ಮುಂಬೈ ಇಂಡಿಯನ್ಸ್ ತಂಡದಲ್ಲಿ ಬಿರುಕು; ರೋಹಿತ್ ಪಡೆ, ಹಾರ್ದಿಕ್ ಪಡೆ ಮಧ್ಯೆ ಮನಸ್ತಾಪ!

ಐಪಿಎಲ್ 2024ರ ಆವೃತ್ತಿಯಲ್ಲಿ ಅತಿ ಹೆಚ್ಚು ಚರ್ಚೆಯಾಗುತ್ತಿರುವುದು ಮುಂಬೈ ಇಂಡಿಯನ್ಸ್ ತಂಡದ ಬಗ್ಗೆ. ಹಾರ್ದಿಕ್ ಪಾಂಡ್ಯ ಗುಜರಾತ್ ಟೈಟಾನ್ಸ್ ತಂಡ ತೊರೆದು ಮುಂಬೈ ಇಂಡಿಯನ್ಸ್ ತಂಡ ಸೇರಿಕೊಂಡಿದ್ದಲ್ಲದೆ, ನಾಯಕನ ಜವಾಬ್ದಾರಿ ಕೂಡ ವಹಿಸಿಕೊಂಡಿದ್ದರು.

ನಾಯಕತ್ವದಿಂದ ಕೆಳಗಿಳಿಸಿದ್ದು ರೋಹಿತ್ ಶರ್ಮಾರ ಅಸಮಾಧಾನಕ್ಕೆ ಕಾರಣವಾಗಿತ್ತಾ ಎನ್ನುವ ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ ಅವರ ಅಭಿಮಾನಿಗಳು ಮಾತ್ರ ಹಾರ್ದಿಕ್ ಪಾಂಡ್ಯ ಮತ್ತು ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮೇಲೆ ಕಿಡಿ ಕಾರುತ್ತಿದ್ದಾರೆ.

Mumbai Indians Division Between Team Rohit Sharma and Hardik Pandya Reports

ಗಾಯದ ಮೇಲೆ ಬರೆ ಎಳೆದಂತೆ ಮುಂಬೈ ಇಂಡಿಯನ್ಸ್ ತಂಡ ಐಪಿಎಲ್‌ 2024ರ ಆಡಿರುವ ಮೊದಲ ಎರಡೂ ಪಂದ್ಯಗಳಲ್ಲಿ ಸೋತಿದೆ. ಬುಧವಾರ ಸನ್‌ರೈಸರ್ಸ್ ಹೈದಾರಾಬಾದ್ ತಂಡ ಮುಂಬೈ ವಿರುದ್ಧ 277 ರನ್‌ಗಳನ್ನು ಬಾರಿಸುವ ಮೂಲಕ ಐಪಿಎಲ್‌ನಲ್ಲೇ ಹೊಸ ದಾಖಲೆ ಬರೆಯಿತು.

ಜಾಗರಣ್ ನ್ಯೂಸ್‌ನ ವರದಿಗಳ ಪ್ರಕಾರ ಮುಂಬೈ ಇಂಡಿಯನ್ಸ್ ತಂಡವು ಎರಡು ಭಾಗವಾಗಿದೆ. ರೋಹಿತ್ ಶರ್ಮಾ ಬೆಂಬಲಿಸುವ ಒಂದು ಗುಂಪು ಇದ್ದರೆ, ಮತ್ತೊಂದು ಗುಂಪು ಹಾರ್ದಿಕ್ ಪಾಂಡ್ಯ ಬೆಂಬಲಿಸುತ್ತದೆ.

ರೋಹಿತ್ ಶರ್ಮಾ ಅಸಮಾಧಾನ

ಈ ವರದಿಗಳು ಹಾರ್ದಿಕ್ ಪಾಂಡ್ಯಗೆ ನಾಯಕತ್ವವನ್ನು ಬಿಟ್ಟುಕೊಡುವುದರೊಂದಿಗೆ ರೋಹಿತ್ ಶರ್ಮಾ ಅವರ ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದೆ. ಎಲ್ಲಾ ಸ್ವರೂಪಗಳಲ್ಲಿ ಪ್ರಸ್ತುತ ಭಾರತೀಯ ನಾಯಕ ರೋಹಿತ್ ಶರ್ಮಾ ಈ ನಿರ್ಧಾರದಿಂದ ಸಂತಸಗೊಂಡಿಲ್ಲ.

ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ಮತ್ತು ಇತರ ಆಟಗಾರರು 'ರೋಹಿತ್ ಶರ್ಮಾ ತಂಡ'ದಲ್ಲಿದ್ದಾರೆ ಎಂದು ಹೇಳಲಾಗುತ್ತದೆ. ಏತನ್ಮಧ್ಯೆ, ಇಶಾನ್ ಕಿಶನ್ ಮತ್ತು ಇತರರು 'ಟೀಮ್ ಹಾರ್ದಿಕ್ ಪಾಂಡ್ಯ' ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ತಂಡದ ನಡುವಿನ ಹೊಂದಾಣಿಕೆ ಸಮಸ್ಯೆ ಪ್ರದರ್ಶನದ ಮೇಲೆ ಪರಿಣಾಮ ಬೀರಿದೆ.

ಪಾಂಡ್ಯ ನಾಯಕತ್ವದ ಬಗ್ಗೆ ಅಸಮಾಧಾನ

ಹಾರ್ದಿಕ್ ಪಾಂಡ್ಯ ನಾಯಕತ್ವದ ಬಗ್ಗೆಯೂ ಅಸಮಾಧಾನಗೊಂಡಿದ್ದಾರೆ, ಸಾಮಾಜಿಕ ಮಾಧ್ಯಮಗಳಲ್ಲಿ ಹಾರ್ದಿಕ್ ಪಾಂಡ್ಯ ಬಗ್ಗೆ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ. ಅಹಮದಾಬಾದ್‌ನಲ್ಲಿ ಮೊದಲ ಪಂದ್ಯದ ಬಳಿಕ, ಹೈದರಾಬಾದ್‌ನಲ್ಲಿ ಕೂಡ ಪಾಂಡ್ಯ ವಿರುದ್ಧ ಅಭಿಮಾನಿಗಳು ಕೋಪಗೊಂಡಿದ್ದನ್ನು ನೋಡಬಹುದಾಗಿತ್ತು.

ತಂಡದ ಮೇಲೆ ಪರಿಣಾಮ

ಗೆಲ್ಲಲು ಹೆಣಗಾಡುತ್ತಿರುವ ತಂಡ ಮತ್ತು ಡ್ರೆಸ್ಸಿಂಗ್ ರೂಮ್‌ ಎರಡು ಭಾಗವಾಗುವ ಮೂಲಕ ಮುಂಬೈ ಇಂಡಿಯನ್ಸ್ ಸಂಕಷ್ಟದಲ್ಲಿ ಸಿಲುಕಿದೆ. ಅವರು ಈ ಸವಾಲುಗಳನ್ನು ಮೆಟ್ಟಿ ನಿಂತು ಹಾರ್ದಿಕ್ ಪಾಂಡ್ಯ ನಾಯಕತ್ವದಲ್ಲಿ ಒಂದಾಗುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+