BCCI New President: ಬಿಸಿಸಿಐಗೆ ನೂತನ ಅಧ್ಯಕ್ಷರ ನೇಮಕ
BCCI New President: ಭಾರತ ಕ್ರಿಕೆಟ್ ನಿಂಯತ್ರಣ ಮಂಡಳಿ (ಬಿಸಿಸಿಐ)ಯ ನೂತನ ಅಧ್ಯಕ್ಷರಾಗಿ ಮಿಥುನ್ ಮನ್ಹಾಸ್ ಅವರನ್ನು ನೇಮಕ ಮಾಡಲಾಗಿದೆ. ಹಾಗಾದ್ರೆ, ಇವರ ಹಿನ್ನೆಲೆ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತ ಕ್ರಿಕೆಟ್ ನಿಂಯತ್ರಣ ಮಂಡಳಿ (ಬಿಸಿಸಿಐ)ಯ ಸರ್ವಸದಸ್ಯರ ಸಭೆ ನಡೆದಿದ್ದು, ಈ ವೇಳೆ 45 ವರ್ಷ ವಯಸ್ಸಿನ ಮಿಥುನ್ ಮನ್ಹಾಸ್ ಅವರನ್ನು ಆಯ್ಕೆ ಮಾಡಲಾಗಿದೆ. ದೆಹಲಿ ಕ್ರಿಕೆಟ್ ತಂಡದ ಮಾಜಿ ನಾಯಕ ಮಿಥುನ್ ಮನ್ಹಾಸ್ ಅವರನ್ನು ಬಿಸಿಸಿಐನ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಮಿಥುನ್ ಮನ್ಹಾಸ್ ಅವರು 1997-98ರಿಂದ 2016-17 ರವರೆಗೆ 157 ಪ್ರಥಮ ದರ್ಜೆ, 130 ಲಿಸ್ಟ್ ಎ ಮತ್ತು 55 ಐಪಿಎಲ್ ಪಂದ್ಯಗಳಲ್ಲಿ ಆಡಿದ್ದಾರೆ. ಇವರು ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 27 ಶತಕ ಸಹಿತ 9,714 ರನ್ ಸಿಡಿಸಿದ್ದಾರೆ. ಅಲ್ಲದೆ, ಲಿಸ್ಟ್ ಎ ಮತ್ತು 55 ಐಪಿಎಲ್ ಪಂದ್ಯಗಳಲ್ಲಿ ಆಡಿದ್ಧಾರೆ.
ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 27 ಶತಕ ಸಹಿತ 9,714 ರನ್‌ಗಳನ್ನು ಕಲೆಹಾಕಿದ್ದು, ಜೊತೆಗೆ ಲಿಸ್ಟ್ ಎ ಪಂದ್ಯಗಳಲ್ಲಿ 4,126 ರನ್ ಕಲೆಹಾಕಿದ್ದಾರೆ. ಇನ್ನೂ ಇದೀಗ ಇವರು ಬಿಸಿಸಿಐನ ನೂತನ ಅಧ್ಯಕ್ಷರಾಗಿ ನೇಮಕ ಆಗಿದ್ದಾರೆ. ಇದಕ್ಕೂ ಮುಂಚೆ ಬಿಸಿಸಿಐ ರೋಜರ್ ಬಿನ್ನಿ ಅವರು ಈ ಸ್ಥಾನದಲ್ಲಿದ್ದು, ಅವರ ಅವಧಿ ಆಗಸ್ಟ್‌ನಲ್ಲಿ ಮುಕ್ತಾಯ ಆಗಿತ್ತು. ಇವರ ಸ್ಥಾನಕ್ಕೆ ಇದೀಗ ಮಿಥುನ್ ಮನ್ಹಾಸ್ ಅವರನ್ನು ಆಯ್ಕೆ ಮಾಡಲಾಗಿದೆ.
ಮಿಥುನ್ ಮನ್ಹಾಸ್ ದೀರ್ಘ ಮತ್ತು ಯಶಸ್ವಿ ಕ್ರಿಕೆಟ್ ವೃತ್ತಿಜೀವನವನ್ನು ಹೊಂದಿದ್ದಾರೆ. ಅವರು 1997/98 ಋತುವಿನಲ್ಲಿ ದೆಹಲಿಯೊಂದಿಗೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆದರೆ, ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಮತ್ತು ರಾಹುಲ್ ದ್ರಾವಿಡ್‌ರಂತಹ ಬ್ಯಾಟ್ಸ್‌ಮನ್‌ಗಳು ಆ ಸಮಯದಲ್ಲಿ ತಂಡದ ಭಾಗ ಆಗಿರುವುದರಿಂದ, ಅವರ ಪ್ರಾಬಲ್ಯದ ಮುಂದೆ ಭಾರತೀಯ ತಂಡದಲ್ಲಿ ಸ್ಥಾನ ಪಡೆಯಲು ಸಾಧ್ಯ ಆಗಲಿಲ್ಲ.
ಇದರ ಹೊರತಾಗಿಯೂ ದೇಶೀಯ ಕ್ರಿಕೆಟ್‌ನಲ್ಲಿ ಪ್ರಮುಖ ಆಟಗಾರನಾಗಿ ಮನ್ಹಾಸ್ ತಮ್ಮನ್ನು ತಾವು ಗುರುತಿಸಿಕೊಂಡರು. ಬಳಿಕ ದೆಹಲಿ ರಣಜಿ ತಂಡದ ನಾಯಕರಾಗಿದ್ದರು. ವಿರಾಟ್ ಕೊಹ್ಲಿ ತಮ್ಮ ಆರಂಭಿಕ ದಿನಗಳಲ್ಲಿ ಮನ್ಹಾಸ್ ಅವರ ನಾಯಕತ್ವದಲ್ಲೇ ಆಡಿದ್ದರು. 2007-08ರ ರಣಜಿ ಟ್ರೋಫಿ ಋತುವಿನಲ್ಲಿ ಅದ್ಭುತ ಪ್ರದರ್ಶನ ನೀಡಿ, 57.56 ಸರಾಸರಿಯಲ್ಲಿ 921 ರನ್ ಗಳಿಸಿದ್ದು, ಆ ಋತುವಿನಲ್ಲಿ ದೆಹಲಿ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಮನ್ಹಾಸ್ 2015ರಲ್ಲಿ ತಮ್ಮ ತವರು ಜಮ್ಮು ಮತ್ತು ಕಾಶ್ಮೀರಕ್ಕೆ ಮರಳಿದರು. ಅವರ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ 157 ಪಂದ್ಯಗಳು, 9,714 ರನ್‌ಗಳು ಮತ್ತು 27 ಶತಕಗಳು ಸೇರಿವೆ. ಅಲ್ಲದೆ, ಅವರು 130 ಲಿಸ್ಟ್ ಎ ಪಂದ್ಯಗಳಲ್ಲಿ 4,126 ರನ್‌ಗಳು ಮತ್ತು 91 ಟಿ-20 ಪಂದ್ಯಗಳಲ್ಲಿ 1170 ರನ್‌ಗಳನ್ನು ಕಲೆ ಹಾಕಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications