Mysuru Dasara 2023; ದಸರಾ ಕ್ರೀಡಾಕೂಟ, ಸ್ಪರ್ಧೆಗಳ ವಿವರ

ಬೆಂಗಳೂರು, ಆಗಸ್ಟ್‌ 29; ವಿಶ್ವವಿಖ್ಯಾತ ಮೈಸೂರು ದಸರಾ 2023ಕ್ಕೆ ಅಕ್ಟೋಬರ್ 15ರಂದು ಚಾಲನೆ ಸಿಗಲಿದೆ. ಈ ಬಾರಿಯ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಆಯೋಜನೆ ಮಾಡುವ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ. ಪುರುಷರು ಮತ್ತು ಮಹಿಳೆಯರಿಗೆ ಯಾವ-ಯಾವ ಸ್ಪರ್ಧೆ ಆಯೋಜನೆ ಮಾಡಬೇಕು ಎಂದು ಸುತ್ತೋಲೆಯಲ್ಲಿ ವಿವರಣೆ ನೀಡಲಾಗಿದೆ.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತರು ಈ ಕುರಿತು ಸುತ್ತೋಲೆಯನ್ನು ಹೊರಡಿಸಿದ್ದಾರೆ. ವಿಭಾಗ, ತಾಲೂಕು, ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಯಾವ-ಯಾವ ಸ್ಪರ್ಧೆಗಳನ್ನು ಆಯೋಜನೆ ಮಾಡಬೇಕು ಎಂದು ವಿವರಣೆ ನೀಡಲಾಗಿದೆ. ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಮೈಸೂರಿನಲ್ಲಿ ದಿನಾಂಕ 15/10/2023 ರಿಂದ 19/10/2023ರ ತನಕ ಚಾಮುಂಡಿ ವಿಹಾರದಲ್ಲಿ ಏರ್ಪಡಿಸಲಾಗುವುದು. ತಾಲ್ಲೂಕು, ಜಿಲ್ಲಾ ವಿಭಾಗ ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗಳನ್ನು ಆಯೋಜನೆ ಮಾಡುವ ಕುರಿತು ಸುತ್ತೋಲೆ ತಿಳಿಸಿದೆ.

Mysore Dasara 2023 Sports Events Circular

ವಿಭಾಗ ಮಟ್ಟದ ಕ್ರೀಡಾ ಸ್ಪರ್ಧೆಗಳನ್ನು ಸಂಬಂಧಪಟ್ಟ (ಕಲಬುರಗಿ ವಿಭಾಗ, ಮೈಸೂರು ವಿಭಾಗ, ಬೆಳಗಾವಿ ವಿಭಾಗ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ವಿಭಾಗ) ಸಹಾಯಕ ನಿರ್ದೇಶಕರುಗಳು ಏರ್ಪಡಿಸಿ ವಿವರವಾದ ಫಲಿತಾಂಶದ ಪಟ್ಟಿಯನ್ನು ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ಜಿಲ್ಲೆ ಹಾಗೂ ಜಂಟಿ ನಿರ್ದೇಶಕರು (ಕ್ರೀಡೆ), ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೇಂದ್ರ ಕಛೇರಿ, ಬೆಂಗಳೂರು ಇವರಿಗೆ ಕಳುಹಿಸಿಕೊಡಬೇಕು.

ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳನ್ನು ಜಿಲ್ಲೆಯ ಜಿಲ್ಲಾಧಿಕಾರಿಗಳನ್ನು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಇವರ ಅವಗಾಹಣೆಗಾಗಿ ತಂದು ಅವರ ಸಲಹೆಗಳನ್ನು ಪಡೆದು ಸಮಿತಿಗಳನ್ನು ರಚಿಸಿಕೊಂಡು ಸ್ಪರ್ಧೆಗಳನ್ನು ಏರ್ಪಡಿಸತಕ್ಕದ್ದು. ಕ್ರೀಡಾಕೂಟದಲ್ಲಿ ಭಾಗವಹಿಸುವವರಿಗೆ ದಿನಭತ್ಯೆ ಮತ್ತು ಪ್ರಯಾಣಭತ್ಯೆ ಯೋಜನೆಯಡಿ ಒದಗಿಸಲಾಗಿರುವ ಅನುದಾನದಡಿಯಲ್ಲಿ ಭರಿಸತಕ್ಕದ್ದು. ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು ವಿವಿಧ ಜಿಲ್ಲೆಗಳಲ್ಲಿ ಗುಂಪುವಾರು ಆಯೋಜಿಸಲು ವಿಭಾಗಮಟ್ಟದ ಕೇಂದ್ರ ಸ್ಥಾನದಲ್ಲಿರುವ ಜಿಲ್ಲೆಗಳು ಕ್ರಮವಹಿಸತಕ್ಕದ್ದು ಎಂದು ಹೇಳಿದೆ.

