IPL 2023: ಮೊದಲನೇ ಪಂದ್ಯವನ್ನಾಡಲು ಬೆಂಗಳೂರಿಗೆ ಬಂದ ಮುಂಬೈ ಇಂಡಿಯನ್ಸ್

ಇಂಡಿಯನ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಗೆ ಅದ್ಧೂರಿ ಚಾಲನೆ ಸಿಕ್ಕಿದೆ. 60 ದಿನಗಳ ಕಾಲ ಭಾರತದಲ್ಲಿ ಕ್ರಿಕೆಟ್ ಹಬ್ಬ ನಡೆಯಲಿದೆ. ಮೂರು ವರ್ಷಗಳ ಬಳಿಕ ಅದ್ಧುರಿ ಉದ್ಘಾಟನಾ ಕಾರ್ಯಕ್ರಮ ಕೂಡ ನಡೆಯಿತು. ಅರಿಜಿತ್ ಸಿಂಗ್, ತಮನ್ನಾ ಭಾಟಿಯಾ ಮತ್ತು ರಶ್ಮಿಕಾ ಮಂದಣ್ಣ ಹಾಡು ಮತ್ತು ನೃತ್ಯದ ಮೂಲಕ ನೆರೆದಿದ್ದ ಅಪಾರ ಅಭಿಮಾನಿಗಳನ್ನು ರಂಜಿಸಿದರು. ಒಂದು ಲಕ್ಷಕ್ಕೂ ಹೆಚ್ಚು ಮಂದಿ ಕ್ರೀಡಾಂಗಣದಲ್ಲಿ ಹಾಜರಿದ್ದರು. ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ಮುಖಾಮುಖಿಯಾಗಿವೆ.

5 ಬಾರಿ ಐಪಿಎಲ್ ಟ್ರೋಫಿ ಗೆದ್ದಿರುವ ಮುಂಬೈ ಇಂಡಿಯನ್ಸ್ ತಂಡ ತಮ್ಮ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಏಪ್ರಿಲ್ 2 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಮೊದಲನೇ ಪಂದ್ಯವನ್ನಾಡಲು ರೋಹಿತ್ ಶರ್ಮಾ ನೇತೃತ್ವದ ತಂಡ ಶುಕ್ರವಾರ ಬೆಂಗಳೂರಿಗೆ ಬಂದಿಳಿದಿದೆ. ಬೆಂಗಳೂರಿಗೆ ಬಂದ ಮುಂಬೈ ತಂಡಕ್ಕೆ ಸಾಂಪ್ರದಾಯಿಕ ಸ್ವಾಗತ ಸಿಕ್ಕಿದೆ.

Mumbai Indians Team Has Reached In Bengaluru For The First Match Against Rcb In Ipl 2023

ಗುರುವಾರ ಐಪಿಎಲ್ ಆರಂಭಕ್ಕೆ ಮುನ್ನ ಎಲ್ಲಾ ತಂಡದ ನಾಯಕರು ಅಹಮದಾಬಾದ್‌ನಲ್ಲಿ ಸೇರಿದ್ದರು. ಐಪಿಎಲ್‌ನ ಟ್ರೋಫಿ ಜೊತೆ ಎಲ್ಲಾ ಫೋಸ್ ನೀಡಿದ್ದರು. ಈ ಕಾರ್ಯಕ್ರಮದಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ಗೈರಾಗಿದ್ದರು. ಸನ್‌ರೈಸರ್ಸ್ ಹೈದರಾಬಾದ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಅನುಪಸ್ಥಿತಿಯಲ್ಲಿ ಭುವನೇಶ್ವರ್ ಕುಮಾರ್ ನಾಯಕರಾಗಿ ಕಾಣಿಸಿಕೊಂಡಿದ್ದರು.

ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿ ಮುಂಬೈ

ಐಪಿಎಲ್ ಇತಿಹಾಸದಲ್ಲಿ 5 ಬಾರಿ ಕಪ್ ಗೆದ್ದಿರುವ ಮುಂಬೈ ಇಂಡಿಯನ್ಸ್ ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಆಡಿದ 14 ಪಂದ್ಯಗಳಲ್ಲಿ ಕೇವಲ 4 ಪಂದ್ಯಗಳಲ್ಲಿ ಗೆದ್ದು 10 ಪಂದ್ಯಗಳಲ್ಲಿ ಸೋಲನುಭವಿಸಿದ್ದರು. ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಮುಗಿಸಿದ್ದರು. ಕಳೆದ ಆವೃತ್ತಿಯಲ್ಲಿ ಹೀನಾಯ ಪ್ರದರ್ಶನ ನೀಡಿದ್ದ ಅವರು ಈ ಬಾರಿ ಉತ್ತಮ ಪ್ರದರ್ಶನ ನೀಡುವ ಉತ್ಸಾಹದಲ್ಲಿದೆ. ತಮ್ಮ ಮೊದಲನೇ ಪಂದ್ಯವನ್ನು ಗೆಲ್ಲುವ ಮೂಲಕ ಅಭಿಯಾನ ಆರಂಭಿಸಲು ರಣತಂತ್ರ ರೂಪಿಸಲಿದೆ.

ತಂಡದ ಪ್ರಮುಖ ಬೌಲರ್ ಜಸ್ಪ್ರೀತ್ ಬುಮ್ರಾ ಗಾಯಗೊಂಡು ಪಂದ್ಯಾವಳಿಯಿಂದ ಹೊರಗುಳಿದ ಬಳಿಕ, ಅವರ ಬದಲಾಗಿ ಸಂದೀಪ್ ವಾರಿಯರ್ ಮುಂಬೈ ತಂಡವನ್ನು ಸೇರಿಕೊಂಡಿದ್ದಾರೆ. ಮಿನಿ ಹರಾಜಿನಲ್ಲಿ ಕ್ಯಾಮೆರಾನ್ ಗ್ರೀನ್‌ರನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿರುವುದು ತಂಡದ ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗಕ್ಕೆ ಹೆಚ್ಚಿನ ಶಕ್ತಿ ತಂದುಕೊಟ್ಟಿದೆ.

ರೋಹಿತ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಗ್ರೀನ್‌ರಂತಹ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದೆ. ಜೋಫ್ರಾ ಆರ್ಚರ್ ಫಿಟ್ ಆಗಿರುವುದು ತಂಡದ ಬೌಲಿಂಗ್ ವಿಭಾಗಕ್ಕೆ ಮತ್ತಷ್ಟು ಬಲ ತಂದುಕೊಟ್ಟಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವುದರಿಂದ ಹೈ ಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಲಾಗಿದೆ.

ಮುಂಬೈ ಇಂಡಿಯನ್ಸ್: ರೋಹಿತ್ ಶರ್ಮಾ (ನಾಯಕ), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ರಮಣದೀಪ್ ಸಿಂಗ್, ಅನ್ಮೋಲ್ಪ್ರೀತ್ ಸಿಂಗ್, ಡೆವಾಲ್ಡ್ ಬ್ರೆವಿಸ್, ನೆಹಾಲ್ ವಧೇರಾ, ಟಿಮ್ ಡೇವಿಡ್, ಶಮ್ಸ್ ಮುಲಾನಿ, ಪಿಯೂಷ್ ಚಾವ್ಲಾ, ಕ್ಯಾಮರೂನ್ ಗ್ರೀನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕೀನ್, ಅರ್ಜುನ್ ತೆಂಡೂಲ್ಕರ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ವಿಷ್ಣು ವಿನೋದ್, ಜೋಫ್ರಾ ಆರ್ಚರ್, ಅರ್ಷದ್ ಖಾನ್, ಜೇಸನ್ ಬೆಹ್ರೆಂಡಾರ್ಫ್, ರಾಘವ್ ಗೋಯಲ್, ದುವಾನ್ ಜಾನ್ಸೆನ್, ಆಕಾಶ್ ಮಧ್ವಲ್, ಸಂದೀಪ್ ವಾರಿಯರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+