ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕನ್ನಡತಿ, ಮಹಿಳಾ ಕ್ರಿಕೆಟರ್‌ ರಾಜೇಶ್ವರಿಗೆ 15 ಲಕ್ಷ ಪುರಸ್ಕಾರ ಘೋಷಣೆ

|
Google Oneindia Kannada News

ಬೆಂಗಳೂರು, ಆಗಸ್ಟ್ 08: ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್‌ನ ಮಹಿಳೆಯರ ಕ್ರಿಕೆಟ್ ವಿಭಾಗದಲ್ಲಿ ಭಾರತ ತಂಡ ಬೆಳ್ಳಿ ಪದಕ ಗೆದ್ದಿದೆ. ತಂಡದ ಸಾಧನೆಗೆ ಪ್ರಶಂಶೆಯ ಮಹಾಪೂರವೇ ಹರಿದು ಬರುತ್ತಿದೆ.

ಕಾಮನ್‌ವೆಲ್ತ್ ನಲ್ಲಿ ಬೆಳ್ಳಿ ಪದಕವನ್ನು ಜಯಿಸಿದ ಭಾರತ ತಂಡವನ್ನು ಕರ್ನಾಟಕ ರಾಜ್ಯದ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅಭಿನಂದಿಸಿದ್ದಾರೆ.

Breaking: ಕಾಮನ್‌ವೆಲ್ತ್; ಬ್ಯಾಡ್ಮಿಂಟನ್ ಡಬಲ್ಸ್‌ನಲ್ಲೂ ಚಿನ್ನBreaking: ಕಾಮನ್‌ವೆಲ್ತ್; ಬ್ಯಾಡ್ಮಿಂಟನ್ ಡಬಲ್ಸ್‌ನಲ್ಲೂ ಚಿನ್ನ

ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲಿಯೂ ಅದ್ಭುತ ಹೋರಾಟವನ್ನು ಪ್ರದರ್ಶಿಸಿದರೂ ಸಣ್ಣ ಅಂತರದಿಂದ ಬಂಗಾರದ ಪದಕ ಕೈತಪ್ಪಿದೆ. ಆಸ್ಟ್ರೇಲಿಯಾ ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡರೆ ಭಾರತ ಬೆಳ್ಳಿ ಪದಕ ಪಡೆಯಿತು. ಇನ್ನು ಭಾರತ ಮಹಿಳಾ ಕ್ರಿಕೆಟ್ ತಂಡವನ್ನು ಪ್ರತಿನಿಧಿಸಿದ್ದ ಕರ್ನಾಟಕದ ರಾಜೇಶ್ವರಿ ಗಾಯಕ್ವಾಡ್‌ಗೆ ಸಚಿವರು ಅಭಿನಂದನೆ ಸಲ್ಲಿಸಿದ್ದಾರೆ‌.

Minister Dr Narayana Gowda Annouced 15 lakhs to Indian womens cricket team player Rajeshwari Gaikwad

ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಕನ್ನಡತಿ ರಾಜೇಶ್ವರಿ ಗಾಯಕ್ವಾಡ್ ಗೆ ರಾಜ್ಯ ಸರ್ಕಾರದಿಂದ 15 ಲಕ್ಷ ನಗದು ಪುರಸ್ಕಾರವನ್ನು ಸಚಿವ ಡಾ. ನಾರಾಯಣಗೌಡ ಅವರು ಘೋಷಿಸಿದ್ದಾರೆ.

English summary
Indian's women cricket team won the silver medal in Commonwealth games held at Burning Ham. Minister Dr. Narayana Gowda announced 15 lakhs to Indian women's cricket team player Rajeshwari Gaikwad
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X