IPL 2025: ಗ್ಲೆನ್ ಮ್ಯಾಕ್ಸ್‌ವೆಲ್ ಬದಲಾಗಿ ಪಂಜಾಬ್ ಕಿಂಗ್ಸ್ ಸೇರಿದ ಆಸ್ಟ್ರೇಲಿಯಾ ಸ್ಪೋಟಕ ಆಲ್‌ರೌಂಡರ್
ಐಪಿಎಲ್ 2025ರ ಆವೃತ್ತಿಯಿಂದ ಆಸ್ಟ್ರೇಲಿಯಾದ ಸ್ಫೋಟಕ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಹೊರಬಿದ್ದ ಬಳಿಕ ಪಂಜಾಬ್ ಕಿಂಗ್ಸ್ ಬದಲೀ ಆಟಗಾರನನ್ನು ತಂಡಕ್ಕೆ ಸೇರ್ಪಡೆ ಮಾಡಿದೆ. ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಆಡುತ್ತಿದ್ದ ಮತ್ತೊಬ್ಬ ಆಸ್ಟ್ರೇಲಿಯಾ ಸ್ಪೋಟಕ ಆಲ್‌ರೌಂಡರ್ ಇದೀಗ ಐಪಿಎಲ್ ಆಡಲು ಸಜ್ಜಾಗಿದ್ದಾರೆ.
ಮೂಳೆ ಮುರಿತದಿಂದಾಗಿ ಐಪಿಎಲ್ 2025 ರ ಉಳಿದ ಪಂದ್ಯಗಳಿಗೆ ಹೊರಗುಳಿದಿದ್ದ ಸ್ಟಾರ್ ಆಲ್‌ರೌಂಡರ್ ಗ್ಲೆನ್ ಮ್ಯಾಕ್ಸ್‌ವೆಲ್ ಬದಲಿಗೆ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಆಸ್ಟ್ರೇಲಿಯಾದ ಮಿಚೆಲ್ ಓವನ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಲಾಗಿದೆ. ಪ್ರಸ್ತುತ ಪಾಕಿಸ್ತಾನ ಸೂಪರ್ ಲೀಗ್‌ನಲ್ಲಿ ಪೇಶಾವರ್ ಝಲ್ಮಿ ಪರ ಆಡುತ್ತಿರುವ ಓವನ್ 3 ಕೋಟಿ ರೂಪಾಯಿಗೆ ಪಂಜಾಬ್ ಕಿಂಗ್ಸ್ ಸೇರಲಿದ್ದಾರೆ.

2024-25 ರಲ್ಲಿ ಬಿಗ್ ಬ್ಯಾಷ್ ಲೀಗ್ (ಬಿಬಿಎಲ್) ನಲ್ಲಿ ಓವನ್ ಪ್ರಮುಖ ರನ್ ಸ್ಕೋರರ್ ಆಗಿದ್ದರು, 200 ಕ್ಕಿಂತ ಹೆಚ್ಚು ಸ್ಟ್ರೈಕ್ ರೇಟ್‌ನಲ್ಲಿ 452 ರನ್ ಗಳಿಸುವ ಮೂಲಕ ಹೋಬಾರ್ಟ್ ಹರಿಕೇನ್ಸ್ ತಮ್ಮ ಮೊದಲ ಪ್ರಶಸ್ತಿಯನ್ನು ಎತ್ತಿ ಹಿಡಿಯಲು ಪ್ರಮುಖ ಕೊಡುಗೆ ನೀಡಿದ್ದರು.
"ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಉಳಿದ ಪಂದ್ಯಗಳಿಂದ ಗ್ಲೆನ್ ಮ್ಯಾಕ್ಸ್‌ವೆಲ್ ಹೊರಗುಳಿದಿದ್ದಾರೆ, ಅವರ ಬದಲಿಗೆ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ಆಲ್‌ರೌಂಡರ್ ಮಿಚ್ ಓವನ್ ಅವರನ್ನು ಆಯ್ಕೆ ಮಾಡಿದೆ, ಮ್ಯಾಕ್ಸ್‌ವೆಲ್ ಬೆರಳಿನ ಮೂಳೆ ಮುರಿತದಿಂದಾಗಿ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ಉಳಿದ ಪಂದ್ಯಗಳಿಂದ ಹೊರಗುಳಿದಿದ್ದಾರೆ" ಎಂದು ಐಪಿಎಲ್ ಅಧಿಕೃತ ಹೇಳಿಕೆ ತಿಳಿಸಿದೆ.
