PBKS vs MI: ಮುಂಬೈ ಇಂಡಿಯನ್ಸ್‌ಗೆ ಪಂಜಾಗ್‌ ಕಿಂಗ್ಸ್ ಸವಾಲು; ಆರ್‌ಸಿಬಿ ವಿರುದ್ಧ ಫೈನಲ್ ಆಡೋದ್ಯಾರು?

ಐಪಿಎಲ್ 2025ರ ಪಂದ್ಯಾವಳಿ ಕೊನೆಯ ಹಂತಕ್ಕೆ ಬಂದಿದೆ. ಕ್ವಾಲಿಫೈಯರ್ 1 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಫೈನಲ್‌ಗೆ ಲಗ್ಗೆಯಿಟ್ಟಿದೆ. ಕ್ವಾಲಿಫೈಯರ್ 1 ರಲ್ಲಿ ಸೋತ ಪಂಜಾಬ್ ಕಿಂಗ್ಸ್ ಇದೀಗ ಕ್ವಾಲಿಫೈಯರ್ 2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲು ಸಜ್ಜಾಗಿದೆ.

ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದು ಪ್ಲೇಆಫ್ ಪ್ರವೇಶಿಸಿತ್ತು. ಆದರೆ ಕ್ವಾಲಿಫೈಯರ್ 1 ಪಂದ್ಯದಲ್ಲಿ ಆರ್ ಸಿಬಿ ಮಾರಕ ಬೌಲಿಂಗ್ ಎದುರು ತತ್ತರಿಸಿದ್ದು 101 ರನ್‌ಗಳಿಗೆ ಆಲೌಟ್ ಆಗಿತ್ತು. ಆರ್ ಸಿಬಿ ಸುಲಭ ಗೆಲುವು ಪಡೆಯುವ ಮೂಲಕ ಫೈನಲ್ ತಲುಪಿತ್ತು.

mi vs pbks shreyas iyer hardik pandya ipl qualifier 2 2025

ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಗುಜರಾತ್ ಟೈಟಾನ್ಸ್ ವಿರುದ್ಧ ಎಲಿಮಿನೇಟರ್ ಪಂದ್ಯ ಆಡಿದ ಮುಂಬೈ ಇಂಡಿಯನ್ಸ್‌ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಗೆಲುವು ಸಾಧಿಸಿ ಕ್ವಾಲಿಫೈಯರ್ 2 ಆಡಲು ಸಜ್ಜಾಗಿದೆ. ಮುಲ್ಲನ್‌ಪುರದಲ್ಲಿ ಗೆಲುವು ಪಡೆದ ಬಳಿಕ ಅಹಮದಾಬಾದ್‌ನಲ್ಲಿ ಕ್ವಾಲಿಫೈಯರ್ 2 ಆಡಲು ಸಜ್ಜಾಗಿದ್ದು ಈ ಪಂದ್ಯ ಗೆದ್ದು ಫೈನಲ್‌ ತಲುಪಲು ಎರಡೂ ತಂಡಗಳ ಕಾದಾಡಲಿವೆ.

ಅನುಭವಿ ತಂಡ ಮುಂಬೈ ಇಂಡಿಯನ್ಸ್

ಮುಂಬೈ ಇಂಡಿಯನ್ಸ್ ತಂಡದಲ್ಲಿ ಅನುಭವಿಗಳ ದಂಡೇ ಇದೆ. 5 ಬಾರಿ ಪ್ರಶಸ್ತಿ ಗೆದ್ದಿರುವ ಮುಂಬೈ ಇಂಡಿಯನ್ಸ್ ಗೆಲುವಿನ ಮೂಲಕ ಬಂದಿರುವುದು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಜಸ್ಪ್ರೀತ್ ಬುಮ್ರಾ ಅವರ ಪ್ರಮುಖ ಅಸ್ತ್ರವಾಗಿದ್ದಾರೆ. ಸೂರ್ಯಕುಮಾರ್ ಯಾದವ್ ಮುಂಬೈನ ಬ್ಯಾಟಿಂಗ್‌ನ ಆಧಾರಸ್ಥಂಬವಾಗಿದ್ದಾರೆ.

ಕ್ವಾಲಿಫೈಯರ್ 2 ಹೋರಾಟವು ದಾಖಲೆ ಮುರಿಯುವ ಹೋರಾಟವಾಗಿರುತ್ತದೆ. ಪಂಜಾಬ್ ತನ್ನ ಮೊದಲ ಐಪಿಎಲ್ ಟ್ರೋಫಿಯನ್ನು ಗೆಲ್ಲುವ ವಿಶ್ವಾಸದಲ್ಲಿದೆ. ಕಳೆದ 17 ಋತುಗಳಲ್ಲಿ, ಕೇವಲ 7 ತಂಡಗಳು ಪ್ರಶಸ್ತಿಯನ್ನು ಗೆದ್ದಿವೆ. ಶ್ರೇಯಸ್ ಅಯ್ಯರ್ ಕಳೆದ ವರ್ಷ ಕೆಕೆಆರ್ ತಂಡದ ನಾಯಕನಾಗಿ ಟ್ರೋಫಿಯನ್ನು ಗೆದ್ದ ಬಳಿಕ ಪಂಜಾಬ್ ಕಿಂಗ್ಸ್ ತಂಡವನ್ನು ಚಾಂಪಿಯನ್ ಮಾಡುವ ವಿಶ್ವಾಸದಲ್ಲಿದ್ದಾರೆ.

ಹಾರ್ದಿಕ್ ಪಾಂಡ್ಯ ಪ್ರಮುಖ ದಾಖಲೆ ಮೇಲೆ ಕಣ್ಣಿಟ್ಟಿದ್ದಾರೆ. 2022 ರಲ್ಲಿ ಗುಜರಾತ್ ಟೈಟಾನ್ಸ್ ನಾಯಕನಾಗಿ ಮೊದಲ ಆವೃತ್ತಿಯಲ್ಲೇ ಚಾಂಪಿಯನ್ ಆಗಿದ್ದರು. ಈಗ, ಅವರು ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಕಪ್ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಈ ಬಾರಿ ಮುಂಬೈ ಇಂಡಿಯನ್ಸ್ ತಂಡ ಪ್ರಶಸ್ತಿ ಗೆದ್ದರೆ 6ನೇ ಬಾರಿ ಟ್ರೋಫಿ ಗೆದ್ದಂತಾಗುತ್ತದೆ. ಸಿಎಸ್‌ಕೆ ತಂಡದ ದಾಖಲೆಯನ್ನು ಮುರಿದು ಐಪಿಎಲ್‌ನ ಯಶಸ್ವೀ ತಂಡ ಎನಿಸಿಕೊಳ್ಳಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+