ಸ್ಪರ್ಧೆಗಳ ವಿವರ

ಅಥ್ಲೆಟಿಕ್ ಸ್ಪರ್ಧೆಗಳು ( ಪುರುಷರಿಗೆ): 100 ಮೀ, 200 ಮೀ, 400ಮೀ, 800 ಮೀ, 1500 ಮೀ, 5000 ಮೀ ಓಟ, 10000 ಮೀ. ಓಟ. ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4x100 ಮೀ ರಿಲೇ, 4x400 ಮೀ. ರಿಲೇ. ಅಥ್ಲೆಟಿಕ್ ಸ್ಪರ್ಧೆಗಳು ( ಮಹಿಳೆಯರಿಗೆ): 100 ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ ಓಟ. ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4x100 ಮೀ ರಿಲೇ, 4x400 ಮೀ ರಿಲೇ. ಉಳಿದ ಎಲ್ಲಾ ಕ್ರೀಡೆಗಳಲ್ಲಿ ಮುಕ್ತ ವಿಭಾಗದಲ್ಲಿ ಮಾನ್ಯತೆ ಪಡೆದ ರಾಜ್ಯ ಕ್ರೀಡಾ ಸಂಸ್ಥೆಗಳ ಮಾರ್ಗಸೂಚಿಗಳನುಸಾರ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸತಕ್ಕದ್ದು.

ತಾಲ್ಲೂಕು ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋ-ಖೋ, ಕಬಡ್ಡಿ, ಥ್ರೋಬಾಲ್, ಯೋಗ. ಜಿಲ್ಲಾ ಮಟ್ಟದಲ್ಲಿ ಅಥ್ಲೆಟಿಕ್ಸ್‌, ಕಬಡ್ಡಿ, ಹಾಕಿ, ವಾಲಿಬಾಲ್, ಫುಟ್ಬಾಲ್, ಖೋ-ಖೋ, ಬ್ಯಾಸ್ಕೆಟ್ ಬಾಲ್, ಬ್ಯಾಡ್ಮಿಂಟನ್, ಹ್ಯಾಂಡ್ ಬಾಲ್, ಟೇಬಲ್ ಟೆನ್ನೀಸ್, ನೆಟ್‌ ಬಾಲ್, ಟೆನ್ನೀಸ್, ಥ್ರೋಬಾಲ್, ಬಾಲ್ ಬ್ಯಾಡ್ಮಿಂಟನ್, ಯೋಗ, ವಿಭಾಗ ಮಟ್ಟದಲ್ಲಿ ಈಜು, ಅಥ್ಲೆಟಿಕ್ಸ್, ಕಬಡ್ಡಿ, ಹಾಕಿ, ವಾಲಿಬಾಲ್, ಬ್ಯಾಸ್ಕೆಟ್ ಬಾಲ್, ಹ್ಯಾಂಡ್ ಬಾಲ್, ಫುಟ್ಬಾಲ್, ಖೋ-ಖೋ, ಈಜು, ನೆಟ್ ಬಾಲ್, ಟೆನ್ನೀಸ್, ಥ್ರೋಬಾಲ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನೀಸ್, ಬಾಲ್ ಬ್ಯಾಡ್ಮಿಂಟನ್, ಯೋಗ.

ರಾಜ್ಯ ಮಟ್ಟದಲ್ಲಿ ಅಥ್ಲೆಟಿಕ್ಸ್, ವಾಲಿಬಾಲ್, ಫುಟ್ಬಾಲ್, ಖೋ-ಖೋ, ಕಬಡ್ಡಿ, ಬ್ಯಾಸ್ಕೆಟ್ ಬಾಲ್, ಕುಸ್ತಿ, ಹಾಕಿ, ಹ್ಯಾಂಡ್ ಬಾಲ್, ಜೂಡೋ, ಈಜು, ಜಿಮ್ನಾಸ್ಟಿಕ್ಸ್, ಟೆನ್ನಿಸ್, ಬ್ಯಾಡ್ಮಿಂಟನ್, ಟೇಬಲ್ ಟೆನ್ನೀಸ್, ಆರ್ಚರಿ, ಸೈಕ್ಲಿಂಗ್, ಬಾಕ್ಸಿಂಗ್, ವುಷು, ಟೆಕ್ವಾಂಡೋ, ನೆಟ್ ಬಾಲ್, ಬ್ಯಾಡ್ಮಿಂಟನ್, ಭಾರ ಎತ್ತುವುದು, ಯೋಗ, ಫೆನ್ಸಿಂಗ್ (ಕತ್ತಿವರಸೆ), ಥ್ರೋಬಾಲ್, ಶೂಟಿಂಗ್.

ಮಾರ್ಗಸೂಚಿಗಳು

* ತಾಲ್ಲೂಕು ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ ಜಿಲ್ಲಾ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

* ಜಿಲ್ಲಾ ಮಟ್ಟದಲ್ಲಿ ನಡೆದ ಕ್ರೀಡೆಗಳಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳು ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನಪಡೆದ ಕ್ರೀಡಾಪಟುಗಳಿಗೆ ವಿಭಾಗ ಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.

