MI Vs GT: ತಿಲಕ್ ವರ್ಮಾ ಸಿಡಿಲಬ್ಬರದ ಶತಕ, ಮುಂಬೈ ಇಂಡಿಯನ್ಸ್‌ ಬೌಲರ್‌ಗಳ ದಾಳಿಗೆ ಗುಜರಾತ್ ಟೈಟಾನ್ಸ್ ಧೂಳೀಪಟ

MI Vs GT IPL 2026: ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಸೋಮವಾರ (ಏಪ್ರಿಲ್‌ 20) ಐಪಿಎಲ್‌ 2026ರ 30ನೇ ರೋಚಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡವು ಗುಜರಾತ್ ಟೈಟಾನ್ಸ್ ವಿರುದ್ಧ 99 ರನ್‌ಗಳಿಂದ ಭರ್ಜರಿ ಜಯ ಸಾಧಿಸಿದೆ. ತಿಲಕ್ ವರ್ಮಾ ಅವರ ಸ್ಫೋಟಕ ಶತಕ ಮತ್ತು ಬೌಲರ್‌ಗಳ ಸಂಘಟಿತ ಪ್ರದರ್ಶನದಿಂದ ಮುಂಬೈ ಸತತ ಸೋಲಿನ ಸುಳಿಯಿಂದ ಪಾರಾಯಿತು.

ಟಾಸ್‌ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್‌ಮನ್ ಗಿಲ್‌ ಬೌಲಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆಯೇ ಮೊದಲು ಬ್ಯಾಟ್ ಬೀಸಿದ ಮುಂಬೈ ಇಂಡಿಯನ್ಸ್‌ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 199 ರನ್‌ಗಳನ್ನು ಕಲೆಹಾಕಿತು. ಎಂಐ ನೀಡಿದ 200 ರನ್‌ಗಳ ಗುರಿ ಬೆನ್ನಟ್ಟುವಲ್ಲಿ ಜಿಟಿ ವಿಫಲವಾಯಿತು. 100 ರನ್‌ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಹೀನಾಯ ಸೋಲನುಭವಿಸಿತು.

MI vs GT IPL 2026 Tilak Varma s Century Powers Mumbai Indians to 99-Run Win Against Gujarat Titans

ಸಿಡಿಲಬ್ಬರದ ಶತಕ ಸಿಡಿಸಿದ ತಿಲಕ್ ವರ್ಮಾ

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್, ಪವರ್‌ಪ್ಲೇ ಅವಧಿಯಲ್ಲಿ ಕಗಿಸೊ ರಬಾಡ ಅವರ ಮಾರಕ ಬೌಲಿಂಗ್ ದಾಳಿಗೆ ಸಿಲುಕಿ 3 ವಿಕೆಟ್ ಕಳೆದುಕೊಂಡಿತು. ಆದರೆ, ತಿಲಕ್ ವರ್ಮಾ ಕೇವಲ 45 ಎಸೆತಗಳಲ್ಲಿ 8 ಬೌಂಡರಿ, 7 ಸಿಕ್ಸರ್‌ ಸಹಿತ 101 ರನ್ ಚಚ್ಚುವ ಮೂಲಕ ತಂಡದ ಮೊತ್ತವನ್ನು ಹೆಚ್ಚಿಸಿದರು. ಇವರಿಗೆ ನಮನ್ ಧೀರ್ (45 ರನ್) ಉತ್ತಮ ಸಾಥ್ ನೀಡಿದರು.

ಬ್ಯಾಟಿಂಗ್‌ನಲ್ಲಿ ಎಡವಿದ ಗುಜರಾತ್ ಟೈಟಾನ್ಸ್‌

ಮುಂಬೈ ಇಂಡಿಯನ್ಸ್‌ ನೀಡಿದ 200 ರನ್‌ಗಳ ಬೃಹತ್ ಗುರಿ ಬೆನ್ನಟ್ಟಿದ ಗುಜರಾತ್ ಟೈಟಾನ್ಸ್, ಮುಂಬೈ ಬೌಲರ್‌ಗಳ ದಾಳಿಗೆ ತತ್ತರಿಸಿ ಕೇವಲ 15.5 ಓವರ್‌ಗಳಲ್ಲಿ 100 ರನ್‌ಗಳಿಗೆ ಆಲೌಟ್ ಆಯಿತು. ಅದರಲ್ಲೂ ನಾಯಕ, ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ ಈ ಪಂದ್ಯದಲ್ಲಿ ರನ್ ಗಳಿಸಲು ವಿಫಲರಾದರು.

ಮುಂಬೈ ಪರ ವೇಗಿ ಅಶ್ವನಿ ಕುಮಾರ್ 4 ಓವರ್‌ ಬೌಲಿಂಗ್ ಎಸೆದು ಕೇವಲ 24 ರನ್‌ಗಳನ್ನು ನೀಡಿ 4 ವಿಕೆಟ್‌ ಕಿತ್ತು ಗುಜರಾತ್ ಟೈಟಾನ್ಸ್‌ ಸೋಲಿಗೆ ಪ್ರಮುಖ ಪಾತ್ರವಹಿಸಿದರು. ಮತ್ತೊಂದೆಡೆ, ಸ್ಟಾರ್ ಬೌಲರ್ ಜಸ್ಪ್ರೀತ್ ಬುಮ್ರಾ ಈ ಸೀಸನ್‌ನ ತಮ್ಮ ಮೊದಲ ವಿಕೆಟ್ ಪಡೆದು ಸಂಭ್ರಮಿಸಿದರು. ಇನ್ನೂ ಈ ಭರ್ಜರಿ ಗೆಲುವಿನ ಮೂಲಕ ಮುಂಬೈ ಇಂಡಿಯನ್ಸ್ ಸತತ ಸೋಲಿನ ಸುಳಿಯಿಂದ ಹೊರಬಂದಿದೆ. ಅಲ್ಲದೆ, ಅಂಕಪಟ್ಟಿಯಲ್ಲಿ 4 ಪಾಂಯಿಂಟ್ಸ್‌ಗಳೊಂದಿಗೆ ಕೊನೆಯ ಸ್ಥಾನದಿಂದ 7ನೇ ಸ್ಥಾನಕ್ಕೆ ಏರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+