ಕನ್ನಡತಿ, ಮಹಿಳಾ ಕ್ರಿಕೆಟರ್ ರಾಜೇಶ್ವರಿಗೆ 15 ಲಕ್ಷ ಪುರಸ್ಕಾರ ಘೋಷಣೆ
ಬೆಂಗಳೂರು, ಆಗಸ್ಟ್ 08: ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಭಾರತ ತಂಡ ಬೆಳ್ಳಿ ಪದಕ ಗೆದ್ದಿದೆ. ತಂಡದ ಸಾಧನೆಗೆ ಪ್ರಶಂಶೆಯ ಮಹಾಪೂರವೇ ಹರಿದು ಬರುತ್ತಿದೆ.
ಕಾಮನ್‌ವೆಲ್ತ್ ನಲ್ಲಿ ಬೆಳ್ಳಿ ಪದಕವನ್ನು ಜಯಿಸಿದ ಭಾರತ ತಂಡವನ್ನು ಕರ್ನಾಟಕ ರಾಜ್ಯದ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅಭಿನಂದಿಸಿದ್ದಾರೆ.
ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತ ಹೋರಾಟವನ್ನು ಪ್ರದರ್ಶಿಸಿದರೂ ಸಣ್ಣ ಅಂತರದಿಂದ ಬಂಗಾರದ ಪದಕ ಕೈತಪ್ಪಿದೆ. ಆಸ್ಟ್ರೇಲಿಯಾ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರೆ ಭಾರತ ಬೆಳ್ಳಿ ಪದಕ ಪಡೆಯಿತು. ಇನ್ನು ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್‌ಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ.

ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಪುರಸ್ಕಾರವನ್ನು ಸಚಿವ ಡಾ. ನಾರಾಯಣಗೌಡ ಅವರು ಘೋಷಿಸಿದ್ದಾರೆ.












Click it and Unblock the Notifications