MI vs SRH: 'ಸೂರ್ಯ'ನ ಅಬ್ಬರಕ್ಕೆ ಮುಳುಗಿದ ಸನ್‌ರೈಸರ್ಸ್; ಆರ್‌ಸಿಬಿ ಅಭಿಮಾನಿಗಳ ಸಂಭ್ರಮ!
ಮುಂಬೈ ಇಂಡಿಯನ್ಸ್ ಗೆಲುವಿನಿಂದ ಆರ್‌ಸಿಬಿ ಅಭಿಮಾನಿಗಳು ಫುಲ್ ಖುಷಿಯಾಗಿದ್ದಾರೆ!, ಹೌದು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ಸಾಧಿಸಿದ್ದು, ಆರ್‌ಸಿಬಿ ಪ್ಲೇ ಆಫ್ ಅವಕಾಶ ಹೆಚ್ಚಾಗಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ಅತ್ಯುತ್ತಮ ಆರಂಭ ಪಡೆಯಿತು.

5.5 ಓವರ್ ಗಳಲ್ಲಿ ಮೊದಲ ವಿಕೆಟ್‌ಗೆ 56 ರನ್ ಕಲೆಹಾಕಿತು. ಟ್ರಾವಿಸ್ ಹೆಡ್ ಸ್ಫೋಟಕ ಆರಂಭ ಕೊಟ್ಟರೆ ಅಭಿಷೇಕ್ ಶರ್ಮಾ ರನ್ ಗಳಿಸಲು ಪರದಾಡಿದರು. 16 ಎಸೆತಗಳಲ್ಲಿ ಕೇವಲ 11 ರನ್ ಗಳಿಸಿ ಔಟಾದರು.
ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 48 ರನ್ ಗಳಿಸಿದರು. 90 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡ ಸನ್‌ರೈಸರ್ಸ್ ಹೈದರಾಬಾದ್ ಬಳಿಕ 136 ರನ್ ಗಳಾಗುವಷ್ಟರಲ್ಲಿ 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ನಾಯಕ ಪಾಟ್ ಕಮ್ಮಿನ್ಸ್ 17 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ ಸಹಿತ ಅಜೇಯ 35 ರನ್ ಗಳಿಸುವ ತಂಡಕ್ಕೆ ನೆರವಾದರು. ಸನ್‌ರೈಸರ್ಸ್ ಹೈದರಾಬಾದ್ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿತು.
ಹೈದರಾಬಾದ್‌ಗೆ 'ಸನ್' ಸ್ಟ್ರೋಕ್
ಈ ಸವಾಲಿನ ಮೊತ್ತವನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 1.4 ಓವರ್ ನಲ್ಲಿ 26 ರನ್ ಗಳಿಸಿತು. ಆದರೆ 31 ರನ್‌ಗಳಾಗುಷ್ಟರಲ್ಲಿ ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸಿತು. ಇಶಾನ್ ಕಿಶನ್, ರೋಹಿತ್ ಶರ್ಮಾ ಮತ್ತು ನಮನ್ ಧೀರ್ ಒಬ್ಬರ ಹಿಂದೆ ಒಬ್ಬರು ಔಟಾದರು.
ಮೂರು ವಿಕೆಟ್ ಬಿದ್ದ ಬಳಿಕ ಮುಂಬೈ ಇಂಡಿಯನ್ಸ್ ಪಾಳಯದಲ್ಲಿ ಆತಂಕ ಶುರುವಾಗಿತ್ತು, ಆದರೆ ಸೂರ್ಯಕುಮಾರ್ ಯಾದವ್ ಮತ್ತು ತಿಲಕ್ ವರ್ಮಾ ಮುಂಬೈ ತಂಡಕ್ಕೆ ಆಸರೆಯಾದರು. ತಿಲಕ್ ವರ್ಮಾ 32 ಎಸೆತಗಳಲ್ಲಿ 37 ರಮ್ ಗಳಿಸಿದರೆ. ಸೂರ್ಯಕುಮಾರ್ ಯಾದವ್ 51 ಎಸೆತಗಳಲ್ಲಿ 12 ಬೌಂಡರಿ 6 ಭರ್ಜರಿ ಸಿಕ್ಸರ್ ಸಹಿತ ಅಜೇಯ 102 ರನ್ ಗಳಿಸಿದರು.
ಇವರಿಬ್ಬರ ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ 17.2 ಓವರ್ ಗಳಲ್ಲೇ 174 ರನ್ ಗಳಿಸಿದ ಮುಂಬೈ ಇಂಡಿಯನ್ಸ್ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.
ಆರ್‌ಸಿಬಿ ತಂಡದ ಅಭಿಮಾನಿಗಳ ಸಂತಸ
ಸನ್‌ರೈಸರ್ಸ್ ಹೈದರಾಬಾದ್ ತಂಡ ಸೋತಿರುವುದು ಆರ್‌ಸಿಬಿ ಅಭಿಮಾನಿಗಳ ಖುಷಿಗೆ ಕಾರಣವಾಗಿದೆ. ಸನ್‌ರೈಸರ್ಸ್ ಹೈದರಾಬಾದ್ ಸೋತ ಬಳಿಕ ಆರ್‌ಸಿಬಿ ಪ್ಲೇ ಆಫ್ ಅವಕಾಶ ಮತ್ತಷ್ಟು ಹೆಚ್ಚಾಗಿದೆ. ಆರ್‌ಸಿಬಿ ಇನ್ನುಳಿದ ಮೂರು ಪಂದ್ಯಗಳನ್ನು ಗೆದ್ದರೆ ಅದೃಷ್ಟ ಏನಾದರೂ ಕೈಹಿಡಿದರೆ ಪ್ಲೇ ಆಫ್ ತಲುಪುವ ಸಾಧ್ಯತೆ ಹೆಚ್ಚಿದೆ.












Click it and Unblock the Notifications