* ವಿಭಾಗದಿಂದ ವಿಜೇತರನ್ನು ರಾಜ್ಯ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳಿಗೆ ಕಳುಹಿಸಿಕೊಡುವ ಜವಾಬ್ದಾರಿ ಸಂಬಂಧಪಟ್ಟ (ಕಲಬುರಗಿ, ಬೆಳಗಾವಿ, ಮೈಸೂರು, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ) ಉಪ ನಿರ್ದೇಶಕರು/ ಸಹಾಯಕ ನಿರ್ದೇಶಕರುಗಳದ್ದಾಗಿರುತ್ತದೆ.

* ವಿಭಾಗ ಮಟ್ಟದಿಂದ ರಾಜ್ಯ ಮಟ್ಟದಲ್ಲಿ ಭಾಗವಹಿಸುವ ಸ್ಪರ್ಧಿಗಳ ವಿವರಗಳನ್ನು ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ಇವರಿಗೆ ಕಳುಹಿಸುವುದು.

* ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸಿದವರನ್ನು ಮತ್ತು ಗುಂಪು ಸ್ಪರ್ಧೆಗಳಲ್ಲಿ (ರಿಲೇ ಸಹಿತ ) ಒಂದು ತಂಡವನ್ನು ಮಾತ್ರ ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಕಳುಹಿಸಿಕೊಡತಕ್ಕದ್ದು.

* ವಿವಿಧ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯದಲ್ಲಿ ವಾಸಿಸುವ ಕ್ರೀಡಾಪಟುಗಳು ಮಾತ್ರ ಅರ್ಹರಿರುತ್ತಾರೆ.

* ಕ್ರೀಡಾಕೂಟದಲ್ಲಿ ರಕ್ಷಣಾಪಡೆ, ಆರೆ ರಕ್ಷಣಾಪಡೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಲ್ಲ. ಒಬ್ಬ ಕ್ರೀಡಾಪಟು ಅಥವಾ ತಂಡ ಯಾವುದೇ ಜಿಲ್ಲೆಯಲ್ಲಿ ಒಂದು ಬಾರಿ ತಾಲ್ಲೂಕು ಅಥವಾ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ನಂತರ ಬೇರೆ ಯಾವುದೇ ಜಿಲ್ಲೆಯ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶವಿಲ್ಲ. ಅಂತಹ ಪ್ರಕರಣವೇನಾದರೂ ದಾಖಲಾದಲ್ಲಿ ಅಥವಾ ಗಮನಕ್ಕೆ ಬಂದಲ್ಲಿ ತೀವ್ರ ಶಿಸ್ತಿನ ಕ್ರಮ ಕೈಗೊಳ್ಳಲಾಗುವುದು.

* ವಿಭಾಗ ಮಟ್ಟದ ಆಯ್ಕೆಯಾದ ಕ್ರೀಡಾಪಟುಗಳ ವಿವರಗಳನ್ನು ಭಾವ ಚಿತ್ರಗಳೊಂದಿಗೆ ವಿಭಾಗ ಮಟ್ಟದ ಫಲಿತಾಂಶದೊಂದಿಗೆ ಲಗತ್ತಿಸಿ ಸಹಾಯಕ ನಿರ್ದೇಶಕರುಗಳು ದೃಡೀಕರಿಸಿ ಜಂಟಿ ನಿರ್ದೇಶಕರು (ಕ್ರೀಡೆ ), ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿಗೆ ಫಲಿತಾಂಶ ಪಟ್ಟಿಯನ್ನು ಮಾತ್ರ ಹಾಗೂ ಸಹಾಯಕ ನಿರ್ದೇಶಕರು, ಮೈಸೂರು ಜಿಲ್ಲೆ, ಮೈಸೂರು ಇವರಿಗೆ ಗುರುತಿನ ಚೀಟಿಯ ಮಾಹಿತಿಯನ್ನು ದ್ವಿಪತಿಗಳಲ್ಲಿ ದಿನಾಂಕ 06/10/2023ರ ಒಳಗಾಗಿ ಕಳುಹಿಸಿಕೊಡುವುದು.

* ಸೈಕ್ಲಿಂಗ್ ಕ್ರೀಡೆಯಲ್ಲಿ ಹೆಚ್ಚಿನ ಕ್ರಿಡಾಪಟುಗಳು ಭಾಗವಹಿಸಿ ದಸರಾ ಮೆರುಗನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಿಂದ ರಾಜ್ಯಮಟ್ಟಕ್ಕೆ ನೇರವಾಗಿ ಗರಿಷ್ಠ 25 ಕ್ರೀಡಾಪಟುಗಳನ್ನು (ಪುರುಷರು ಮತ್ತು ಮಹಿಳೆಯರು ಸೇರಿ) ತರಬೇತುದಾರರು ಮತ್ತು ವ್ಯವಸ್ಥಾಪಕರೊಂದಿಗೆ ನಿಯೋಜಿಸುವುದು. ಈ ಸಂಬಂಧ ವೆಚ್ಚವನ್ನು (ಪಯಾಣ ಭತ್ಯ/ ಸೈಕಲ್ ಲಗೇಜು) ಜಿಲ್ಲಾ ಪಂಚಾಯತ್ ಅನುದಾನದಲ್ಲಿ ಭರಿಸುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+