Ind vs Nz: ಭಾರತ ತಂಡದಲ್ಲಿ ಒಂದು ಬದಲಾವಣೆ; ಕಣಕ್ಕಿಳಿಯಲು ಸಜ್ಜಾದ ಮಾರಕ ವೇಗಿ!
ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಭಾರತ ತಂಡ ಕಠಿಣ ಅಭ್ಯಾಸ ನಡೆಸುತ್ತಿದೆ. ಭಾನುವಾರ (ಮಾರ್ಚ್, 2) ದುಬೈನಲ್ಲಿ ಚಾಂಪಿಯನ್ಸ್ ಟ್ರೋಫಿ 2025ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ವಿರುದ್ಧ ಸೆಣೆಸಲಿದೆ. ಎರಡೂ ತಂಡಗಳು ಈಗಾಗಲೇ ಫೈನಲ್ ತಲುಪಿರುವುದರಿಂದ, ಇದು ಅಂಕಪಟ್ಟಿಯಲ್ಲಿ ಮೊದಲ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಾಗಿದೆ.
ಶುಕ್ರವಾರ ಭಾರತ ತಂಡ ಕಠಿಣ ಅಭ್ಯಾಸ ನಡೆಸಿದ್ದು ಹಿರಿಯ ವೇಗಿ ಮೊಹಮ್ಮದ್ ಶಮಿ 7 ಅಥವಾ 8 ಓವರ್ ಮಾತ್ರ ಬೌಲಿಂಗ್ ಮಾಡಿದ್ದಾರೆ. ಶಮಿ ಬೌಲಿಂಗ್ ಮಾಡುವಾಗಲೇ ಅವರು ಸಂಪೂರ್ಣವಾಗಿ ಫಿಟ್ ಆಗಿಲ್ಲ ಎನ್ನುವುದು ಗೊತ್ತಾಗುತ್ತದೆ. ಶಮಿ ಮೊಣಕಾಲು ನೋವಿನಿಂದ ಬಳಲುತ್ತಿದ್ದಾರೆ, ಪಾಕಿಸ್ತಾನ ವಿರುದ್ಧದ ಪಂದ್ಯದ ವೇಳೆ ಅವರು ಕೆಲ ಸಮಯ ಹೊರಗಡೆ ಉಳಿದಿದ್ದರು. ಬಳಿಕ ಮೈದಾನಕ್ಕೆ ಬಂದಿದ್ದ ಅವರು 5 ಓವರ್ ಬೌಲಿಂಗ್ ಮಾಡಿದರೂ ವಿಕೆಟ್ ಪಡೆಯುವಲ್ಲಿ ವಿಫಲವಾದರು.

ತಂಡದಲ್ಲಿ ಬದಲಾವಣೆ?
ಪಿಟಿಐ ವರದಿ ಮಾಡಿರುವ ಪ್ರಕಾರ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಹೆಚ್ಚಾಗಿದ್ದು, ಅವರ ಬದಲಾಗಿ ಅರ್ಶದೀಪ್ ಸಿಂಗ್ ಆಡುವ ಸಾಧ್ಯತೆ ಇದೆ. ಶುಕ್ರವಾರ ಅರ್ಶದೀಪ್ ಸಿಂಗ್ ಐಸಿಸಿ ಅಕಾಡೆಮಿಯ ನೆಟ್ಸ್‌ನಲ್ಲಿ ಹೆಚ್ಚಿನ ಅಭ್ಯಾಸ ಮಾಡಿದರು. ಸಹಾಯಕ ಕೋಚ್ ಮಾರ್ನೆ ಮಾರ್ಕೆಲ್ ಮಾರ್ಗದರ್ಶನದಲ್ಲಿ 13 ಓವರ್ ಬೌಲಿಂಗ್ ಮಾಡಿದರು.
ಮೊಹಮ್ಮದ್ ಶಮಿ ಬದಲಾಗಿ ಅರ್ಶದೀಪ್ ಸಿಂಗ್ ಆಡಲಿದ್ದಾರೆ ಎನ್ನುವ ಸುದ್ದಿಗೆ ಇದು ಮತ್ತಷ್ಟು ಬಲ ತುಂಬಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಗುಂಪು ಹಂತದ ಪಂದ್ಯ ಇದಾಗಿದ್ದು, ಸೆಮಿಫೈನಲ್‌ಗೆ ಮುನ್ನ ಬೆಂಚ್ ಕಾದಿರುವ ಆಟಗಾರರಿಗೆ ಅವಕಾಶ ಕೊಡುವ ಸಾಧ್ಯತೆ ಇದೆ. ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧ ನೇರವಾಗಿ ಸೆಮಿಫೈನಲ್‌ಗೆ ತಂಡದಲ್ಲಿ ಬದಲಾವಣೆ ಮಾಡಿದರೆ ಪ್ರದರ್ಶನದ ಮೇಲೆ ಪರಿಣಾಮ ಬೀರುವ ಆತಂಕವಿದೆ.
ಮೊಹಮ್ಮದ್ ಶಮಿಗೆ ಚೇತರಿಸಿಕೊಳ್ಳಲು ಮತ್ತಷ್ಟು ಸಮಯ ಸಿಗುವುದರಿಂದ ಅವರು ಸೆಮಿಫೈನಲ್ ಪಂದ್ಯಕ್ಕೆ ಸಂಪೂರ್ಣವಾಗಿ ಫಿಟ್ ಆಗಬಹುದು. ಅರ್ಶದೀಪ್ ಸಿಂಗ್ ಇನ್ನೂ ದುಬೈನಲ್ಲಿ ಪಂದ್ಯವನ್ನು ಆಡಿಲ್ಲ. ನಾಳಿನ ಪಂದ್ಯದಲ್ಲಿ ಅವರಿಗೆ ಅವಕಾಶ ಸಿಗಬಹುದು.
ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಭಾರತದ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ರಿಷಭ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.












Click it and Unblock the Notifications