Ind vs Aus: ಟೀಂ ಇಂಡಿಯಾ ಅಭಿಮಾನಿಗಳಿಗೆ ಶಾಕ್! ಶಮಿ ಆಡೋದು ಅನುಮಾನ
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಮೊಹಮ್ಮದ್ ಶಮಿ ಆಡುತ್ತಾರೆ ಎನ್ನುವ ಭರವಸೆ ಹೊಂದಿದ್ದ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ. ಮೊಹಮ್ಮದ್ ಶಮಿ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ನಾಲ್ಕನೇ ಅಥವಾ ಐದನೇ ಟೆಸ್ಟ್ ಪಂದ್ಯದಲ್ಲಿ ಆಡುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು, ಆದರೆ ಸದ್ಯದ ಮಾಹಿತಿ ಪ್ರಕಾರ ಮೊಹಮ್ಮದ್ ಶಮಿ ಸರಣಿಯಲ್ಲಿ ಆಡುವುದು ಅನುಮಾನವಾಗಿದೆ.
ಡಿಸೆಂಬರ್ 21ರಿಂದ ಆರಂಭವಾಗಲಿರುವ ವಿಜಯ್ ಹಜಾರೆ ಟ್ರೋಫಿ (VHT) 2024-25ರ ಪಂದ್ಯಾವಳಿಯಲ್ಲಿ ಮೊಹಮ್ಮದ್ ಶಮಿ ಆಡುವುದು ಬಹುತೇಕ ಖಚಿತವಾಗಿದೆ. ಬಂಗಾಳ ತನ್ನ ತಂಡವನ್ನು ಪ್ರಕಟಿಸಿದ್ದು ಮೊಹಮ್ಮದ್ ಶಮಿ ಬಂಗಾಳ ತಂಡದ ಪರ ಆಡಲಿದ್ದಾರೆ.

ಟೆಸ್ಟ್‌ನಲ್ಲಿ ಶಮಿ ಆಡೋದು ಅನುಮಾನ
2023ರ ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಮೊಹಮ್ಮದ್ ಶಮಿ ಗಾಯಗೊಂಡಿದ್ದರು. ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದ ಅವರು ಸುದೀರ್ಘ ವಿಶ್ರಾಂತಿ ಬಳಿಕ ಅವರು ಮತ್ತೆ ದೇಶೀಯ ಕ್ರಿಕೆಟ್‌ಗೆ ಮರಳಿದ್ದಾರೆ. ರಣಜಿ ಪಂದ್ಯಾವಳಿಯಲ್ಲಿ ಆಡಿದ ಅವರು, ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.
ರೇವ್‌ಸ್ಪೋರ್ಟ್ಸ್ ವರದಿ ಮಾಡಿರುವ ಪ್ರಕಾರ ಮೊಹಮ್ಮದ್ ಶಮಿ ಇದೀಗ 50 ಓವರ್ ಪಂದ್ಯಾವಳಿಯಲ್ಲಿ ಆಡಲು ಸಜ್ಜಾಗಿದ್ದಾರೆ. ಬಂಗಾಳದ ಪರ ಕಣಕ್ಕಿಳಿಯಲಿದ್ದಾರೆ. ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಪಂದ್ಯಾವಳಿಯಲ್ಲಿ 9 ಪಂದ್ಯಗಳಲ್ಲಿ ಆಡಿದ ಶಮಿ 7.86 ಎಕಾನಮಿಯಲ್ಲಿ 11 ವಿಕೆಟ್ ಪಡೆದಿದ್ದಾರೆ.
ಮೊಹಮ್ಮದ್ ಶಮಿ ತಾನು ಫಿಟ್ ಆಗಿದ್ದೇನೆ ಎಂದು ಹೇಳಿದರೂ ಬಿಸಿಸಿಐ ಬೇರೆಯದೇ ಯೋಚನೆ ಹೊಂದಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಆಡುವ ಮೊದಲು ತೂಕ ಕಡಿಮೆ ಮಾಡಿಕೊಂಡು. 100% ಫಿಟ್‌ನೆಸ್ ಪಡೆಯುವಂತೆ ಸೂಚನೆ ನೀಡಲಾಗಿದೆ. ಅಡಿಲೇಡ್ ಟೆಸ್ಟ್ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕ ರೋಹಿತ್ ಶರ್ಮಾ, ಮೊಹಮ್ಮದ್ ಶಮಿ ತಂಡಕ್ಕೆ ಸೇರಲು ಸಂಪೂರ್ಣ ಫಿಟ್ ಆಗಿರಬೇಕು ಎಂದಿದ್ದಾರೆ.
"ಮೊಹಮ್ಮದ್ ಶಮಿಗಾಗಿ ತಂಡದ ಬಾಗಿಲು ತೆರೆದಿದೆ, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಆಡುವಾಗ ಮೊಣಕಾಲು ಊದಿಕೊಂಡಿದ್ದು ನಾವು ಅವರ ಮೇಲೆ ಹೆಚ್ಚಿನ ನಿಗಾ ಇಟ್ಟಿದ್ದೇವೆ. ಅವರು 100% ಫಿಟ್ ಆಗದ ಹೊರತು ತಂಡಕ್ಕೆ ಕರೆತರಲು ಸಾಧ್ಯವಿಲ್ಲ" ಎಂದು ಹೇಳಿದರು.
99% ಫಿಟ್ ಆಗಿದ್ದರೂ ಶಮಿಯನ್ನು ಆಸ್ಟ್ರೇಲಿಯಾದಲ್ಲಿ ಆಡಿಸಲು ಬಿಸಿಸಿಐ ಒಪ್ಪಿಕೊಂಡಿಲ್ಲ.. ಟೆಸ್ಟ್ ಪಂದ್ಯದಲ್ಲಿ ಆಡಲು ಹೆಚ್ಚಿನ ಫಿಟ್‌ನೆಸ್ ಬೇಕಾಗಿರುವ ಕಾರಣ, ಈ ವಿಚಾರದಲ್ಲಿ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ. ಒಂದು ವೇಳೆ ಮೊಹಮ್ಮದ್ ಶಮಿ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಆಡದೇ ಇದ್ದರೆ 2025ರ ಫೆಬ್ರವರಿಯಲ್ಲಿ ನಡೆಯಲಿರುವ ಬಾರ್ಡರ್ ಗವಾಸ್ಕರ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತ ತಂಡಕ್ಕೆ ವಾಪಸಾಗಲು ಯೋಜಿಸಬಹುದು.












Click it and Unblock the Notifications