SRH vs LSG: ಸನ್‌ರೈಸರ್ಸ್ ಹೈದರಾಬಾದ್‌ ದಾಖಲೆಯ ಗೆಲುವು; ಲೀಗ್‌ನಿಂದ ಹೊರಬಿದ್ದ ಮುಂಬೈ ಇಂಡಿಯನ್ಸ್

ಐಪಿಎಲ್ ಇತಿಹಾಸದಲ್ಲಿ ಕಳೆದ 16 ವರ್ಷಗಳಲ್ಲಿ ಮಾಡಿದ್ದ ದಾಖಲೆಗಳಲ್ಲ 17ನೇ ವರ್ಷದಲ್ಲಿ ಪುಡಿಯಾಗುತ್ತಿವೆ. ಈ ವರ್ಷ ಹಲವು ದಾಖಲೆಗಳನ್ನು ಐಪಿಎಲ್‌ನಲ್ಲಿ ನೋಡಿದ್ದೇವೆ, ಇಂದು ಸನ್‌ರೈಸರ್ಸ್ ಹೈದರಾಬಾದ್‌ ಅಂತಹ ಮತ್ತೊಂದು ವಿಶೇಷ ದಾಖಲೆ ಬರೆದಿದೆ.

ಹೈದರಾಬಾದ್‌ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಲಕ್ನೊ ಸೂಪರ್ ಜೈಂಟ್ಸ್ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಮುಂಬೈ ಇಂಡಿಯನ್ಸ್ ಅಧಿಕೃತವಾಗಿ ಟೂರ್ನಿಯಿಂದ ಹೊರಬಿದ್ದಿದೆ.

Mumbai Indians Knocked Out from IPL 2024 After SRH s Massive Win Over LSG

ಟಾಸ್ ಗೆದ್ದ ಲಕ್ನೋ ಸೂಪರ್ ಜೈಂಟ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ನಿಧಾನಗತಿಯ ಆರಂಭ ಪಡೆದ ಎಲ್‌ಎಸ್‌ಜಿ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 165 ರನ್ ಗಳಿಸಿತು. ಕೆಎಲ್ ರಾಹುಲ್ 33 ಎಸೆತಗಳಲ್ಲಿ ಕೇವಲ 29 ರನ್ ಗಳಿಸಿದ್ದು, ತಂಡಕ್ಕೆ ಸಾಕಷ್ಟು ಹಿನ್ನಡೆಯಾಗಲು ಕಾರಣವಾಯಿತು.

ನಿಕೋಲಸ್ ಪೂರನ್ 26 ಎಸೆತಗಳಲ್ಲಿ 48 ರನ್ ಗಳಿಸಿದರೆ, ಆಯುಷ್ ಬದೋನಿ 30 ಎಸೆತಗಳಲ್ಲಿ 55 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ಭುವನೇಶ್ವರ್ ಕುಮಾರ್ 4 ಓವರ್ ಗಳಲ್ಲಿ ಕೇವಲ 12 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು.

ಹೆಡ್, ಅಭಿಷೇಕ್ ಸ್ಫೋಟಕ ಬ್ಯಾಟಿಂಗ್

ಇದು ಬೌಲರ್ ಗಳಿಗೆ ಸಹಕಾರಿಯಾಗುವ ಪಿಚ್, ಬ್ಯಾಟಿಂಗ್ ಕಷ್ಟ ಎಂದೇ ಅಂದುಕೊಳ್ಳಲಾಗಿತ್ತು. ಆದರೆ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಎಲ್ಲರ ಲೆಕ್ಕಾಚಾರ ತಲೆಕೆಳಗು ಮಾಡಿದರು.

ಈ ಜೋಡಿ ಕೇವಲ 9.4 ಓವರ್ ಗಳಲ್ಲಿ 167 ರನ್ ಕಲೆಹಾಕುವ ಮೂಲಕ ತಮ್ಮ ತಂಡಕ್ಕೆ ಬೃಹತ್ ಗೆಲುವು ತಂದುಕೊಟ್ಟರು. ಅಭಿಷೇಕ್ ಶರ್ಮಾ 28 ಎಸೆತಗಳಲ್ಲಿ 8 ಬೌಂಡರಿ 6 ಭರ್ಜರಿ ಸಿಕ್ಸರ್ ಸಹಿತ ಅಜೇಯ 75 ರನ್ ಗಳಿಸಿದರೆ, ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 8 ಬೌಂಡರಿ 8 ಸಿಕ್ಸರ್ ಸಹಿತ ಅಜೇಯ 89 ರನ್ ಗಳಿಸಿದರು.

ಹಲವು ದಾಖಲೆಗಳು ನಿರ್ಮಾಣ

ಇನ್ನೂ 62 ಎಸೆತ ಬಾಕಿ ಇರುವಂತೆ ಸನ್‌ರೈಸರ್ಸ್ ಹೈದರಾಬಾದ್ ಗೆಲುವು ಸಾಧಿಸಿದ. ಐಪಿಎಲ್ ಇತಿಹಾಸದಲ್ಲಿ 100 ಕ್ಕೂ ಹೆಚ್ಚು ರನ್ ಚೇಸ್ ಮಾಡುವಾಗ ಇದು ಅತಿ ದೊಡ್ಡ ಗೆಲುವಾಗಿದೆ. 9.4 ಓವರ್ ಗಳಲ್ಲಿ 167 ರನ್ ಗಳಿಸಿದ್ದು, ಮೊದಲ 10 ಓವರ್ ಗಳಿಗೆ ಕಲೆ ಹಾಕಿದ ಅತ್ಯಧಿಕ ಮೊತ್ತ ಇದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+