MI vs CSK: ರೋಹಿತ್, ಸೂರ್ಯ ಅಬ್ಬರಕ್ಕೆ ಬೆಚ್ಚಿಬಿದ್ದ ಸಿಎಸ್‌ಕೆ; ಮುಂಬೈ ಇಂಡಿಯನ್ಸ್‌ಗೆ ಭರ್ಜರಿ ಗೆಲುವು

ಐಪಿಎಲ್ 2025ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಗೆಲುವಿನ ಲಯಕ್ಕೆ ಮರಳಿದೆ. ಆರಂಭದಲ್ಲಿ ಸತತ ಸೋಲುಗಳಿಂದ ಕಂಗೆಟ್ಟಿದ್ದ ಮುಂಬೈ ಇಂಡಿಯನ್ಸ್ ತವರಿನ ಅಂಗಳದಲ್ಲಿ ಗೆಲುವಿನ ಹಾದಿಗೆ ವಾಪಸಾಗಿದೆ. ಭಾನುವಾರ ನಡೆದ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 176 ರನ್ ಕಲೆಹಾಕಿತು. ಸಿಎಸ್‌ಕೆ ಪರವಾಗಿ ಮೊದಲ ಪಂದ್ಯ ಆಡಿದ 17 ವರ್ಷದ ಹುಡುಗ ಆಯುಷ್ ಮಾತ್ರೆ 15 ಎಸೆತಗಳಲ್ಲಿ 32 ರನ್ ಗಳಿಸುವ ಮೂಲಕ ಸ್ಫೋಟಕ ಆರಂಭ ನೀಡಿದರು. ಶೇಕ್ ರಷೀದ್ 20 ಎಸೆತಗಳಲ್ಲಿ 19 ರನ್ ಗಳಿಸಿದರೆ, ರಚಿನ್ ರವೀಂದ್ರ 5 ರನ್ ಗಳಿಸಿ ಔಟಾದರು.

Mumbai indians won against csk rohit sharma ipl 2025

ರವೀಂದ್ರ ಜಡೇಜಾ ಮತ್ತು ಶಿವಂ ದುಬೆ ಅರ್ಧಶತಕ ಗಳಿಸುವ ಮೂಲಕ ಸಿಎಸ್‌ಕೆ ತಂಡಕ್ಕೆ ಆಸರೆಯಾದರು. ಶಿವಂ ದುಬೆ 32 ಎಸೆತಗಳಲ್ಲಿ 2 ಬೌಂಡರಿ 4 ಸಿಕ್ಸರ್ ಸಹಿತ 50 ರನ್ ಗಳಿಸಿದರೆ, ರವೀಂದ್ರ ಜಡೇಜಾ 35 ಎಸೆತಗಳಲ್ಲಿ 4 ಬೌಂಡರಿ 2 ಸಿಕ್ಸರ್ ಸಹಿತ ಅಜೇಯ 53 ರನ್ ಗಳಿಸಿದರು. ಧೋನಿ 4 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಜಸ್ಪ್ರೀತ್ ಬುಮ್ರಾ 2 ವಿಕೆಟ್ ಪಡೆದು ಮುಂಬೈ ಇಂಡಿಯನ್ಸ್ ಪರವಾಗಿ ಯಶಸ್ವೀ ಬೌಲರ್ ಎನಿಸಿಕೊಂಡರು.

ರೋಹಿತ್, ಸೂರ್ಯಕುಮಾರ್ ಅಬ್ಬರ

177 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ಸ್ಫೋಟಕ ಆರಂಭ ಪಡೆಯಿತು. ಈ ಆವೃತ್ತಿಯಲ್ಲಿ ಫಾರ್ಮ್‌ಗೆ ಮರಳಲು ಪರದಾಡುತ್ತಿದ್ದ ರೋಹಿತ್ ಶರ್ಮಾ ಕೊನೆಗೂ ಲಯ ಕಂಡುಕೊಂಡರು. ರಿಯಾನ್ ರಿಕಲ್ಟನ್‌ ಮತ್ತು ರೋಹಿತ್ ಶರ್ಮಾ ಮೊದಲ ವಿಕೆಟ್‌ಗೆ 63 ರನ್ ಕಲೆಹಾಕಿದರು. ರಿಯಾನ್ ರಿಕಲ್ಟನ್ 19 ಎಸೆತಗಳಲ್ಲಿ 24 ರನ್ ಗಳಿಸಿದರು.

ಬಳಿಕ ಜೊತೆಯಾದ ರೋಹಿತ್ ಶರ್ಮಾ ಮತ್ತು ಸೂರ್ಯಕುಮಾರ್ ಯಾದವ್ ಸಿಎಸ್‌ಕೆ ಬೌಲರ್ ಗಳ ಮೇಲೆ ಸವಾರಿ ಮಾಡಿದರು. ರೋಹಿತ್ ಶರ್ಮಾ 45 ಎಸೆತಗಳಲ್ಲಿ 4 ಬೌಂಡರಿ 6 ಸಿಕ್ಸರ್ ಸಹಿತ ಅಜೇಯ 76 ರನ್ ಗಳಿಸಿದರು, ಸೂರ್ಯಕುಮಾರ್ ಯಾದವ್ 30 ಎಸೆತಗಳಲ್ಲಿ 6 ಬೌಂಡರಿ 5 ಸಿಕ್ಸರ್ ಸಹಿತ ಅಜೇಯ 68 ರನ್ ಗಳಿಸಿ ಮುಂಬೈ ಇಂಡಿಯನ್ಸ್‌ಗೆ ಸುಲಭ ಗೆಲುವು ತಂದುಕೊಟ್ಟರು. 15.4 ಓವರ್ ಗಳಲ್ಲೇ 177 ರನ್ ಗಳಿಸುವ ಮೂಲಕ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಮುಂಬೈ ಇಂಡಿಯನ್ಸ್ ಆವೃತ್ತಿಯ 4ನೇ ಗೆಲುವು ಸಾಧಿಸಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+