Musheer Khan: ಧೋನಿಯಂತೆ ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಸಿಡಿಸಿದ ಸರ್ಫರಾಜ್ ಖಾನ್ ಸಹೋದರ
ಸದ್ಯ ಭಾರತೀಯ ಕ್ರಿಕೆಟ್‌ನಲ್ಲಿ ಖಾನ್ ಸಹೋದರರ ಬಗ್ಗೆ ಹೆಚ್ಚಿನ ಚರ್ಚೆ ನಡೆಯುತ್ತಿದೆ. ದೇಶೀಯ ಕ್ರಿಕೆಟ್‌ನಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಸರ್ಫರಾಜ್ ಖಾನ್ ಭಾರತ ಟೆಸ್ಟ್ ತಂಡಕ್ಕೆ ಸೇರ್ಪಡೆಯಾಗಿದ್ದು, ಮೊದಲ ಪಂದ್ಯವನ್ನಾಡಲು ಉತ್ಸಾಹದಿಂದ ಕಾಯುತ್ತಿದ್ದಾರೆ.
ಮತ್ತೊಂದೆಡೆ ಸರ್ಫರಾಜ್ ಖಾನ್ ಅವರ ತಮ್ಮ ಮುಶೀರ್ ಖಾನ್ ಅಂಡರ್ 19 ವಿಶ್ವಕಪ್‌ನಲ್ಲಿ ಮಿಂಚುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಸೂಪರ್ ಸಿಕ್ಸ್ ಪಂದ್ಯದಲ್ಲಿ ಅಮೋಘ ಶತಕ ಸಿಡಿಸುವ ಮೂಲಕ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರು 131 ರನ್ ಗಳಿಸಿ ಗಮನ ಸೆಳೆದರು. ಈ ಸಂದರ್ಭದಲ್ಲಿ ಅವರು ಹೆಲಿಕಾಪ್ಟರ್ ಶಾಟ್ ಬಾರಿಸುವ ಮೂಲಕ ಗಮನ ಸೆಳೆದಿದ್ದಾರೆ. ಮೇಸನ್ ಕ್ಲಾರ್ಕ್ ಅವರ ಬೌಲಿಂಗ್‌ನಲ್ಲಿ ಡೀಪ್ ಮಿಡ್-ವಿಕೆಟ್ ಮೇಲೆ ಬೃಹತ್ ಸಿಕ್ಸರ್ ಬಾರಿಸಿದ ಮುಶೀರ್ ಖಾನ್ ಎಂಎಸ್ ಧೋನಿಯನ್ನು ನೆನಪಿಸಿಕೊಳ್ಳುವಂತೆ ಮಾಡಿದರು.
ಅವರು ಹೆಲಿಕಾಪ್ಟರ್ ಶಾಟ್ ಮೂಲಕ ಸಿಕ್ಸರ್ ಬಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ ಮತ್ತು ಬಳಕೆದಾರರು ಅದನ್ನು ಮಾಜಿ ಭಾರತ ನಾಯಕ ಎಂಎಸ್ ಧೋನಿಯೊಂದಿಗೆ ಹೋಲಿಕೆ ಮಾಡುತ್ತಿದ್ದಾರೆ.
ವಿಶ್ವಕಪ್‌ನಲ್ಲಿ ಮುಶೀರ್ ಖಾನ್ ಮಿಂಚು
ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ ಅಂಡರ್19 ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಮುಶೀರ್ ಖಾನ್ ಅತ್ಯುತ್ತಮ ಬ್ಯಾಟಿಂಗ್ ಮೂಲಕ ಗಮನ ಸೆಳೆಯುತ್ತಿದ್ದಾರೆ. ಇದುವರೆಗೆ ಆಡಿರುವ ನಾಲ್ಕು ಪಂದ್ಯಗಳಲ್ಲಿ 81.25 ಸರಾಸರಿಯೊಂದಿಗೆ 103.17 ಸ್ಟ್ರೈಕ್‌ರೇಟ್‌ನಲ್ಲಿ 325 ರನ್ ಗಳಿಸಿದ್ದಾರೆ. ಇದರಲ್ಲಿ 2 ಭರ್ಜರಿ ಶತಕಗಳು ಕೂಡ ಸೇರಿವೆ. ಈ ಬಾರಿಯ ಅಂಡರ್ 19 ಏಕದಿನ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಸದ್ಯ ಮುಶೀರ್ ಖಾನ್ ಮೊದಲ ಸ್ಥಾನದಲ್ಲಿದ್ದಾರೆ.
ಒಂದು ಕಡೆ ಅಣ್ಣ ಸರ್ಫರಾಜ್ ಖಾನ್ ರಣಜಿ ಟ್ರೋಫಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದಲ್ಲದೆ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದ್ದರು. ಅಂದೇ ಮುಶೀರ್ ಖಾನ್ ಕೂಡ ವಿಶ್ವಕಪ್‌ನಲ್ಲಿ ಶತಕ ಸಿಡಿಸಿ ಗಮನ ಸೆಳೆದಿದ್ದರು. ಸರ್ಫರಾಜ್ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಭಾರತದ ಸೆಮಿಫೈನಲ್ ಹಾದಿ ಸುಲಭ
ನ್ಯೂಜಿಲೆಂಡ್ ವಿರುದ್ಧದ ಸೂಪರ್ ಸಿಕ್ಸ್ ಪಂದ್ಯದಲ್ಲಿ 201 ರನ್‌ಗಳ ಭಾರಿ ಗೆಲುವು ಸಾಧಿಸಿರುವ ಭಾರತ ತಂಡದ ಸೆಮಿಫೈನಲ್ ಹಾದಿ ಸುಗಮವಾಗಿದೆ. ಮುಂದಿನ ಸೂಪರ್ ಸಿಕ್ಸ್ ಪಂದ್ಯದಲ್ಲಿ ಭಾರತ ನೇಪಾಳ ತಂಡವನ್ನು ಎದುರಿಸಲಿದ್ದು ಆ ಪಂದ್ಯದಲ್ಲಿ ಗೆದ್ದು ಅಗ್ರಸ್ಥಾನಿಯಾಗಿ ಸೆಮಿಫೈನಲ್ ಪ್ರವೇಶಿಸುವ ಉತ್ಸಾಹದಲ್ಲಿ ಭಾರತ ತಂಡದ.
Musheer Khan and helicopter shot. Amazing feeling. #MusheerKhan pic.twitter.com/AdOjpzZmsx
— Satya Prakash (@Satya_Prakash08) January 31, 2024












Click it and Unblock the Notifications