆ 5 ರನ್ ಗಳಿಸಿದರೆ, ರಚಿನ್ ರವೀಂದ್ರ 21 ರನ್ ಗಳಿಸಿದರು.

MI vs CSK Chennai Super Kings defeted Mumbai Indians by 20 Runs in ipl 2024 Match

ನಾಯಕ ರುತುರಾಜ್ ಗಾಯಕ್ವಾಡ್ 40 ಎಸೆತಗಳಲ್ಲಿ 69 ರನ್ ಗಳಿಸಿದರೆ, ಶಿವಂ ದುಬೆ 38 ಎಸೆತಗಳಲ್ಲಿ ಅಜೇಯ 66 ರನ್ ಗಳಿಸಿದರು. ಕೊನೆಯ ಓವರ್ ನಲ್ಲಿ ಬ್ಯಾಟಿಂಗ್‌ಗೆ ಬಂದ ಎಂಎಸ್ ಧೋನಿ ಕೇವಲ 5 ಎಸೆತಗಳಲ್ಲಿ 20 ರನ್ ಸಿಡಿಸಿ ಅಬ್ಬರಿಸಿದರು. ಸತತ ಮೂರು ಸಿಕ್ಸರ್ ಸಿಡಿಸಿದ ಅವರು ಅಭಿಮಾನಿಗಳಿಗೆ ಮನರಂಜನೆಯ ರಸದೌತಣ ನೀಡಿದರು.

ರೋಹಿತ್ ಶತಕ, ಪತಿರಾನ ಮಿಂಚು

207 ರನ್‌ಗಳ ಸವಾಲಿನ ಗುರಿಯನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ ತಂಡ ಉತ್ತಮ ಆರಂಭ ಪಡೆಯಿತು. 7.1 ಓವರ್ ಗಳಲ್ಲಿ ಇಶಾನ್ ಕಿಶನ್ ಮತ್ತು ರೋಹಿತ್ ಶರ್ಮಾ ಮೊದಲ ವಿಕೆಟ್‌ಗೆ 70 ರನ್ ಕಲೆಹಾಕಿದರು. ಆದರೆ ಮತೀಶ ಪತಿರಾನ ಮುಂಬೈ ವೇಗಕ್ಕೆ ಬ್ರೇಕ್ ಹಾಕಿದರು. ಒಂದೇ ಓವರ್ ನಲ್ಲಿ ಇಶಾನ್ ಕಿಶನ್ ಮತ್ತು ಸೂರ್ಯಕುಮಾರ್ ಯಾದವ್ ಅವರ ವಿಕೆಟ್ ಪಡೆದು ಮುಂಬೈಗೆ ಆಘಾತ ನೀಡಿದರು.

ತಿಲಕ್ ವರ್ಮಾ 31 ರನ್, ಹಾರ್ದಿಕ್ ಪಾಂಡ್ಯ 2 ರನ್, ಟಿಮ್ ಡೇವಿಡ್ 13 ರನ್, ರೊಮಾರಿಯೋ ಶೆಫರ್ಡ್ 1 ರನ್, ಮೊಹಮ್ಮದ್ ನಬಿ ಅಜೇಯ 4 ರನ್ ಗಳಿಸಿದರು. ರೋಹಿತ್ ಶರ್ಮಾ 63 ಎಸೆತಗಳಲ್ಲಿ 11 ಬೌಂಡರಿ 5 ಸಿಕ್ಸರ್ ಸಹಿತ ಅಜೇಯ 103 ರನ್ ಗಳಿಸಿದರೂ ತಂಡದ ಸೋಲು ತಪ್ಪಿಸಲು ಆಗಲಿಲ್ಲ.

ಮತೀಶ ಪತಿರಾನ 4 ಓವರ್ ಗಳಲ್ಲಿ 28 ರನ್ ನೀಡಿ 4 ವಿಕೆಟ್ ಪಡೆದು ಮುಂಬೈ ಬ್ಯಾಟಿಂಗ್ ಪಡೆಗೆ ಆಘಾತ ಕೊಟ್ಟರು. ತುಷಾರ್ ದೇಶಪಾಂಡೆ ಮತ್ತು ಮುಸ್ತಾಫಿಜುರ್ ರೆಹಮಾನ್ ತಲಾ ಒಂದು ವಿಕೆಟ್ ಪಡೆದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+