MI vs SRH IPL 2023: ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯದ ವಿವರ, ಆಡುವ 11ರ ಬಳಗ
ಮಂಗಳವಾರ, ಏಪ್ರಿಲ್ 18ರಂದು ಹೈದರಾಬಾದ್‌ನಲ್ಲಿ ನಡೆಯುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ 25ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.
ಎಸ್‌ಆರ್‌ಎಚ್ ವಿರುದ್ಧದ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ತಂಡಕ್ಕೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಇಂಪ್ಯಾಕ್ಟ್ ಪ್ಲೇಯರ್ ಆಗಿ ಬ್ಯಾಟಿಂಗ್ ಮಾಡಿದ್ದ ರೋಹಿತ್ ಶರ್ಮಾ, ಇಂದಿನ ಪಂದ್ಯದಲ್ಲಿ ನಾಯಕನಾಗಿ ಮರಳಲಿದ್ದಾರೆ.

ರೋಹಿತ್ ಶರ್ಮಾ ತಂಡಕ್ಕೆ ಮರಳಿದರೆ, ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿದರೆ, ಬಹುಶಃ ಸೂರ್ಯಕುಮಾರ್ ಯಾದವ್ "ಇಂಪ್ಯಾಕ್ಟ್ ಪ್ಲೇಯರ್' ಆಗಿ ಕಣಕ್ಕಿಳಿಯಬಹುದು.
ಐದು ಬಾರಿಯ ಐಪಿಎಲ್ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ಅರ್ಜುನ್ ತೆಂಡೂಲ್ಕರ್ ಅವರನ್ನು ಕೆಕೆಆರ್ ವಿರುದ್ಧ ಪಂದ್ಯದಲ್ಲಿ ಎರಡು ಓವರ್ ಬೌಲಿಂಗ್ ಮಾಡಿದ ನಂತರ ಆಡುವ 11ರಲ್ಲಿ ಉಳಿಸಿಕೊಳ್ಳುವ ಸಾಧ್ಯತೆಯಿದೆ.

ಇನ್ನು ವೇಗಿ ಜೋಫ್ರಾ ಆರ್ಚರ್ ಅವರು ಈ ಪಂದ್ಯದಲ್ಲಿ ಅಡುವುದು ಇನ್ನೂ ಅನುಮಾನವಾಗಿದೆ. ಡುವಾನ್ ಜಾನ್ಸೆನ್ ಬದಲಿಗೆ ಎಡಗೈ ವೇಗಿ ಜೇಸನ್ ಬೆಹ್ರೆನ್‌ಡಾರ್ಫ್ ತಂಡಕ್ಕೆ ಮರಳುವ ಸಾಧ್ಯತೆ ಇದೆ. ಡುವಾನ್ ಜಾನ್ಸೆನ್ ಸಹೋದರ ಮಾರ್ಕೊ ಜಾನ್ಸೆನ್ ಸನ್‌ರೈಸರ್ಸ್ ಹೈದರಾಬಾದ್ ತಂಡದ ಪರ ಆಡುತ್ತಿದ್ದಾರೆ.
ಮತ್ತೊಂದೆಡೆ, ಏಡನ್ ಮಾರ್ಕ್ರಾಮ್ ನಾಯಕತ್ವದ ಸನ್‌ರೈಸರ್ಸ್ ಹೈದರಾಬಾದ್ ಟಿ ನಟರಾಜನ್ ಬದಲು ವಾಷಿಂಗ್ಟನ್ ಸುಂದರ್ ಅವನ್ನು "ಇಂಪ್ಯಾಕ್ಟ್ ಪ್ಲೇಯರ್' ಆಗಿ ಬಳಸಿಕೊಳ್ಳುವ ಸಾಧ್ಯತೆಯಿದೆ. ಆಲ್‌ರೌಂಡರ್ ಹ್ಯಾರಿ ಬ್ರೂ ಎಸ್‌ಆರ್‌ಎಚ್ ತಂಡಕ್ಕೆ ಪ್ರಮುಖ ಆಟಗಾರನಾಗಿದ್ದಾನೆ. ಕಳೆದ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಶತಕ ಬಾರಿಸಿದ್ದರು.

ಪಂಜಾಬ್ ಕಿಂಗ್ಸ್ ತಂಡದಿಂದ ಬಿಡುಗಡೆಯಾಗಿರುವ ಮಯಾಂಕ್ ಅಗರ್ವಾಲ್ ಎಸ್‌ಆರ್‌ಎಚ್ ತಂಡದಲ್ಲಿ ಬ್ಯಾಟಿಂಗ್ ಫಾರ್ಮ್ ಕಂಡುಕೊಳ್ಳಲು ಹೆಣಗಾಡುತ್ತಿದ್ದಾರೆ. ಅವರ ಕಳಪೆ ಬ್ಯಾಟಿಂಗ್ ತಂಡಕ್ಕೆ ಒತ್ತಡ ಹೆಚ್ಚಿಸುತ್ತಿದೆ. ಮಯಾಂಕ್ ಅಗರ್ವಾಲ್ ಈ ಋತುವಿನಲ್ಲಿ ಇದುವರೆಗೆ 27, 8, 21 ಮತ್ತು 9 ರನ್‌ಗಳನ್ನು ಗಳಿಸಿದ್ದಾರೆ.
ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯದ ವಿವರ
ಸ್ಥಳ ಮತ್ತು ಸಮಯ: ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯವು ಮಂಗಳವಾರ, ಏಪ್ರಿಲ್ 18ರಂದು ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತೀಯ ಕಾಲಮಾನ ಸಂಜೆ 7.30ಕ್ಕೆ ಆರಂಭವಾಗಲಿದೆ.
ಟಿವಿ ಮತ್ತು ಲೈವ್ ಸ್ಟ್ರೀಮಿಂಗ್ ವಿವರ
ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಪಂದ್ಯವನ್ನು ಟಿವಿಯಲ್ಲಿ ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ಅಲ್ಲದೇ, Jio Cinema ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಲೈವ್ ಸ್ಟ್ರೀಮ್ ಆಗಿ ವೀಕ್ಷಿಸಬಹುದು.
ಮುಂಬೈ ಇಂಡಿಯನ್ಸ್ vs ಸನ್‌ರೈಸರ್ಸ್ ಹೈದರಾಬಾದ್ ಸಂಭಾವ್ಯ ಆಡುವ 11ರ ಬಳಗ
ಸನ್‌ರೈಸರ್ಸ್ ಹೈದರಾಬಾದ್ ತಂಡ: ಏಡೆನ್ ಮಾರ್ಕ್ರಾಮ್ (ನಾಯಕ), ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ರಾಹುಲ್ ತ್ರಿಪಾಠಿ, ಅಭಿಷೇಕ್ ಶರ್ಮಾ, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಮಯಾಂಕ್ ಮಾರ್ಕಾಂಡೆ, ಭುವನೇಶ್ವರ್ ಕುಮಾರ್, ಉಮ್ರಾನ್ ಮಲಿಕ್.
ಮುಂಬೈ ಇಂಡಿಯನ್ಸ್ ತಂಡ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕ್ಯಾಮೆರಾನ್ ಗ್ರೀನ್, ಅರ್ಜುನ್ ತೆಂಡೂಲ್ಕರ್, ಟಿಮ್ ಡೇವಿಡ್, ಹೃತಿಕ್ ಶೋಕೀನ್, ಪಿಯೂಷ್ ಚಾವ್ಲಾ, ರಿಲೆ ಮೆರೆಡಿತ್, ಜೇಸನ್ ಬೆಹ್ರೆಂಡಾಫ್.












Click it and Unblock the Notifications