ಆಸ್ಟ್ರೇಲಿಯಾದ ಟ್ಯಾಸ್ಮೇನಿಯಾದ ಮಿಚ್ ಓವನ್ 34 ಟಿ 20 ಪಂದ್ಯಗಳನ್ನು ಡಿದ್ದಾರೆ ಮತ್ತು ಎರಡು ಶತಕಗಳು ಮತ್ತು 108 ರ ಅತ್ಯಧಿಕ ಸ್ಕೋರ್ ಸೇರಿದಂತೆ 646 ರನ್ ಗಳಿಸಿದ್ದಾರೆ. ಉತ್ತಮ ಬೌಲರ್ ಕೂಡ ಆಗಿದ್ದು 10 ಟಿ 20 ವಿಕೆಟ್‌ಗಳನ್ನು ಕೂಡ ಪಡೆದಿದ್ದಾರೆ.
ಪಾಕಿಸ್ತಾನಕ್ಕೆ ಮತ್ತೊಂದು ಶಾಕ್!
ದಕ್ಷಿಣ ಆಫ್ರಿಕಾದ ಕಾರ್ಬಿನ್ ಬಾಷ್ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ಗೆ ಆಡಲು ಪಿಎಸ್‌ಎಲ್ ಒಪ್ಪಂದವನ್ನು ಮುರಿಯಲು ನಿರ್ಧರಿಸಿದ ನಂತರ ಪೇಶ್ವರ್ ಝಲ್ಮಿ ಓವನ್ ಅವರನ್ನು ಬದಲೀ ಆಟಗಾರನಾಗಿ ಆಯ್ಕೆ ಮಾಡಿತ್ತು. ಇಎಸ್‌ಪಿಎನ್ ಕ್ರಿಕ್ಇನ್ಫೋ ಪ್ರಕಾರ, ಓವನ್ ತನ್ನ ಪಿಎಸ್‌ಎಲ್ ಒಪ್ಪಂದ ಪೂರ್ಣಗೊಳಿಸಿದ ನಂತರ ಪಿಬಿಕೆಎಸ್‌ಗೆ ಸೇರುವ ನಿರೀಕ್ಷೆಯಿದೆ.
ಮಿಚ್ ಓವನ್ ಪೇಶಾವರ್ ಪರ ಪಿಎಸ್‌ಎಲ್ ಪಂದ್ಯಗಳಲ್ಲಿ 200 ರನ್ ಗಳಿಸಿದ್ದಾರೆ. ಎರಡು ವಿಕೆಟ್‌ಗಳನ್ನು ಸಹ ಪಡೆದಿದ್ದಾರೆ. ಬಲಗೈ ಟಾಪ್-ಆರ್ಡರ್ ಬ್ಯಾಟ್ಸ್‌ಮನ್ ಮತ್ತು ಬಲಗೈ ಮಧ್ಯಮ ವೇಗಿ ಓವನ್ ಅವರನ್ನು ಪೇಶಾವರ್ ಝಲ್ಮಿ ಆಯ್ಕೆ ಮಾಡಿತ್ತು.
ಬಿಬಿಎಲ್‌ನಲ್ಲಿ ಸಿಡ್ನಿ ಥಂಡರ್ ವಿರುದ್ಧ 64 ಎಸೆತಗಳಲ್ಲಿ ಅಜೇಯ 101 ರನ್ ಸೇರಿದಂತೆ ಋತುವಿನಲ್ಲಿ ಅವರು ಎರಡು ಶತಕಗಳನ್ನು ಗಳಿಸಿದರು. ಐಪಿಎಲ್ ಮೆಗಾ ಹರಾಜಿನಲ್ಲಿ ಅವರು ಅನ್‌ಸೋಲ್ಡ್ ಆದ ಬಳಿಕ ಪಿಎಸ್‌ಎನ್‌ನಲ್ಲಿ ಆಡಲು ಸಹಿ ಹಾಕಿದ್ದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications